Get Updates
Get notified of breaking news, exclusive insights, and must-see stories!

Free Bus Pass: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್, ಮಾರ್ಗಸೂಚಿ

ಬೆಂಗಳೂರು, ಸೆಪ್ಟೆಂಬರ್ 26: ಕರ್ನಾಟಕ ಸರ್ಕಾರ ಗ್ರಾಮೀಣ ಭಾಗದ ಪತ್ರಕರ್ತರಿಗೆ ಸಿಹಿಸುದ್ದಿ ನೀಡಿದೆ. 2024-25ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್‌ ಪಾಸ್ ವಿತರಿಸುವ ಬಗ್ಗೆ ಆದೇಶವನ್ನು ಹೊರಡಿಸಲಾಗಿದೆ. ಈ ಪಾಸು ಪಡೆಯಲು ಮಾರ್ಗಸೂಚಿಗಳನ್ನು ಸಹ ಬಿಡುಗಡೆ ಮಾಡಲಾಗಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎಂ. ಜಿಸಿಂತ ಸರ್ಕಾರದ ಅಧೀನ ಕಾರ್ಯದರ್ಶಿ, ಕನ್ನಡ ಸಂಸ್ಕೃತಿ ಮತ್ತು ವಾರ್ತಾ ಇಲಾಖೆ (ವಾರ್ತಾ ಇಲಾಖೆ) ಆದೇಶವನ್ನು ಹೊರಡಿಸಿದ್ದಾರೆ. ಆದೇಶದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಡಿ 2024-25ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆ 431ರಲ್ಲಿ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪುಯಾಣಿಸಲು ಬಸ್ ಪಾಸ್‌ ಸೌಲಭ್ಯವನ್ನು ಪ್ರಾರಂಭಿಸಲಾಗುವುದು ಎಂದು ಘೋಷಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

Free Government Bus Pass For Rural Journalists Guidelines And Benefits

ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ/ ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್‌ ಪಾಸ್‌ ಸೌಲಭ್ಯವನ್ನು ಅನುಷ್ಠಾನಗೊಳಿಸುವುದಕ್ಕೆ ಸಂಬಂಧಿಸಿದಂತೆ ದಿನಾಂಕ 21/03/2024ರಲ್ಲಿದ್ದಂತೆ ಮಾಧ್ಯಮ ಪಟ್ಟಿಯಲ್ಲಿರುವ ಮುದ್ರಣ/ ವಿದ್ಯುನ್ಮಾನ ಮಾಧ್ಯಮಗಳ ಸಂಖ್ಯೆಯನ್ನಾಧರಿಸಿ, ರಾಜ್ಯಾದ್ಯಂತ ಒಟ್ಟು 5222 ಪತ್ರಕರ್ತರಿಗೆ ಈ ಯೋಜನೆಯನ್ನು ಒದಗಿಸಲು, ಕೆಎಸ್‌ಆರ್‌ಟಿಸಿ ಸಂಸ್ಥೆಯು ನೀಡಿರುವ ಅಂದಾಜಿನಂತೆ, ಪತಿ ಪಾಸುದಾರರಿಗೆ ಪ್ರತಿ ತಿಂಗಳಿಗೆ ರೂ. 2500 ಗಳಾಗಬಹುದೆಂದು ವೆಚ್ಚವನ್ನು ಅಂದಾಜಿಸಿಲಾಗಿದೆ ಎಂದು ತಿಳಿಸಲಾಗಿದೆ.

ಸದರಿ ಲೆಕ್ಕಚಾರದಂತೆ ಪ್ರತಿ ತಿಂಗಳಿಗೆ ರೂ. 1,30,55,000 ಹಾಗೂ ವಾರ್ಷಿಕ ಅಂದಾಜು ಅನುದಾನ ರೂ.15,66,60,000ಗಳ ಅವಶ್ಯಕತೆ ಇರುತ್ತದೆ ಎಂದು ಅಂದಾಜಿಸಲಾಗಿದೆ. ಪತ್ರಿಕೆಗಳ ಸಂಖ್ಯೆ ಹಾಗೂ ವಿದ್ಯುನ್ಮಾನ ವಾಹಿನಿಗಳ ಸಂಖ್ಯೆ ಹೆಚ್ಚಾದಂತೆ ಪತ್ರಕರ್ತರ ಸಂಖ್ಯೆಯೂ ಸಹ ಹೆಚ್ಚಾಗುವುದರಿಂದ ಅಂದಾಜು ವೆಚ್ಚವೂ ಸಹ ಹೆಚ್ಚಾಗುವ ಸಾಧ್ಯತೆ ಇರುವುದಾಗಿ ತಿಳಿಸುತ್ತಾ, ಬೇಕಾಗುವ ಅನುದಾನದ ವಿವರಗಳ ಅಂದಾಜು ವೆಚ್ಚ ಹಾಗೂ ಸದರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಮಾರ್ಗಸೂಚಿಗಳನ್ನು ಒಳಗೊಂಡ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಿ, ಯೋಜನೆಯ ಅನುಷ್ಠಾನಕ್ಕೆ ಸರ್ಕಾರದ ಆದೇಶ ಹೊರಡಿಸುವಂತೆ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರು ಕೋರಿರುತ್ತಾರೆ.

ಆದೇಶದ ವಿವರ: ಆರ್ಥಿಕ ಇಲಾಖೆಯು ಇದು ಮುಂದುವರೆದ ಮಾರ್ಪಾಡಿತ ಯೋಜನೆಯಾಗಿದ್ದು, ಸಾರಿಗೆ ಇಲಾಖೆಯ ಸಹಯೋಗದೊಂದಿಗೆ ಅನುಷ್ಟಾನಗೊಳಿಸುವುದು ಎಂದು ಸೂಚಿಸಿರುತ್ತದೆ. ಪ್ರಸ್ತಾವನೆಯನ್ನು ಪರಿಶೀಲಿಸಿ, ಈ ಕುರಿತು ಆದೇಶಿಸಲಾಗಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2024-25ನೇ ಸಾಲಿನ ಆಯವ್ಯಯ ಭಾಷಣದ ಘೋಷಣೆಯನ್ವಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ/ ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್‌ ಪಾಸ್‌ ಸೌಲಭ್ಯವನ್ನು ನೀಡುವ ಯೋಜನೆಯನ್ನು ಸಾರಿಗೆ ಇಲಾಖೆಯ ಸಹಯೋಗದೊಂದಿಗೆ ಮಾರ್ಗಸೂಚಿಗಳು ಹಾಗೂ ಷರತ್ತುಗಳನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಮಾರ್ಗಸೂಚಿಗಳು

* ಅರ್ಜಿದಾರರು ಪ್ರತಿನಿಧಿಸುವ ಮಾಧ್ಯಮ ಸಂಸ್ಥೆಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಇರಬೇಕು.

* ಅರ್ಜಿದಾರರು ಪೂರ್ಣಾವಧಿಗೆ ನೇಮಕವಾಗಿದ್ದು ಕನಿಷ್ಠ ನಾಲ್ಕು (4) ವರ್ಷಗಳಾಗಿರಬೇಕು. ವಿದ್ಯುನ್ಮಾನ ಹಾಗೂ ಮುದ್ರಣ ಮಾಧ್ಯಮ ಕ್ಷೇತ್ರದಲ್ಲಿ ಸೇವಾ ಅನುಭವ ಹೊಂದಿರಬೇಕು.

* ಪೂರ್ಣಾವಧಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಬಗ್ಗೆ ನೇಮಕಾತಿ ಆದೇಶ, ವೇತನ ರಸೀತಿ/ ಬ್ಯಾಂಕ್ ಸ್ಟೇಟ್‌ಮೆಂಟ್ ಅಥವಾ ಸೇವಾನುಭವಕ್ಕೆ ಸಂಬಂಧಪಟ್ಟಂತೆ ಸೂಕ್ತ ದಾಖಲೆಗಳನ್ನು ಒದಗಿಸಬೇಕು.

* ಸಾಮಾನ್ಯ ಮನರಂಜನಾ ಹಾಗೂ ಇತರೆ ಪ್ರಕಾರಗಳ ವಾಹಿನಿಗಳ ಪ್ರತಿನಿಧಿಗಳಿಗೆ ಬಸ್ ಪಾಸ್‌ಗಳನ್ನು ನೀಡಲಾಗುವುದಿಲ್ಲ.

* ಈ ಯೋಜನೆಯನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ವ್ಯಾಪ್ತಿಯ (ಎಕ್ಸ್‌ಪ್ರೆಸ್ ಸೇರಿದಂತೆ) ಎಲ್ಲಾ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸಲು ಸೀಮಿತಗೊಳಿಸಿದೆ.

* ಆಸಕ್ತ ಪತ್ರಕರ್ತರು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಸಂಪಾದಕರ/ ಮುಖ್ಯಸ್ಥರ ಶಿಫಾರಸ್ಸಿನೊಂದಿಗೆ ಪೂರಕ ದಾಖಲೆಗಳೊಂದಿಗೆ ಅರ್ಜಿಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ತಮ್ಮ ಕಾರ್ಯ ವ್ಯಾಪ್ತಿಯ ಜಿಲ್ಲಾ ಮಟ್ಟದ ಉಪ ನಿರ್ದೇಶಕರು/ ಹಿರಿಯ ಸಹಾಯಕ ನಿರ್ದೇಶಕರು/ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

* ಜಿಲ್ಲಾ ಕೇಂದ್ರಗಳಿಂದ ಈ ಸೌಲಭ್ಯಕ್ಕೆ ಆಯ್ಕೆಯಾದ ಪತ್ರಕರ್ತರ ಪಟ್ಟಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕ್ರೋಢೀಕರಿಸಿ ಕೆಎಸ್‌ಆರ್‌ಟಿಸಿ ಸಂಸ್ಥೆಗೆ ನೀಡಲಾಗುವುದು. ಸದರಿ ಸಂಸ್ಥೆಯು ಮುದ್ರಿಸಿಕೊಡುವ ಬಸ್‌ಪಾಸುಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಿಲ್ಲಾ ಪತ್ರಿಕಾ ಸಂಪಾದಕರಿಗೆ/ ವರದಿಗಾರರಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು.

* ಈ ಎಲ್ಲಾ ಪ್ರಕ್ರಿಯೆಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಂಟಿ ನಿರ್ದೇಶಕರು ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಉಪ ಮುಖ್ಯ ಸಂಚಾರ ವ್ಯವಸ್ಥಾಪಕರು (ವಾಣಿಜ್ಯ) ಇವರುಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

* ಜಿಲ್ಲಾ ಕೇಂದ್ರಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ, ಮಾಧ್ಯಮ ಮಾನ್ಯತಾ ಪತ್ರ ಪಡೆಯದ ಪತ್ರಕರ್ತರು, ಅವರು ಕಾರ್ಯನಿರ್ವಹಿಸುವ ಜಿಲ್ಲೆಯ ವ್ಯಾಪ್ತಿಯಲ್ಲಿ ಕರ್ನಾಟಕ ಸಾರಿಗೆ ವ್ಯಾಪ್ತಿಯ (ಎಕ್ಸ್‌ಪ್ರೆಸ್ ಸೇರಿದಂತೆ ) ಬಸ್‌ಗಳಲ್ಲಿ ಸಂಚರಿಸಲು ಬಸ್‌ ಪಾಸ್‌ ಅವಕಾಶ ಕಲ್ಪಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+