ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉಚಿತ ವೈ-ಫೈ

Written By: Ramesh
Subscribe to Oneindia Kannada

ಬೆಳಗಾವಿ, ನವೆಂಬರ್. 16 : ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ರಾಜ್ಯದ ಎಲ್ಲಾ ಸರ್ಕಾರಿ ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಸರ್ಕಾರಿ ಪದವಿ ಕಾಲೇಜುಗಳಲ್ಲಿ ಇನ್ನು ಮುಂದೆ ಉಚಿತ ವೈ-ಫೈ ಸೌಲಭ್ಯ ದೊರೆಯಲಿದೆ. 135 ಕಾಲೇಜುಗಳಲ್ಲಿ ಮೊದಲ ಹಂತದಲ್ಲಿ ವೈ-ಫೈ ಸೌಲಭ್ಯ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಬೆಳಗಾವಿಯಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.

Free-wifi-in-all-government colleges soon says Minister Rayareddy

ರಾಜ್ಯದಲ್ಲಿ 412 ಸರ್ಕಾರಿ ಪದವಿ ಕಾಲೇಜುಗಳ ಪೈಕಿ ಮೊದಲ ಹಂತದಲ್ಲಿ 135 ಕಾಲೇಜುಗಳಲ್ಲಿ ವೈ-ಫೈ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಲ್ಯಾಪ್ ಟಾಪ್ ಮತ್ತು ಕಂಪ್ಯೂಟರ್ ಸೌಲಭ್ಯ ಬಳಸಿಕೊಂಡು ಹೆಚ್ಚಿನ ಜ್ಞಾನವನ್ನು ಪಡೆಯುವ ಉದ್ದೇಶದಿಂದ ಉಚಿತ ವೈ-ಫೈ ಸೇವೆ ನೀಡಲಾಗುತ್ತಿದೆ ಎಂದು ಹೇಳಿದರು.

ವೈ-ಫೈ ಸೇವೆಯ ಜೊತೆ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಈ ಯೋಜನೆಯನ್ನು ಯಾವಾಗ ಜಾರಿಗೆ ತರಲಾಗುತ್ತದೆ ಎಂಬ ನಿಖರ ದಿನಾಂಕ ಪ್ರಕಟಿಸಿಲ್ಲ. ಉಚಿತ ವೈಫೈ ನೀಡಲು ಮುಂದಾಗಿರುವ ಈ ಸರ್ಕಾರ ಯೋಜನೆಯನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳತ್ತಾರೆಯೋ ಎಂಬುವುದು ಮುಂದಿರುವ ಪ್ರಶ್ನೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Karnataka government has decided to provide free Wi-FI to all government pre-Universality colleges(412) said minister for Higher education Basavaraj Rayareddy. The minister disclosed this to newsman in Belagavi.
Please Wait while comments are loading...