Free Bus Pass: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಆ.6ರಂದು ಸರ್ಕಾರದ ಮಹತ್ವದ ಸಭೆ

ಬೆಂಗಳೂರು: ಸದಾ ಫಿಲ್ಡ್‌ನಲ್ಲಿ ಕೆಲಸ ಮಾಡುವ ಗ್ರಾಮೀಣ ಪತ್ರಕರ್ತರ ಪರವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಸಲ್ಲಿಸಿದ್ದ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಪ್ರಕ್ರಿಯೆಗಳನ್ನು ತ್ವರಿತಗೊಳಿಸಲು ಉಚಿತ ಬಸ್ ಪಾಸ್ ಕಮಿಟಿಯ ಸಭೆಯನ್ನು ಆಗಸ್ಟ್ 6ರಂದು ನಡೆಸಲು ಸರ್ಕಾರ ನಿರ್ಧರಿಸಿದೆ.

ಪತ್ರಕರ್ತರ ಪರವಾಗಿ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಹರ್ಷ ವ್ಯಕ್ತಪಡಿಸಿದೆ. ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆಯನ್ನು ಕೂಡಲೇ ಜಾರಿಗೆ ತರಬೇಕು. ಬಸ್ ಪಾಸ್ ಕಮಿಟಿಯ ಸಭೆಯನ್ನು ತಕ್ಷಣ ಕರೆಯಬೇಕು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಜುಲೈ 30ರಂದು ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸಿದ್ದರು.

Free Bus Pass

ಪ್ರಸ್ತುತ ಈ ಮನವಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದೇ ಆಗಸ್ಟ್ 6ರಂದು ಕಮಿಟಿ ಸಭೆ ನಡೆಸಲು ತೀರ್ಮಾನಿಸಿರುವುದು ಗ್ರಾಮೀಣ ಪತ್ರಕರ್ತರಿಗೆ ಆಶಾದಾಯಕ ಬೆಳವಣಿಗೆಯಾಗಿದೆ.

ಸಭೆಯಲ್ಲಿ ಅಗತ್ಯ ನಿರ್ಧಾರ ಪ್ರಕಟಿಸುವ ವಿಶ್ವಾಸ

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಶೀಘ್ರದಲ್ಲೇ ಅನುಷ್ಠಾನಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಮಿಟಿ ಸಭೆಯಲ್ಲಿ ಅಗತ್ಯ ನಿರ್ಧಾರಗಳನ್ನು ಕೈಗೊಂಡು, ಅರ್ಹ ಪತ್ರಕರ್ತರಿಗೆ ಯಾವುದೇ ವಿಳಂಬವಿಲ್ಲದೆ ಬಸ್ ಪಾಸ್ ವಿತರಣೆ ಪ್ರಕ್ರಿಯೆ ಆರಂಭಿಸಬೇಕು ಎಂದು ಅವರು ಒತ್ತಾಯಿಸಿದರು.

ಪತ್ರಕರ್ತರ ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರ ಸ್ಪಂದಿಸಿರುವುದನ್ನು ಸ್ವಾಗತಿಸಿರುವ ಕೆಯುಡಬ್ಲ್ಯೂಜೆ, ಗ್ರಾಮೀಣ ಪತ್ರಕರ್ತರ ಬಹುದಿನಗಳ ಕನಸಾಗಿರುವ ಈ ಯೋಜನೆ ಶೀಘ್ರದಲ್ಲೇ ಸಂಪೂರ್ಣವಾಗಿ ಜಾರಿಯಾಗಲಿದೆ ಎಂಬ ನಿರೀಕ್ಷೆ ಹೊಂದಿದೆ ಎಂದು ಅವರು ತಿಳಿಸಿದರು.

ಉಚಿತ ಬಸ್ ಪಾಸ್ ದೊರೆತರೆ ಗ್ರಾಮೀಣ ಭಾಗಗಳಲ್ಲಿ ಫಿಲ್ಡ್‌ನಲ್ಲಿ ನಿತ್ಯ ಸಂಚರಿಸಿ ಕೆಲಸ ಮಾಡುವ, ಸುದ್ದಿ ಹೆಕ್ಕಿ ತರುವ ಪತ್ರಕರ್ತರಿಗೆ ಸಾಕಷ್ಟು ಪ್ರಯೋಜನವಾಗಲಿದೆ. ಅವರ ಆರ್ಥಿಕತೆಯೂ ಯೋಜನೆ ಜಾರಿಯಿಂದ ಸುಧಾರಿಸುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+