ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌ ಭಾಗ್ಯ ವಿಸ್ತರಣೆ

By Sachhidananda Acharya
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 1: ಮುಂದಿನ ಶೈಕ್ಷಣಿಕ ವರ್ಷದಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್‌ಟಾಪ್‌ ಒದಗಿಸಲು ಸರಕಾರ ಚಿಂತನೆ ನಡೆಸಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

''ಎಲ್ಲಾ ಕಾಲೇಜಿನ ಮೊದಲ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಈ ವರ್ಷ ಉಚಿತ ಲ್ಯಾಪ್‌ಟಾಪ್‌ ನೀಡಲಾಗುತ್ತದೆ. 300 ಕೋಟಿ ವೆಚ್ಚದ ಈ ಯೋಜನೆಗೆ ಈಗಾಗಲೇ ಟೆಂಡರ್ ಕರೆಯಲಾಗಿದೆ. ನವೆಂಬರ್‌ 15ರೊಳಗೆ ಲ್ಯಾಪ್‌ಟಾಪ್‌ ವಿತರಣೆ ಮಾಡುತ್ತೇವೆ," ಎಂದು ರಾಯರೆಡ್ಡಿ ತಿಳಿಸಿದ್ದಾರೆ.

 Free Laptop for Postgraduate Students - Basavaraj Rayareddy

ಇದೇ ವೇಳೆ ಅವರು 2018-19ನೇ ಶೈಕ್ಷಣಿಕ ವರ್ಷದಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌ ನೀಡುವ ಗುರಿಯಿದೆ ಎಂದು ಹೇಳಿದ್ದಾರೆ. ಇನ್ನು ಉನ್ನತ ಶಿಕ್ಷಣದವರೆಗೆ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ನೀಡುವ ಪ್ರಸ್ತಾಪವೂ ರಾಜ್ಯಸರಕಾರದ ಮುಂದೆ ಇದೆ ಎಂದು ರಾಯರೆಡ್ಡಿ ತಿಳಿಸಿದ್ದಾರೆ.

ಬುಧವಾರ ಬೆಂಗಳೂರು ವಿಶ್ವವಿದ್ಯಾಲಯದ ಸೆಂಟ್ರಲ್‌ ಕಾಲೇಜಿನಲ್ಲಿ ನೂತನ ಕಟ್ಟಡ ಉದ್ಘಾಟಿಸಿ ಅವರು ಈ ಮಾತುಗಳನ್ನು ಹೇಳಿದ್ದಾರೆ.

English summary
Higher Education Minister Basavaraj Rayareddy has said that the Government is thinking on to provide free laptops for postgraduate students from the next academic year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X