Free Bus: ಮಹಿಳೆಯರಿಗೆ ಮಾತ್ರವಲ್ಲ, ಪುರುಷರಿಗೂ ಉಚಿತ ಬಸ್ ಪ್ರಯಾಣ: ಮಹತ್ವದ ಘೋಷಣೆ
ಕೊಪ್ಪಳ, ಜುಲೈ 07: 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನ ಜಾರಿಗೊಳಿಸುವುದಾಗಿ ರಾಜ್ಯದ ಜನತೆಗೆ ಭರವಸೆಯನ್ನ ನೀಡಿತ್ತು. ಅದರಂತೆ ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದ ಬಳಿಕ ಸರ್ಕಾರ ರಚನೆಯ ನಂತರ ಹಂತ ಹಂತವಾಗಿ ಐದು ಗ್ಯಾರಂಟಿ ಯೋಜನೆಗಳನ್ನ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ.
ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಯಡಿ ರಾಜ್ಯದ ಮಹಿಳೆಯರಿಗೆ ರಾಜ್ಯಾಧ್ಯಂತ ಉಚಿತ ಬಸ್ ಪ್ರಯಾಣದ ಯೋಜನೆಯನ್ನ ಜಾರಿಗೊಳಿಸಿದ್ದು, ಈ ಯೋಜನೆ ಕೇವಲ ಮಹಿಳೆಯವರಿಗೆ ಮಾತ್ರವಲ್ಲದೇ ಪುರುಷರಿಗೂ ಉಚಿತ ಬಸ್ ಪ್ರಯಾಣವನ್ನ ಕಲ್ಪಿಸಿಕೊಡಬೇಕು ಎಂದು ಪುರುಷರು ಬೇಡಿಕೆ ಇಟ್ಟಿದ್ದರು. ಇದೀಗ ರಾಜ್ಯದ ಮಹಿಳೆಯವರಿಗೆ ಮಾತ್ರವಲ್ಲದೇ ಪುರುಷರಿಗೂ ಉಚಿತ ಬಸ್ ಪ್ರಯಾಣದ ಬಗ್ಗೆ ಮಹತ್ವದ ಘೋಷಣೆಯೊಂದು ಹೊರಬಿದ್ದಿದ್ದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಹಾಗೂ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಕೊಪ್ಪಳದ ಯಲಬುರ್ಗಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಸದ್ಯ ಮಹಿಳೆಯವರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದೆ. ಆರ್ಥಿಕ ಪರಿಸ್ಥಿತಿ ಸುಧಾರಣೆಯಾದರೆ ರಾಜ್ಯದ ಗಂಡು ಮಕ್ಕಳಿಗೂ ಉಚಿತ ಬಸ್ ಪ್ರಯಾಣ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಸದ್ಯ ರಾಜ್ಯದ ಮಹಿಳೆಯವರಿಗೆ ಉಚಿತ ಬಸ್ ಪ್ರಯಾಣವನ್ನ ಕಲ್ಪಿಸಿದೆ. ಹೆಣ್ಣು ಮಕ್ಕಳಿಗೆ ಎರಡು ಸಾವಿರ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಣೆಯಾದರೆ ಗಂಡು ಮಕ್ಕಳಿಗೂ ಉಚಿತ ಬಸ್ ಪ್ರಯಾಣ ನೀಡಲು ಚಿಂತನೆ ನಡೆಸಲಾಗುತ್ತದೆ ಎಂದು ಹೇಳಿದರು.
ನಮ್ಮ ಸರ್ಕಾರದಲ್ಲಿ ಹಣ ಕಡಿಮೆ ಇದೆ ಎಂದು ಹೇಳಿದವರು ಯಾರು? ನಮ್ಮ ಸರ್ಕಾರದಲ್ಲಿ ಅಭಿವೃದ್ದಿಗೆ ಹಿನ್ನಡೆಯಾಗಿಲ್ಲ. ಈಗಾಗಲೇ ರಾಜ್ಯದ ಮಹಿಳೆಯರಿಗೆ 2000 ರೂಪಾಯಿ ನೀಡುತ್ತಿದ್ದೇವೆ. ನಮ್ಮ ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ. ಅಲ್ಲಿ ನಾನು ತಮಾಷೆಯಾಗಿ ಮಾತಾಡಿದೆ ಎಂದು ಬಸವರಾಜ ರಾಯರೆಡ್ಡಿ ಅವರು ಹೇಳಿದರು.
ಕೆಲವೊಂದು ವಿಷಯಗಳನ್ನು ನಾನು ಕ್ಯಾಸುವಲ್ ಇಲ್ಲವೇ ತಮಾಷೆಯಾಗಿ ಹೇಳಿದ್ದೇನೆ. ಆದರೆ, ನನ್ನ ಹೇಳಿಕೆಯನ್ನು ಮಾಧ್ಯಮದಲ್ಲಿ ನಕಾರಾತ್ಮಕವಾಗಿ ಬಿಂಬಿಸಬೇಡಿ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದರು. ಕೆಲವೊಂದು ವಿಷಯಗಳನ್ನು ನಾನು ತಮಾಷೆ ಯಾಗಿ ಮಾತನಾಡುವ ಸಂದರ್ಭವನ್ನು ಅರ್ಥಮಾಡಿಕೊಳ್ಳದೇ ನಕಾರಾತ್ಮಕ ವಾಗಿ ಬರೆದರೇ ಏನು ಮಾಡುವದಕ್ಕೆ ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಗ್ರಾಮೀಣ ರಸ್ತೆಗಳಿಗೆ ಆದ್ಯತೆ ನೀಡಲಾಗುವುದು. ನಮ್ಮ ಸರಕಾರ ಇನ್ನು ಮೂರು ವರ್ಷ ಅಧಿಕಾರ ಅವಧಿ ಇದ್ದು ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲ್ಲಿದ್ದಾರೆ. ಈ ಬಗ್ಗೆ ಯಾರಿಗೂ ಅನುಮಾನ ಬೇಡ.
ಅಲ್ಲದೆ, ಅಭಿವೃದ್ಧಿ ಕೆಲಸಗಳಿಗೆ ಸರಕಾರದಲ್ಲಿ ಹಣದ ಕೊರತೆಯಿಲ್ಲ .ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಕ್ಕೆ ಸಾಧ್ಯವಿಲ್ಲ ಎಂದು ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು.












Click it and Unblock the Notifications