ಕಣ್ಣು ಮುಚ್ಚಿ ತೆರೆಯೋ ಹೊತ್ತಿಗೆ ಮಾಯವಾಗುವ ವಾಹನ ಸವಾರರೇ ಎಚ್ಚರ! ನಿಮ್ಮ ವೇಗಕ್ಕೆ ಬ್ರೇಕ್ ಹಾಕಿ ಇಲ್ಲವಾದಲ್ಲಿ FIR ಪಕ್ಕಾ...
ಬೆಂಗಳೂರು ಜುಲೈ 29: ರಸ್ತೆಯಲ್ಲಿ ವೇಗವಾಗಿ ವಾಹನ ಚಲಾಯಿಸುವ ಸವಾರರಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಅತಿ ವೇಗವಾಗಿ ಸಂಚಾರ ಮಾಡುವ ಸವಾರರು ತಮ್ಮ ವೇಗಕ್ಕೆ ಕಡಿವಾಣ ಹಾಕಿದೇ ಇದ್ದಲ್ಲಿ ಅಂಥವರ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ಧರಿಸಲಾಗಿದೆ.
ಹೌದು.. ಇದೇ ಆಗಸ್ಟ್ 1 ರಿಂದ 130 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಸ್ಥಳೀಯ ಸಿಸಿಟಿವಿ ಕ್ಯಾಮರಾ ಹಾಗೂ ಸ್ಪಾಟ್ ಸ್ವೀಡ್ ಮತ್ತು ಸೆಕ್ಷನಲ್ ಸ್ಪೀಡ್ ಆಧಾರದಲ್ಲಿ ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ.

ಆಗಸ್ಟ್ 1ರಿಂದ ವೇಗವಾಗಿ ಸಂಚಾರ ಮಾಡುವ ವಾಹನ ಸವಾರರ ಮೇಲೆ ನಿಗಾ ಇಡಲಾಗುವುದು. ಒಂದು ವೇಳೆ ಸವಾರರು 130 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿ ವಾಹನ ಸಂಚಾರ ಮಾಡಿದರೆ ಅಂಥವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.
ವೇಗದ ಸಂಚಾರಕ್ಕೆ ಬ್ರೇಕ್ ಹಾಕಲು ಈ ಕ್ರಮ ಕೈಗೊಳ್ಳಲಾಗಿದೆ. ಒಂದು ವೇಳೆ ನಿಯಮ ಮೀರಿ ರಸ್ತೆಯಲ್ಲಿ ವಾಹನ ಸಂಚಾರ ಮಾಡಿದರೆ ಎರಡು ಸಾವಿರ ರೂಪಾಯಿ ದಂಡ ಅಥವಾ ಆರು ತಿಂಗಳು ಜೈಲು ಶಿಕ್ಷೆ ವಿಧಸಬಹುದು ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.












Click it and Unblock the Notifications