ಹಂದಿಜ್ವರ ಪೀಡಿತರಿಗೆ ತುರ್ತು ಚಿಕಿತ್ಸೆ, ಉಚಿತ ಔಷಧ

ಬೆಂಗಳೂರು, ಫೆ. 10: ಮಹಾಮಾರಿ ಎಚ್ 1ಎನ್ 1ಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಯೊಂದಿಗೆ ಉಚಿತ ಔಷಧ ವಿತರಿಸಲು ಆರೋಗ್ಯ ಸಚಿವ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನಿಧಾನವಾಗಿ ಸೋಂಕು ಹೆಚ್ಚಾಗುತ್ತಿದೆ. 107 ಮಂದಿಯಲ್ಲಿ ರೋಗ ಲಕ್ಷಣ ಕಾಣಿಸಿಕೊಂಡಿದ್ದು 9 ಮಂದಿಯನ್ನು ಬಲಿತೆಗೆದುಕೊಂಡಿದೆ ಎಂದು ಮಾಹಿತಿ ನೀಡಿದರು.[ಬೆಂಗಳೂರು: ಹಂದಿ ಜ್ವರ ಔಷಧ ಲಭ್ಯವಿರುವ ಆಸ್ಪತ್ರೆ ಪಟ್ಟಿ]

h1n1

ಆರೋಗ್ಯಾಧಿಕಾರಿಗಳೊಂದಿಗೆ ತುರ್ತು ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಚಿವರು, ರೋಗ ಲಕ್ಷಣ ಕಂಡು ಬಂದರೆ ಕೂಡಲೇ ಪರೀಕ್ಷೆಗೆ ಒಳಪಡಿಸಬೇಕು. ರೋಗಿಗಳಿಗೆ ತುರ್ತು ಚಿಕಿತ್ಸೆ ಹಾಗೂ ಉಚಿತ ಔಷಧ ನೀಡಬೇಕು ಎಂದು ತಿಳಿಸಿದರು.

ಖಾಸಗಿ ಆಸ್ಪತ್ರೆಗಳಿಗೆ ಕಟ್ಟಿನಿಟ್ಟಿನ ಆದೇಶ
ರೋಗಿಗಳಿಂದ ಹಣ ಪಡೆಯದೆ ಮಾತ್ರೆ ಹಾಗೂ ಸಿರಪ್‌ ನೀಡಬೇಕು. ಜಿಲ್ಲಾ ಮಟ್ಟದ ಆಸ್ಪತ್ರೆಗಳಿಗೆ ಔಷಧಿ ಖರೀದಿಸಲು ತಲಾ 1 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ರಾಜ್ಯದ ಎಲ್ಲಾ ಸರಕಾರಿ ಆಸ್ಪತ್ರೆಗಳು, ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಔಷಧಿಯ ದಾಸ್ತಾನು ಮಾಡಲಾಗಿದ್ದು, ಖಾಸಗಿ ಆಸ್ಪತ್ರೆಯವರು ಆಯಾ ಜಿಲ್ಲಾ ಆಸ್ಪತ್ರೆಗಳಿಂದ ಔಷಧಿಯನ್ನು ಪಡೆದು ರೋಗಿಗಳಿಗೆ ನೀಡಬೇಕು ಎಂದು ತಿಳಿಸಿದರು.[ಎಚ್1ಎನ್ 1 ಲಕ್ಷಣಗಳೇನು? ಮುಚ್ಚರಿಕೆ ವಿಧಾನಗಳೆನು?]

ನೆರೆ ರಾಜ್ಯಗಳಲ್ಲಿ ಎಚ್1ಎನ್1 ಹೆಚ್ಚಿರುವುದರಿಂದ ಹೊರಭಾಗಗಳಿಂದ ಬರುವವರಲ್ಲಿ ರೋಗ ಇರುವುದನ್ನು ಪತ್ತೆ ಹಚ್ಚಲು ವಿಮಾನ ನಿಲ್ದಾಣಗದಲ್ಲಿ ಥರ್ಮಲ್ ಸ್ಕ್ರೀನಿಂಗ್ ಅಳವಡಿಸಲಾಗಿದೆ. ಶಂಕಿತರನ್ನು ತುರ್ತು ಚಿಕಿತ್ಸೆಗೆ ಒಳಪಡಿಸಲಾಗುತ್ತಿದೆ. ಸಕಲ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚ್ 1ಎನ್ 1 ಸೋಂಕು ಪರೀಕ್ಷಾ ಕೇಂದ್ರ ತೆರೆಯಲಾಗುವುದು. ಹೊರಭಾಗದಿಂದ ಆಗಮಿಸುವವರ ತಪಾಸಣೆ ನಡೆಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+