ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ, ಗೆಜೆಟ್ ಅಧಿಸೂಚನೆ ಪ್ರಕಟ

|
Google Oneindia Kannada News

ಬೆಂಗಳೂರು, ಜೂನ್ 12 : ಕರ್ನಾಟಕದ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ಸಿಗಲಿದೆ. ಸರ್ಕಾರ ಈ ಕುರಿತು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಇದರಿಂದಾಗಿ 2 ಮತ್ತು 4ನೇ ಶನಿವಾರ ಸರ್ಕಾರಿ ನೌಕರರಿಗೆ ರಜೆ ಸಿಕ್ಕಿದಂತಾಗಿದೆ.

ಬುಧವಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಶಿವಕುಮಾರ್ ಅವರು ಈ ಕುರಿತು ಆದೇಶ ಹೊರಡಿಸಿದರು. 4ನೇ ಶನಿವಾರ ಸರ್ಕಾರಿ ನೌಕರರಿಗೆ ರಜೆ ಇದೆ ಎಂದು ಗೆಜೆಟ್ ಅಧಿಸೂಚನೆ ಹೇಳಿದೆ.

ಸರ್ಕಾರಿ ನೌಕರರಿಗೆ ಡಬಲ್ ಧಮಾಕ: ಜಯಂತಿ ರಜೆಗೆ ಅಡ್ಡಿಯಿಲ್ಲಸರ್ಕಾರಿ ನೌಕರರಿಗೆ ಡಬಲ್ ಧಮಾಕ: ಜಯಂತಿ ರಜೆಗೆ ಅಡ್ಡಿಯಿಲ್ಲ

ಈ ವಿಷಯಕ್ಕೆ ಸಂಬಂಧಿಸಿದಂತೆ ಹಿಂದಿನ ಎಲ್ಲಾ ಆದೇಶಗಳನ್ನು ರದ್ದುಪಡಿಸುತ್ತಾ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಪ್ರತಿ ತಿಂಗಳ 4ನೇ ಶನಿವಾರವನ್ನು ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಎಂದು ಘೋಷಿಸಿದೆ ಎಂದು ಗೆಜೆಟ್ ಅಧಿಸೂಚನೆ ತಿಳಿಸಿದೆ.

ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರದಿಂದ ಬಂಪರ್ ಕೊಡುಗೆಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರದಿಂದ ಬಂಪರ್ ಕೊಡುಗೆ

Fourth Saturday holiday for Karnataka govt employees official notification

10 ದಿವಸಗಳ ರಜೆ : 4ನೇ ಶನಿವಾರ ರಜೆ ನೀಡಿರುವ ಕರ್ನಾಟಕ ಸರ್ಕಾರ 15 ದಿನಗಳಿದ್ದ ಸಾಂದರ್ಭಿಕ ರಜೆಯನ್ನು 10 ದಿನಗಳಿಗೆ ಕಡಿತಗೊಳಿಸಿದೆ. ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.

English summary
Government of Karnataka announced official gazette notification on Fourth Saturday holiday for govt employees. Govt employees will get 2nd and 4th Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X