PUC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ
Good News for PUC Student:ಇತ್ತೀಚೆಗಷ್ಟೇ ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರಿಕ್ಷಾ ಫಲಿತಾಂಶ ಪ್ರಕಟಿಸಿರುವ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಪದವಿ ಪೂರ್ವ ಅಂದರೆ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಈವರೆಗೆ SSLC ವಿದ್ಯಾರ್ಥಿಗಳಿಗೆ ಸಿಗುತ್ತಿದ್ದ ಉಚಿತ ಪಠ್ಯ ಸೌಲಭ್ಯವನ್ನು 1st PUC ಮತ್ತು 2nd PUC ವಿದ್ಯಾರ್ಥಿಗಳಿಗೂ ವಿಸ್ತರಣೆ ಮಾಡಿದೆ.
ಹೌದು, ರಾಜ್ಯ ಶಿಕ್ಷಣ ಇಲಾಖೆಯು ಪಿಯುಸಿ ವಿದ್ಯಾರ್ಥಿಗಳು, ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ನಿರ್ಧಾರ ಪ್ರಕಟಿಸಿದೆ. 'ಇದುವರೆಗೆ ಸರ್ಕಾರಿ ಶಾಲೆಯ 1ರಿಂದ 10ನೇ ತರಗತಿ ಮಕ್ಕಳಿಗೆ ಮಾತ್ರ ಸಿಗುತ್ತಿದ್ದ ಉಚಿತ ಪಠ್ಯಪುಸ್ತಕ ವಿತರಣೆ ಯೋಜನೆಯನ್ನು ಪದವಿ ಪೂರ್ವ (ಪಿಯು) ಕಾಲೇಜಿನ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿದೆ.

ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಆಯಾ ವಿಭಾಗದ ಪಠ್ಯಗಳನ್ನು ಉಚಿತವಾಗಿ ಪಡೆದು ಅಭ್ಯಸಿಸಬಹುದಾಗಿದೆ. ಇದರಿಂದ ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗುವ ಜೊತೆಗೆ ಪೋಷಕರಿಗೆ ಒಂದಷ್ಟು ಹಣ ಸಹ ಉಳಿತಾಯವಾಗಲಿದೆ. ಈ ಯೋಜನೆಗೆಂದರೆ ಶಿಕ್ಷಣ ಇಲಾಖೆ ವಾರ್ಷಿಕ ಇಂತಿಷ್ಟು ಹಣ ಹಂಚಿಕೆ ಮಾಡಲು ತೀರ್ಮಾನಿಸಿದೆ.
ಇದೇ ವರ್ಷದಿಂದಲೇ ಪಿಯುಸಿ ಉಚಿತ ಪಠ್ಯ ಪುಸ್ತಕ ವಿತರಣೆ
ವಿಶೇಷವೆಂದರೆ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ವಿತರಣೆ ಇದೇ ಶೈಕ್ಷಣಿಕ ವರ್ಷ 2026-27ನೇ ಸಾಲಿನಿಂದ ಅಚರಣೆಗೆ ಬರಲಿದೆ. ಇನ್ನು ಮುಂದೆ ಎಲ್ಲಾ ಸರ್ಕಾರಿ ಪಿಯು ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ಪಠ್ಯಪುಸ್ತಕಗಳನ್ನು ಉಚಿತವಾಗಿ ಪಡೆಯಲಿದ್ದಾರೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಾಹಿತಿ ನೀಡಿದೆ.
ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಈ ನಿರ್ಧಾರ ಅನ್ವಯಿಸಲಿದೆ. ಗ್ರಾಮೀಣ ಭಾಗದ ಮಕ್ಕಳು ಪಠ್ಯ ಪುಸ್ತಕ ಕೊಳ್ಳಲು ದೂರದ ಪಟ್ಟಣ, ನಗರ ಪ್ರದೇಶಗಳಿಗೆ ಹೋಗುವುದು ತಪ್ಪಲಿದೆ. ಅವರಿದ್ದಲ್ಲಿಗೆ ಆಯಾ ಶೈಕ್ಷಣಿಕ ವರ್ಷ ಪಠ್ಯಗಳನ್ನು ಕಾಲೇಜು ಆಡಳಿತ ಮಂಡಳಿ ನೀಡುವಂತೆ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.
15 ಜಿಲ್ಲೆಗಳ ಎಲ್ಲ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ
ನಿಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಕರ್ನಾಟಕ ಸರ್ಕಾರವು 15 ಜಿಲ್ಲೆಗಳ ಎಲ್ಲ ಸರ್ಕಾರಿ ಶಾಲೆಗಳಲ್ಲಿ 2026-27 ನೇ ಸಾಲಿನಿಂದಲೇ ದ್ವಿಭಾಷಾ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಹೀಗಾಗಿ ಇಂಗ್ಲಿಷ್‌ನಲ್ಲಿಯೂ ಪಾಠ ಹೇಳಿಕೊಡಲು ಲಕ್ಷಾಂತರ ಸರ್ಕಾರಿ ಶಾಲಾ ಶಿಕ್ಷಕರಿಗೆ ತರಬೇತಿಯನ್ನು ಈಗ ನೀಡಲಾಗುತ್ತಿದೆ. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಮೂರು ಹಂತದಲ್ಲಿ ಈ ತರಬೇತಿ ಆಯೋಜಿಸಿದೆ.












Click it and Unblock the Notifications