ಪುರುಷರಿಗೂ KSRTC ಬಸ್‌ನಲ್ಲಿ ಉಚಿತ ಪ್ರಯಾಣ?: ಈ ಭಾಗ್ಯ ಎಲ್ಲಾರಿಗೂ ಸಿಗಲ್ಲ
ಬೆಂಗಳೂರು, ಫೆಬ್ರವರಿ 28: 2023 ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಕಾರಕ್ಕೆ ಬಂದಮೇಲೆ ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರು ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ ನೀಡಲಾಗಿದೆ. ಈಗಾಗಲೇ ರಾಜ್ಯದ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದು, ಪ್ರತಿದಿನವೂ ಲಕ್ಷಾಂತರ ಜನವರು KSRTC ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ.
ರಾಜ್ಯ ಸರ್ಕಾರ ಶಕ್ತಿಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನ ಕಲ್ಪಿಸಿದ ಸಂದರ್ಭದಲ್ಲಿ ಪುರುಷರಿಗೂ ಉಚಿತ ಬಸ್ ಪ್ರಯಾಣದ ಅವಕಾಶವನ್ನ ಕಲ್ಪಿಸಿ ಎಂದು ಬಹಿರಂಗವಾಗಿ ಸರ್ಕಾರಕ್ಕೆ ಬೇಡಿಕ ಇಟ್ಟಿದ್ದರು. ಕನಿಷ್ಠ ವಿದ್ಯಾರ್ಥಿಗಳಿಗಾದರೂ ಉಚಿತ ಬಸ್ ಸೌಲಭ್ಯ ಒದಗಿಸಬೇಕೆಂಬ ಬೇಡಿಕೆ ಇದೆ. ಇದೀಗ ರಾಜ್ಯ ಸರ್ಕಾರದ ಈ ಉಚಿತ ಬಸ್ ಪ್ರಯಾಣ ಸದ್ಯ ಮಹಿಳೆಯರಿಗೆ ಮಾತ್ರವಿದ್ದು, ಮುಂದಿನ ದಿನಗಳಲ್ಲಿ ಈ ವ್ಯಾಪ್ತಿಗೆ ಬರುವ ಪುರುಷರಿಗೂ ಈ ಯೋಜನೆಯ ಲಾಭ ಸಿಗಲಿದೆ ಅನ್ನೋ ಸುಳಿವು ಸಿಕ್ಕಿದೆ.

ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಯನ್ನ ರಾಜ್ಯ ಕಾಂಗ್ರೆಸ್ ಸರ್ಕಾರ ಮೊದಲು ಜಾರಿಗೊಳಿಸಿದ್ದು, ಈ ಶಕ್ತಿ ಯೋಜನೆಯಿಂದಾಗಿ ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಮಟ್ಟದ ಹೊರೆಯಾಗಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ಪಂಚ ಗ್ಯಾರಂಟಿ ಯೋಜನೆಗಳನ್ನ ಕಟ್ಟುನಿಟ್ಟಾಗಿ ಜಾರಿಗೆ ತರಲು ಸರ್ಕಾರದಿಂದ ಆಗುತ್ತಿಲ್ಲ. ಹೀಗಾಗಿಯೇ ಕಳೆದೆರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ. ಅಲ್ಲದೇ ಅನ್ನಭಾಗ್ಯ ಯೋಜನೆಯ ಹಣವೂ ದೊರೆತಿಲ್ಲ ಎಂದು ಮಹಿಳೆಯರು ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ.
ಇತ್ತ ಕಾಂಗ್ರೆಸ್ ಸರ್ಕಾರ ಈಗಾಗಲೇ ಟಿಕೆಟ್ ದರವನ್ನು ಸಹ ಹೆಚ್ಚಳ ಮಾಡಿದ್ದು, ಶಕ್ತಿಯೋಜನೆಯಡಿ ಉಚಿತ ಪ್ರಯಾಣವನ್ನ ನಮಗೂ ಅವಕಾಶ ನೀಡಿ ಎಂದು ಹಲವರು ಬೇಡಿಕೆ ಇಟ್ಟಿದ್ದಾರೆ. ಶಕ್ತಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಮತ್ತು ಪುರುಷರಿಗೆ ಉಚಿತ ಬಸ್ ಸೌಲಭ್ಯ ನೀಡಿದರೆ ಭಾರೀ ನಷ್ಟವಾಗಲಿದೆ. ಈಗಾಗಲೇ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಆದರೆ ಕಿಡ್ನಿ ಸಮಸ್ಯೆಯಿಂದ ಡಯಾಲಿಸಿಸ್‌ಗೆ ಒಳಗಾಗುತ್ತಿರುವ ರೋಗಿಗಳಿಗೆ ಉಚಿತ ಬಸ್ ಮಾಡಿಕೊಡಬೇಕೆಂದು ಸ್ಪೀಕರ್ ಯು.ಟಿ.ಖಾದರ್ ಅವರು ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ವಿಧಾನಸಭಾ ಸಭಾಧ್ಯಕ್ಷರಾಧ ಯು ಟಿ ಖಾದರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ʼರಾಜ್ಯದಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಪುರುಷರು ಡಯಾಲಿಸಿಸ್‌ಗಾಗಿ ವಾರಕ್ಕೊಮ್ಮೆ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಿಗೆ ಹೋಗಬೇಕಿದೆ. ಹೀಗಾಗಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಪುರುಷರಿಗೂ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕುʼ ಅಂತಾ ಸಿಎಂಗೆ ಯು.ಟಿ.ಖಾದರ್ ಪತ್ರ ಬರೆದಿದ್ದಾರೆ. ಈ ಮನವಿಗೆ ಸಿಎಂ ʼಓಕೆʼ ಅಂದರೆ ಇನ್ಮುಂದೆ ಡಯಾಲಿಸಿಸ್ ಚಿಕಿತ್ಸೆಗೆ ಒಳಗಾಗುತ್ತಿರುವ ಪುರುಷರಿಗೂ ಉಚಿತ ಬಸ್ ಪ್ರಯಾಣದ ಸೌಲಭ್ಯವು ಸಿಗಲಿದೆ. ಈ ಕುರಿತು ಮಾರ್ಚ್ 07 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುವ ಬಜೆಟ್‌ನಲ್ಲಿ ಘೋಷಣೆಯಾಗುವ ನಿರೀಕ್ಷೆ ಇದೆ.












Click it and Unblock the Notifications