ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಚಿತ ವಿದ್ಯುತ್ ಯೋಜನೆ ತ್ವರಿತ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ್ ಪೂಜಾರಿ ಸೂಚನೆ

|
Google Oneindia Kannada News

ಬೆಂಗಳೂರು,ಡಿಸೆಂಬರ್ 6: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಯೋಜನೆಯ ಅನುಷ್ಠಾನ ತ್ವರಿತಗೊಳಿಸುವಂತೆ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದರು.

ಈ ಕುರಿತು ವಿಕಾಸಸೌಧದಲ್ಲಿ ಮಂಗಳವಾರ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಕ್ಕೆ ಪ್ರತಿ ತಿಂಗಳು 75 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ಯೋಜನೆಯ ವಾಸ್ತವಿಕ ಅನುಷ್ಠಾನ ಸರ್ಕಾರದ ಗುರಿಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಯೋಜನೆ ಜಾರಿಗೆ ಎದುರಾಗುವ ಅಡೆತಡೆ ನಿವಾರಿಸಲು ನಿಯಮಗಳನ್ನು ಸರಳೀಕರಿಸಬೇಕು ಎಂದು ಸೂಚಿಸಿದರು.

PM Kisan 13th Installment : ಪಿಎಂ ಕಿಸಾನ್‌ ಯೋಜನೆ: 13ನೇ ಕಂತು ಡಿಸೆಂಬರ್‌ನಲ್ಲಿ ಬಿಡುಗಡೆ PM Kisan 13th Installment : ಪಿಎಂ ಕಿಸಾನ್‌ ಯೋಜನೆ: 13ನೇ ಕಂತು ಡಿಸೆಂಬರ್‌ನಲ್ಲಿ ಬಿಡುಗಡೆ

ಡಿಬಿಟಿ ಹೊರತುಪಡಿಸಿ ಸರಳ ಮಾರ್ಗಗಳಲ್ಲಿ ಯೋಜನೆ ಜಾರಿ ಮಾಡಿ. ಇದಕ್ಕೆ ಪರ್ಯಾಯ(ಬದಲೀ) ವ್ಯವಸ್ಥೆ ರೂಪಿಸುವಂತೆ ಸಚಿವರು ಸೂಚನೆ ನೀಡಿದರು.

free electricity scheme be implemented soon says kota srinivas pujari

ಎಸ್ಕಾಂಗಳಲ್ಲಿ ಬಾಕಿ ಉಳಿದಿರುವ ಫಲಾನುಭವಿ ಕುಟುಂಬಗಳ ವಿದ್ಯುತ್ ಶುಲ್ಕ ವಸೂಲಿ ಮತ್ತು ಪರಿಹಾರ ಕ್ರಮಗಳಿಗೆ ಮಾರ್ಗೋಪಾಯ ಕಂಡುಕೊಳ್ಳಬೇಕು,ಆದರೆ ಯೋಜನೆಯ ತ್ವರಿತ ಅನುಷ್ಠಾನ ಇಂದಿನ ಅಗತ್ಯ. ಈ ಯೋಜನೆಗೆ ವಾರ್ಷಿಕ 800 ಕೋಟಿ ರೂ. ಲಭ್ಯವಾಗುತ್ತಿದೆ. ಮುಂದೆ ಇದು ಏರಿಕೆ ಆಗಲಿದೆ ಎಂದು ಸಚಿವ ಶ್ರೀನಿವಾಸ ಪೂಜಾರಿ ಹೇಳಿದರು.

ಸಭೆಯಲ್ಲಿ ಇಂಧನ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಕುಮಾರ್ ನಾಯಕ್ ಜಿ, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ. ಕೆ ರಾಕೇಶ್ ಕುಮಾರ್, ಸಲಹೆಗಾರ ಡಾ॥ ಇ ವಂಕಟಯ್ಯ,ಇ ಆಡಳಿತ ಇಲಾಖೆ ನಿರ್ದೇಶಕ ದಿಲೀಶ್ ಸಾಮಿ ಹಾಗೂ ಇಂಧನ ಇಲಾಖೆಯ ಉನ್ನತಾಧಿಕಾರಿಗಳು ಭಾಗವಹಿಸಿದ್ದರು.

English summary
srinivas poojary instructs for quick implementation of free electricity scheme,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X