ಬ್ಲ್ಯಾಕ್‌ ಫಂಗಸ್‌ಗೆ ರಾಜ್ಯದ ಆರು ಕಡೆ ಉಚಿತ ಚಿಕಿತ್ಸೆ

ಬೆಂಗಳೂರು, ಮೇ 19: "ಬ್ಲ್ಯಾಕ್‌ ಫಂಗಸ್ ಸಮಸ್ಯೆಗೆ ಬಳಸಲಾಗುವ ಔಷಧಿಗೆ ಕೊರತೆ ಇಲ್ಲ. ಈಗಾಗಲೇ ಕೇಂದ್ರದಿಂದ 1000 ವೈಲ್ಸ್‌ ದೊರೆತಿದೆ. ಈ ಔಷಧಿಯ ಕೊರತೆ ನೀಗಿಸಲು ಸರ್ಕಾರ ಸರ್ವ ಪ್ರಯತ್ನವನ್ನೂ ಮಾಡುತ್ತಿದೆ" ಎಂದು ರಾಜ್ಯ ಕೋವಿಡ್‌ ಕಾರ್ಯಪಡೆಯ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ತಿಳಿಸಿದರು.

ಬೆಂಗಳೂರಿನಲ್ಲಿ ಬುಧವಾರ ಬಂಟರ ಸಂಘದ ವತಿಯಿಂದ ಕೋವಿಡ್ ಸೋಂಕಿತರಿಗಾಗಿ ರೂಪಿಸಿದ್ದ 20 ಆಮ್ಲಜನಕ ಸಾಂದ್ರಕಗಳ ವ್ಯವಸ್ಥೆಗೆ ಚಾಲನೆ ಕೊಟ್ಟ ನಂತರ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಸೇರಿದಂತೆ ರಾಜ್ಯದ ಆರು ಕಡೆಗಳಲ್ಲಿ ಬ್ಲ್ಯಾಕ್‌ ಫಂಗಸ್‌ಗೆ ಉಚಿತ ಚಿಕಿತ್ಸೆ ಕೊಡಲಾಗುತ್ತಿದೆ. ಎಲ್ಲಿಯೂ ಔಷಧಿ ಕೊರತೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಕೇಂದ್ರದಿಂದ ಇನ್ನೂ ಹೆಚ್ಚಿನ ಔಷಧಿ ಪಡೆಯಲು ಯತ್ನಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

Free Treatment For Black Fungus In 6 Places At States Says DCM Ashwath Narayan

ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ, ಕಾರ್ಯದರ್ಶಿ ಮಧುಕರ ಶೆಟ್ಟಿ, ಉಮೇಶ ಶೆಟ್ಟಿ, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಬೇಲೂರು, ಸಂಘದ ವೈದ್ಯಕೀಯ ವಿಭಾಗದ ಅಧ್ಯಕ್ಷ ಡಾ.ನಿಶಾಕಾಂತ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Recommended Video

      ಬಡವರ ಕಷ್ಟಕ್ಕೆ ಸ್ಪಂದಿಸಿದ BSY!! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+