ಗೃಹಲಕ್ಷ್ಮಿಗೆ ಪರ್ಯಾಯವಾಗಿ ಹೊಸ ಘೋಷಣೆ! ಗ್ರಾಮೀಣ ಮಹಿಳೆಯರಿಗೆ ತಲಾ 2 ಉಚಿತ ಹಸು: HDK ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಮಹಿಳೆಯರಿಗೆ ತಲಾ ಎರಡು ಹಸುಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ನೀಡಲಾಗುತ್ತಿರುವ ಮಾಸಿಕ 2,000 ರೂಪಾಯಿ ನಗದು ನೆರವಿಗೆ ಪರ್ಯಾಯವಾಗಿ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗುವುದು ಎಂದು ಅವರು ಹೇಳಿದ್ದಾರೆ.

Free Cows Scheme HDK Promises 2 Free Cows to Every Rural Woman If NDA Comes to Power in Karnataka in 2028

ಪ್ರತಿ ಗ್ರಾಮೀಣ ಮಹಿಳೆಗೆ ಎರಡು ಹಸುಗಳು

2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ರಚನೆಯಾದರೆ ಗ್ರಾಮೀಣ ಕುಟುಂಬಗಳ ಮಹಿಳೆಯರಿಗೆ ತಲಾ ಎರಡು ಹಸುಗಳನ್ನು ಉಚಿತವಾಗಿ ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಮಹಿಳೆಯರಿಗೆ ಅವಕಾಶ ಕಲ್ಪಿಸುವ ಮೂಲಕ ನಿರಂತರ ಆದಾಯ ಗಳಿಸಲು ನೆರವಾಗುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಮಹಿಳೆಯರು ಹಾಲು ಉತ್ಪಾದನೆ ಮತ್ತು ಮಾರಾಟದ ಮೂಲಕ ಸ್ವಂತ ಆದಾಯ ಗಳಿಸಬಹುದು. ಇದರಿಂದ ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಸಬಲರಾಗುವುದರ ಜೊತೆಗೆ ಕುಟುಂಬದ ಆರ್ಥಿಕ ನಿರ್ವಹಣೆಯಲ್ಲಿಯೂ ಪ್ರಮುಖ ಪಾತ್ರ ವಹಿಸಲು ಸಾಧ್ಯವಾಗಲಿದೆ ಎಂಬುದು ಅವರ ಅಭಿಪ್ರಾಯವಾಗಿದೆ.

ರೈತರಿಗೆ ಕೊಡಲು ದುಡ್ಡಿಲ್ಲ, ಭಾರತ್ ಜೋಡೋ ಸಂಘಗಳಿಗೆ ₹1,000 ಕೋಟಿ! ಕುಮಾರಸ್ವಾಮಿ ಕಿಡಿ
ರೈತರಿಗೆ ಕೊಡಲು ದುಡ್ಡಿಲ್ಲ, ಭಾರತ್ ಜೋಡೋ ಸಂಘಗಳಿಗೆ ₹1,000 ಕೋಟಿ! ಕುಮಾರಸ್ವಾಮಿ ಕಿಡಿ

ಕಾಂಗ್ರೆಸ್‌ನ 2,000 ರೂ. ಗೃಹಲಕ್ಷ್ಮಿ ಯೋಜನೆಗೆ ಟೀಕೆ

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆಯೂ ಎಚ್.ಡಿ. ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಜನರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಭರವಸೆಗಳನ್ನು ನೀಡುತ್ತಿವೆ. ಕಾಂಗ್ರೆಸ್ ಮುಂದೆ ಇನ್ನೆಷ್ಟು ಹೊಸ ಗ್ಯಾರಂಟಿಗಳನ್ನು ಘೋಷಿಸಲಿದೆ ಎಂಬುದು ತಿಳಿದಿಲ್ಲ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಮಹಿಳೆಯರಿಗೆ ಪ್ರತಿ ತಿಂಗಳು ಹಣ ನೀಡುವುದಕ್ಕಿಂತ ಸ್ವಂತ ಉದ್ಯೋಗ ಮತ್ತು ಆದಾಯ ಗಳಿಸುವ ಅವಕಾಶ ಕಲ್ಪಿಸುವುದು ಹೆಚ್ಚು ಪರಿಣಾಮಕಾರಿ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟಿದ್ದಾರೆ.

2028ರ ಚುನಾವಣೆ: ಕೊನೆಗೂ ರಾಜ್ಯ ರಾಜಕಾರಣಕ್ಕೆ ಎಚ್‌.ಡಿ. ಕುಮಾರಸ್ವಾಮಿ ರೀ-ಎಂಟ್ರಿ? ಹೆಚ್‌ಡಿಕೆ ಹೇಳಿದ್ದೇನು?
2028ರ ಚುನಾವಣೆ: ಕೊನೆಗೂ ರಾಜ್ಯ ರಾಜಕಾರಣಕ್ಕೆ ಎಚ್‌.ಡಿ. ಕುಮಾರಸ್ವಾಮಿ ರೀ-ಎಂಟ್ರಿ? ಹೆಚ್‌ಡಿಕೆ ಹೇಳಿದ್ದೇನು?

ಮಹಿಳೆಯರು ಕೈಚಾಚುವ ಪರಿಸ್ಥಿತಿ ಬರಬಾರದು

ಮಹಿಳೆಯರು ತಮ್ಮ ಆರ್ಥಿಕ ಅಗತ್ಯಗಳಿಗಾಗಿ ಬೇರೆಯವರನ್ನು ಅವಲಂಬಿಸುವ ಪರಿಸ್ಥಿತಿ ಇರಬಾರದು. ಬದಲಾಗಿ ಸ್ವಂತ ದುಡಿಮೆಯಿಂದ ಆದಾಯ ಗಳಿಸಿ ಸ್ವಾವಲಂಬಿ ಜೀವನ ನಡೆಸುವಂತಾಗಬೇಕು ಎಂಬುದು ತಮ್ಮ ಉದ್ದೇಶ ಎಂದು ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಎರಡು ಹಸುಗಳನ್ನು ನೀಡುವ ಮೂಲಕ ಗ್ರಾಮೀಣ ಮಹಿಳೆಯರಿಗೆ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಅವಕಾಶ ಸಿಗಲಿದೆ. ಇದರಿಂದ ಕುಟುಂಬದ ಆದಾಯ ಹೆಚ್ಚುವುದರ ಜೊತೆಗೆ ಗ್ರಾಮೀಣ ಆರ್ಥಿಕತೆಯ ಬೆಳವಣಿಗೆಗೂ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ. ಆದರೆ, ಈ ಘೋಷಣೆ 2028ರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಜಾರಿಗೆ ತರಲು ಉದ್ದೇಶಿಸಿರುವ ಭರವಸೆಯಾಗಿದ್ದು, ಯೋಜನೆಯ ಅರ್ಹತೆ, ಅನುಷ್ಠಾನ ಮತ್ತು ಇತರ ಮಾರ್ಗಸೂಚಿಗಳ ಬಗ್ಗೆ ಇನ್ನೂ ಹೆಚ್ಚಿನ ವಿವರಗಳು ಬಹಿರಂಗವಾಗಿಲ್ಲ.

ಹಸು ಭಾಗ್ಯ ಘೋಷಣೆಗೆ ಎಸ್.ಟಿ. ಸೋಮಶೇಖರ್ ವ್ಯಂಗ್ಯ

ಎಚ್.ಡಿ. ಕುಮಾರಸ್ವಾಮಿ ಅವರ ಹಸು ಭಾಗ್ಯ ಘೋಷಣೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ವ್ಯಂಗ್ಯವಾಡಿದ್ದಾರೆ. "ಅಟ್‌ಲೀಸ್ಟ್ ಅದನ್ನಾದರೂ ಮಾಡಿದ್ದಾರಲ್ಲ ಇವರು" ಎಂದು ಹೇಳಿದ್ದಾರೆ. ನನ್ನ ಕ್ಷೇತ್ರದಲ್ಲಿ ಈಗಾಗಲೇ 15 ಸಾವಿರ ಮಹಿಳೆಯರು ಹಾಲು ಉತ್ಪಾದನೆಯಲ್ಲಿ ತೊಡಗಿಸಿಕೊಂಡಿದ್ದಾರೆ. 93 ಹಾಲು ಉತ್ಪಾದಕರ ಸಹಕಾರ ಸಂಘಗಳಿವೆ. ಅವುಗಳ ಅಭಿವೃದ್ಧಿಗಾಗಿ ನಾನೂ ಅನುದಾನ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಹಸು ಸಾಕಾಣಿಕೆಯಲ್ಲಿರುವ ಸವಾಲುಗಳ ಬಗ್ಗೆಯೂ ಮಾತನಾಡಿದ್ದಾರೆ. ಒಂದು ಹಸುವನ್ನು ಸಾಕಿ ನಿರ್ವಹಣೆ ಮಾಡುವುದು ಇಂದಿನ ದಿನಗಳಲ್ಲಿ ಸುಲಭದ ಕೆಲಸವಲ್ಲ. ಹಸು ಸಾಕಲು, ಮೇವು ಒದಗಿಸಲು ಸಾಕಷ್ಟು ಖರ್ಚು ಮಾಡಬೇಕಾಗುತ್ತದೆ. ಪ್ರತಿ ಲೀಟರ್ ಹಾಲಿಗೆ 15 ರೂಪಾಯಿ ಖರ್ಚು ಬರುತ್ತದೆ. ಸರ್ಕಾರದಿಂದ 7 ರೂಪಾಯಿ ಪ್ರೋತ್ಸಾಹಧನ ನೀಡುತ್ತಿದ್ದರೂ ರೈತರಿಗೆ ಹಸು ನಿರ್ವಹಣೆ ಮಾಡುವುದು ಕಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.

ಹಸು ಖರೀದಿಸುವುದು ಮಾತ್ರವಲ್ಲ, ಅದರ ನಿರಂತರ ನಿರ್ವಹಣೆ, ಮೇವು ಮತ್ತು ಇತರ ಖರ್ಚುಗಳ ಬಗ್ಗೆಯೂ ಗಮನಹರಿಸಬೇಕಾಗುತ್ತದೆ. ಹೈನುಗಾರಿಕೆ ಮಾಡುವ ರೈತರ ಸಮಸ್ಯೆಗಳನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಹೀಗಿರುವಾಗ ಈ ವಿಚಾರವನ್ನು ರಾಜಕೀಯ ಉದ್ದೇಶಕ್ಕಾಗಿ ಟೀಕಿಸುವುದು ಸರಿಯಲ್ಲ ಎಂದು ಎಸ್.ಟಿ. ಸೋಮಶೇಖರ್ ಅಭಿಪ್ರಾಯಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+