1.25 ಲಕ್ಷ ಹುಡುಗಿಯರಿಗೆ ಉಚಿತ ಪದವಿ ಶಿಕ್ಷಣ
ಬೆಂಗಳೂರು, ಆ.27: ಕರ್ನಾಟಕ ರಾಜ್ಯ ಸರ್ಕಾರವು 1.25 ಲಕ್ಷ ಹುಡುಗಿಯರಿಗೆ ಉಚಿತವಾಗಿ ಪದವಿ ಶಿಕ್ಷಣ ನೀಡಲು ನಿರ್ಧರಿಸಿದೆ. ಇತ್ತೀಚೆಗೆ ನಡೆದ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ.
ಹೊಸ ನೀತಿಯ ಪ್ರಕಾರ ಹುಡುಗಿಯರು ಬೋಧನಾ ಶುಲ್ಕ ಮತ್ತು ಪ್ರಯೋಗಾಲಯ ಶುಲ್ಕ ತುಂಬಬೇಕಾಗಿಲ್ಲ. ಮೊದಲು ಸರ್ಕಾರಿ ಕಾಲೇಜಿನಲ್ಲಿ ಅದ್ಯಯನ ಮಾಡಿದವರು ಮಾತ್ರ ಯೋಜನೆ ವ್ಯಾಪ್ತಿಗೆ ಒಳಪಡುತ್ತಿದ್ದರು.

ಆದರೆ ಈಗ ಅರೆಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿನಿಯರಿಗೂ ಉಚಿತ ಪದವಿ ಶಿಕ್ಷಣ ಭಾಗ್ಯ ದೊರೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಯೋಜನೆಗೆ ಪ್ರತಿ ವರ್ಷ 25 ಕೋಟಿ ರೂ. ವೆಚ್ಚವಾಗಲಿದೆ. ಅಲ್ಲದೇ ಉಪನ್ಯಾಸಕರ ಸಮಸ್ಯೆ ಕೊನೆಗಾಣಿಸಲು ಕ್ರಮ ತೆಗೆದುಕೊಳ್ಳಲಾಗಿದ್ದು ಸೆಪ್ಟೆಂಬರ್ 15ರೊಳಗೆ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮೂಲಕ 1,298 ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


Click it and Unblock the Notifications
