ಗುಡ್ ನ್ಯೂಸ್: 'ಶೀಘ್ರದಲ್ಲೇ ಪೌರಕಾರ್ಮಿಕರಿಗೆ ಉಚಿತ ನಿವೇಶನ'
ಮಾಗಡಿ,ಜನವರಿ 04: ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ಪೌರಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಲಿದೆ. ಪೌರಕಾರ್ಮಿಕರಿಗೆ ಬೇಡಿಕೆಯಂತೆ ಶೀಘ್ರದಲ್ಲೆ 2 ಎಕರೆ ಜಾಗ ನಿಗದಿ ಮಾಡಿ ಉಚಿತ ನಿವೇಶನ ಹಂಚಿ ಮನೆಗಳ ನಿರ್ಮಾಣಕ್ಕೆ ನೆರವು ನೀಡಲಾಗುವುದು ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಭರವಸೆ ನೀಡಿದರು.
ಈ ಕುರಿತು ಮಾಗಡಿಯ ಅಂಬೇಡ್ಕರ್ ಭವನದಲ್ಲಿ ಪುರಸಭೆ, ತಾಲೂಕು ಪೌರಸೇವಾ ನೌಕರರ ಸಂಘದ ಸಹಯೋಗದಲ್ಲಿ ಆಯೋಜಿಸಿದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಪಟ್ಟಣವನ್ನು ಸ್ವಚ್ಛ ಹಾಗೂ ಸುಂದರವಾಗಿ ಕಾಪಾಡುವಲ್ಲಿ ಪೌರಕಾರ್ಮಿಕರಕಾರ್ಯ ಶ್ಲಾಘಿಸಿದ ಅವರು, ಪೌರಕಾರ್ಮಿಕರ ದಿನಾಚರಣೆ ಮೂಲಕ ಅವರನ್ನು ಗೌರವಿಸುವುದರ ಜತೆಗೆ ಅವರ ಬೇಡಿಕೆ ಈಡೇರಿಸಲಾಗುವುದು ಎಂದು ತಿಳಿಸಿದರು.

ಪೌರ ಕಾರ್ಮಿಕರಿಗಾಗಿ ಈಗಾಗಲೇ ತಿರುಮಲೆಯಲ್ಲಿ ಮನೆಗಳನ್ನು ನಿರ್ಮಿಸಿದ್ದು, ಪೌರ ಕಾರ್ಮಿಕರು ನಮಗೆ ಕಟ್ಟಡ ಬೇಡ ಜಾಗ ನೀಡಿದರೆ ಸಾಕು ಎಂದು ಹೇಳಿದ್ದರಿಂದ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ್ ಅವರಿಗೆ ಎರಡು ಎಕೆರೆ ಜಾಗ ಗುರುತಿಸಲು ತಿಳಿಸಿದ್ದು, ಆದಷ್ಟು ಬೇಗ ನಿವೇಶನ ನೀಡಲಾಗುವುದು, ಹೊರಗುತ್ತಿಗೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪುರಸಭಾ ನೀರು ಸರಬರಾಜು ನೌಕರರನ್ನು ಹಾಗೂ ಪೌರ ಕಾರ್ಮಿಕರ ಕೆಲಸ ಕಾಯಂಗೊಳಿಸಲು ಸದನದಲ್ಲಿ ಚರ್ಚಿಸಲಾಗುವುದು ಎಂದು ಕಾಂಗ್ರೆಸ್ ಶಾಸಕ ಬಾಲಕೃಷ್ಣ ಭರವಸೆ ನೀಡಿದ್ದಾರೆ.
ಜಿಲ್ಲಾ ಪೌರಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷ ನಾಗರಾಜು ಮಾತನಾಡಿ, ಪೌರ ಕಾರ್ಮಿಕರಿಗೆ ಸರ್ಕಾರದಿಂದ ಬರಬೇಕಾದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಶಾಸಕರಿಂದ ಆಗಬೇಕು. ಪ್ರತಿ 2 ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಬೇಕು. ಬೆಳಗಿನ ತಿಂಡಿ ಶುಚಿಯಾಗಿ ನೀಡಬೇಕು. ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಶಿಕ್ಷಣವನ್ನು ಕೊಡಿಸುವಂತೆ ಹಾಗೂ ತಮ್ಮ ಪ್ರಾಣದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಕಾಯಂ ನೌಕರರನ್ನಾಗಿ ಮಾಡುವಂತೆ ಮನವಿ ಮಾಡಿದರು.
ಪುರಸಭಾಧ್ಯಕ್ಷೆ ರಮ್ಯಾ ಮಾತನಾಡಿ, ನಗರದ ಸ್ವಚ್ಛತೆಗಾಗಿ ಶ್ರಮಿಸುವ ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ. ರ್ವಜನಿಕರ ಆರೋಗ್ಯ ರಕ್ಷಣೆಗೆ ಬೀದಿಗಳಿದು ತಮ್ಮ ಪಾಲಿನ ಕರ್ತವ್ಯ ಪ್ರಾಮಾಣಿಕವಾಗಿ ಮಾಡುತ್ತಿರುವ ಪೌರಕಾರ್ಮಿಕರಿಗೆ ಜನರ ಪರವಾಗಿ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ. ಹೊರಗುತ್ತಿಗೆದಾರರ ಬದುಕಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸಲು ಹಾಗೂ ಪೌರಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು.
ಪುರಸಭಾ ಸದಸ್ಯ ಎಂ.ಎನ್.ಮಂಜುನಾಥ್ ಮಾತನಾಡಿ, ಹಬ್ಬ, ಉತ್ಸವ ಎನ್ನದೆ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ದೇವರ ಮಕ್ಕಳು ಎಂದರೆ ತಪ್ಪಾಗಲಾರದು. ಅವರು ಮಾಡುವ ಕೆಲಸಕ್ಕೆ ನ್ಯಾಯ ಒದಗಿಸಲು ಶಾಸಕರು ಪುರಸಭಾ ವ್ಯಾಪ್ತಿಯಲ್ಲಿ ಅರ್ಧ ನಿವೇಶನವನ್ನಾದರೂ ನೀಡಬೇಕು. ಎಲ್ಲಾ ಸದಸ್ಯರನ್ನು ಗಣನೆಗೆ ತೆಗೆದುಕೊಂಡು ಕಾರ್ಯಕ್ರಮಗಳನ್ನು ರೂಪಿಸುವಂತೆ ಸಲಹೆ ನೀಡಿದರು.
ಪುರಸಭೆ, ತಾಲೂಕು ಪೌರಸೇವಾ ನೌಕರರ ಸಂಘದ ಸಹಯೋಗದಲ್ಲಿ ಆಯೋಜಿಸಿದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಪೌರ ಕಾರ್ಮಿಕರನ್ನು ಸನ್ಮಾಸಲಾಯಿತು. ಕಾರ್ಮಿಕರಿಗಾಗಿ ಆಯೋಜಿಸಿದ್ದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪುರಸಭಾ ಮುಖ್ಯಾಧಿಕಾರಿ ಶಿವರುದ್ರಯ್ಯ ಉಪಾಧ್ಯಕ್ಷ ರಿಯಾಜ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುರ್ಮಾ, ಪುರಸಭಾ ಮಾಜಿ ಅಧ್ಯಕ್ಷ ರಂಗಹನುಮಯ್ಯ, ಪುರಸಭಾ ಸದಸ್ಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
-
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು









Click it and Unblock the Notifications