Free Bus Travel For Women: ಕರ್ನಾಟಕದಾದ್ಯಂತ ಜೂನ್ 1ರಿಂದ ಎಲ್ಲ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಪ್ರಯಾಣ ಘೋಷಣೆ
ಬೆಂಗಳೂರು, ಮೇ 30: ಕರ್ನಾಟಕದ ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಘೋಷಣೆ ಮಾಡಿದ್ದಾರೆ.
ರಾಜ್ಯದ ಎಲ್ಲ ಮಹಿಳೆಯರಿಗೆ ಇನ್ನು ಉಚಿತ ಪ್ರಯಾಣ ಘೋಷಣೆ ಬಗ್ಗೆ ಮಂಗಳವಾರ ಸಭೆ ನಡೆಸಿದ ಸಾರಿಗೆ ಖಾತೆ ಸಚಿವ ರಾಮಲಿಂಗರೆಡ್ಡಿ ಅವರು ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಬಗ್ಗೆ ಘೋಷಣೆ ಮಾಡಿ ರಾಜ್ಯದಲ್ಲಿ ಜೂನ್ 1ರಿಂದ ರಾಜ್ಯದ ಎಲ್ಲ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದಕ್ಕೆ ಯಾವುದೇ ಷರತ್ತು ಅನ್ವಯವಾಗುವುದಿಲ್ಲ. ಇದು ಸಂಪೂರ್ಣ ಉಚಿತ ಎಂದು ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ ಸಾರಿಗೆ ಅಧಿಕಾರಿಗಳು ಮೂರ್ನಾಲ್ಕು ಆಯ್ಕೆಗಳನ್ನ ಕೊಟ್ಟಿದ್ದಾರೆ. ಕಂಡಿಷನ್ ಬಗ್ಗೆ ಸರ್ಕಾರ ಹೇಳಲಿ ಆದ್ರೆ ಎಲ್ಲಾ ಮಹಿಳೆಯರಿಗೆ ಉಚಿತ ಅನ್ನೋದು ಪ್ರಣಾಳಿಕೆಯಾಗಿತ್ತು. ನಾಳೆ ಸಚಿವ ಸಂಪುಟದಲ್ಲಿ ಸಾರಿಗೆ ಇಲಾಖೆ ವರದಿ ಕೊಡುತ್ತೇವೆ. ನಾಳೆ ಉಚಿತ ಬಸ್ ಪ್ರಯಾಣ ಗ್ಯಾರಂಟಿ ಜಾರಿಗೆ ಬರೋದ್ರಲ್ಲಿ ಅನುಮಾನವೇ ಇಲ್ಲ ಎಂದು ತಿಳಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ 5 ಗ್ಯಾರಂಟಿಗಳಲ್ಲಿ ಒಂದಾಗಿರುವ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಜಾರಿಗೆ ತರುವ ಉದ್ದೇಶದಿಂದ ಸಾರಿಗೆ ಸಚಿವ ಡಾ ರಾಮಲಿಂಗಾರೆಡ್ಡಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಗ್ಯಾರಂಟಿಯನ್ನು ಜಾರಿಗೊಳಿಸುವ ಬಗ್ಗೆ ರೂಪುರೇಷೆಗಳನ್ನು ಚರ್ಚಿಸಿ ಈ ನಿರ್ಧಾರ ಹೇಳಿದರು.
ಸಭೆಯಲ್ಲಿ ಸಾರಿಗೆ ಇಲಾಖೆ ಕಾರ್ಯದರ್ಶಿ ಕಾರ್ಯದರ್ಶಿ ಎನ್ ವಿ ಪ್ರಸಾದ್, ಬಿಎಂಟಿಸಿ ಮತ್ತು ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ, ಕೆಕೆಆರ್ ಟಿ ಸಿ ಎಂಡಿ ರಾಚಪ್ಪ ಹಾಗೂ ವಾಯುವ್ಯ ಸಾರಿಗೆ ಎಂಡಿ ಭರತ್ ಹಾಗೂ ನಾಲ್ಕು ನಿಗಮಗಳ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

ಸಚಿವರು ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ನಮ್ಮ ಪ್ರಣಾಳಿಕೆಯಲ್ಲಿ ಎಪಿಎಲ್, ಬಿಪಿಎಲ್ ಕಾರ್ಡ್ದಾರರು ಎಂದು ಹೇಳಿಲ್ಲ. ಹಾಗಾಗಿ ರಾಜ್ಯಾದ್ಯಂತ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಘೋಷಣೆ ಮಾಡಿದರು. ಇದರೊಂದಿಗೆ ಕಾಂಗ್ರೆಸ್ನ 5 ಗ್ಯಾರೆಂಟಿಗಳಲ್ಲಿ ಒಂದು ಈಡೇರಿದಂತಾಗಿದೆ.
ಕೊರೋನಾ ಸಂದರ್ಭದಲ್ಲಾದ ನಷ್ಟದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ನಮ್ಮ ಸಾರಿಗೆ ಇಲಾಖೆ ದೇಶದಲ್ಲೇ ಪ್ರತಿಷ್ಠಿತ ಸಂಸ್ಥೆಯಾಗಿದೆ. 4 ಸಾರಿಗೆ ನಿಗಮಗಳಿಗೆ 350ಕ್ಕೂ ಹೆಚ್ಚು ಪ್ರಶಸ್ತಿಗಳು ಬಂದಿವೆ. 4 ಸಾರಿಗೆ ನಿಗಮಗಳಲ್ಲಿ 240 ಘಟಕಗಳು ಕಾರ್ಯನಿರ್ವಹಣೆ ಮಾಡುತ್ತಿವೆ. 23,978 ವಾಹನಗಳಿವೆ, 1,04,450 ಕ್ಕೂ ಹೆಚ್ಚು ಸಿಬ್ಬಂದಿಗಳಿದ್ದಾರೆ. ನಿತ್ಯ ರಾಜ್ಯಾದ್ಯಂತ 82,51 ಲಕ್ಷ ಪ್ರಯಾಣಿಕರು ಓಡಾಡುತ್ತಾರೆ. ನಾಲ್ಕು ನಿಗಮಗಳ ನಿತ್ಯದ ಒಟ್ಟು ಆದಾಯ 2,31,332 ಲಕ್ಷ ರೂ. ಇದೆ ಎಂದು ತಿಳಿಸಿದ್ದಾರೆ.












Click it and Unblock the Notifications