ದ್ವಿತೀಯ ಪಿಯುಸಿ ಪರೀಕ್ಷೆ; ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ

ಬೆಂಗಳೂರು, ಫೆಬ್ರವರಿ 25 : ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 4ರಿಂದ ಆರಂಭವಾಗಲಿವೆ. ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆ ಆಗಿರುತ್ತದೆ. ಆದ್ದರಿಂದ, ಮಾರ್ಚ್ 4, 2020ರಿಂದ 23/3/2020ರ ತನಕ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳ ತನಕ ಸರ್ಕಾರಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದರು.

Free Travel For 2nd Puc Students In KSRTC Bus During Exam

ಕೆಎಸ್ಆರ್‌ಟಿಸಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಅಂದರೆ 4/3/2020 ರಿಂದ 23/3/2020ರ ತನಕ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದ ತನಕ ಉಚಿತವಾಗಿ ಪ್ರಯಾಣಿಸಲು, ಹಿಂದಿರುಗಲು ಅನುಮತಿ ನೀಡಲಾಗಿದೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು 'ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು' ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಪ್ರವೇಶ ಪತ್ರದ ಆಧಾರದ ಮೇಲೆ ಬಸ್ ಆಚರಣೆ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ಸನ್ನು ಹತ್ತುವವರಿದ್ದಲ್ಲಿ ಹಾಗೂ ಆಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದರೆ ವಿದ್ಯಾರ್ಥಿಗಳು ಬಸ್ ಹತ್ತಲು, ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+