ಮನಮೋಹನ್ ಸಿಂಗ್ ಅವಧಿಯಲ್ಲಿ ಪೆಟ್ರೋಲ್ ದರ ₹71, ಡೀಸೆಲ್ ₹56 ಇತ್ತು: ಕೇಂದ್ರದ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಬೆಂಗಳೂರು: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳ ನಿರಂತರ ಏರಿಕೆಯನ್ನು ಖಂಡಿಸಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಸತತವಾಗಿ ಇಂಧನ ದರಗಳನ್ನು ಹೆಚ್ಚಿಸುವ ಮೂಲಕ ದೇಶದ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದೆ ಎಂದು ಆರೋಪ ಮಾಡಿದ್ದಾರೆ.

ಪ್ರತಿದಿನವೂ ಬೆಲೆಯೇರಿಕೆ

"ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ (ಗ್ಯಾಸ್) ದರಗಳನ್ನು ಸತತವಾಗಿ ಏರಿಸುತ್ತಾ ಬಂದಿದೆ. ದೇಶದ ಇತಿಹಾಸದಲ್ಲೇ ಇಷ್ಟೊಂದು ಭೀಕರವಾಗಿ ಪ್ರತಿದಿನ ಇಂಧನ ದರ ಏರಿಕೆಯಾದ ಉದಾಹರಣೆಯೇ ಇಲ್ಲ. ಇದರಿಂದಾಗಿ ಮಧ್ಯಮ ವರ್ಗದ ಹಾಗೂ ಜನಸಾಮಾನ್ಯರ ಬದುಕು ಸಂಪೂರ್ಣ ದುಸ್ತರವಾಗಿದ್ದು, ಇಡೀ ದೇಶವೇ ಬೆಲೆಯೇರಿಕೆಯ ಬಿಸಿಗೆ ತತ್ತರಿಸಿಹೋಗಿದೆ" ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

Fuel Price

'ಅಚ್ಛೇ ದಿನ್' ಎಂದು ಜನರಿಗೆ ಟೋಪಿ ಹಾಕಿದ ಬಿಜೆಪಿ

ಕೇಂದ್ರದ ಆಡಳಿತ ವೈಖರಿಯನ್ನು ಟೀಕಿಸಿದ ಅವರು, "ಬಿಜೆಪಿ ಅಧಿಕಾರಕ್ಕೆ ಬಂದರೆ 'ಗುಜರಾತ್ ಮಾದರಿ' ಸರ್ಕಾರ ತರುತ್ತೇವೆ, ದೇಶಕ್ಕೆ 'ಒಳ್ಳೆಯ ದಿನಗಳು' (ಅಚ್ಛೇ ದಿನ್) ಬರುತ್ತವೆ ಎಂದು ಸುಳ್ಳು ಭರವಸೆ ನೀಡಿ ಜನರಿಗೆ ಟೋಪಿ ಹಾಕಿದ್ದಾರೆ. ಕಳೆದ 11 ದಿನಗಳ ಅವಧಿಯಲ್ಲೇ ಬರೋಬ್ಬರಿ 4 ಬಾರಿ ಇಂಧನ ಮತ್ತು ಗ್ಯಾಸ್ ದರವನ್ನು ಹೆಚ್ಚಿಸಲಾಗಿದೆ. ಸದ್ಯ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ₹110.93 ಹಾಗೂ ಡೀಸೆಲ್ ದರ ₹98.89 ತಲುಪಿದೆ. ಕೇವಲ ಇತ್ತೀಚಿನ ದಿನಗಳಲ್ಲೇ ₹7.52ರಷ್ಟು ದರ ಏರಿಕೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಲೂಟಿ ಮಾಡುತ್ತಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ" ಎಂದು ದೂರಿದ್ದಾರೆ.

ವಾಹನ ಸವಾರರಿಗೆ ಮತ್ತೆ ಶಾಕ್: ಕಳೆದ 10 ದಿನಗಳಲ್ಲಿ 4ನೇ ಬಾರಿ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ಬೆಲೆ
ವಾಹನ ಸವಾರರಿಗೆ ಮತ್ತೆ ಶಾಕ್: ಕಳೆದ 10 ದಿನಗಳಲ್ಲಿ 4ನೇ ಬಾರಿ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ಬೆಲೆ

ಮನಮೋಹನ್ ಸಿಂಗ್ ಅವಧಿಯಲ್ಲಿ ದರ ಕಡಿಮೆ

ಹಿಂದಿನ ಯುಪಿಎ ಸರ್ಕಾರದ ಅವಧಿಗೆ ಹೋಲಿಕೆ ಮಾಡಿದ ಸಿದ್ದರಾಮಯ್ಯ ಅವರು, "2014ರ ಮೇ ತಿಂಗಳಲ್ಲಿ ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ದೇಶದಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ₹71.41 ಹಾಗೂ ಡೀಸೆಲ್ ದರ ₹56.71 ಇತ್ತು. ಅಂದು ಕೇವಲ ₹412 ಇದ್ದ ಗ್ಯಾಸ್ ಸಿಲಿಂಡರ್ ಬೆಲೆ ಇಂದು ₹915 ದಾಟಿದ್ದು, ದುಪ್ಪಟ್ಟಿಗಿಂತಲೂ ಹೆಚ್ಚಾಗಿದೆ" ಎಂದು ಅಂಕಿ-ಅಂಶಗಳನ್ನು ನೀಡಿದ್ದಾರೆ.

"ಮನಮೋಹನ್ ಸಿಂಗ್ ಅವರ ಆಡಳಿತ ಅವಧಿಗೆ ಹೋಲಿಸಿದರೆ ಪ್ರಸ್ತುತ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. ಕಚ್ಚಾ ತೈಲದ ಬೆಲೆ 65ರಿಂದ 75 ಡಾಲರ್ ಇದ್ದಾಗಲೂ ಕೇಂದ್ರ ಸರ್ಕಾರ ಅದರ ಲಾಭವನ್ನು ಗ್ರಾಹಕರಿಗೆ ನೀಡಲಿಲ್ಲ. ಈಗ ಕಚ್ಚಾ ತೈಲದ ಬೆಲೆ 100 ಡಾಲರ್ ಮಿತಿಯೊಳಗಿದ್ದರೂ ಸಹ, ಸತತ ನಾಲ್ಕು ಬಾರಿ ದರ ಏರಿಕೆ ಮಾಡಲಾಗಿದೆ. ಕೇಂದ್ರದ ಈ ಜನವಿರೋಧಿ ನೀತಿಯಿಂದಾಗಿ ರೈತರು, ಗ್ರಾಹಕರು ಹಾಗೂ ಶ್ರಮಿಕ ವರ್ಗದವರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ" ಎಂದು ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

ಮೇ 30ಕ್ಕೆ ಜಿಲ್ಲಾವಾರು ಪ್ರತಿಭಟನೆ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೂಡ ಕೇಂದ್ರದ ವಿರುದ್ಧ ಕಿಡಿಕಾರಿದರು. ಹೀಗೆ ಹಂತ ಹಂತವಾಗಿ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಯಾವುದೇ ಮಾನ ಮರ್ಯಾದೆ ಇಲ್ಲ. "ರಾಜ್ಯ ಸರ್ಕಾರ ಇಂಧನದ ಮೇಲಿನ ತೆರಿಗೆಯನ್ನು ಕಡಿಮೆ ಮಾಡಬೇಕು" ಎಂದು ಕರ್ನಾಟಕದ ಕೆಲ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದರೆ, ಮೊದಲು ಕೇಂದ್ರ ಸರ್ಕಾರದವರು ಬೆಲೆ ಕಡಿಮೆ ಮಾಡಲಿ. ಅದನ್ನು ಬಿಟ್ಟು ನಮಗೆ ತೆರಿಗೆ ಕಡಿಮೆ ಮಾಡಿ ಎಂದು ಹೇಳುತ್ತಿರುವುದು ಎಷ್ಟು ಸರಿ? ಇಂದು ಅಡುಗೆ ಎಣ್ಣೆ ಬೆಲೆಯೂ ಸಹ ಗಗನಕ್ಕೇರಿದೆ ಎಂದು ತಿರುಗೇಟು ನೀಡಿದ್ದಾರೆ. ಈ ಬೆಲೆ ಏರಿಕೆಯ ವಿರುದ್ಧ ಮೇ 30ರಂದು ನಾವು ಪ್ರತಿ ಜಿಲ್ಲೆಯಲ್ಲೂ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ಆನಂತರ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಪ್ರತಿಭಟನೆ ನಡೆಸಲಿದ್ದೇವೆ. ಜನರೇ ಈ ಕೇಂದ್ರ ಸರ್ಕಾರವನ್ನು ಕಿತ್ತೊಗೆಯುವ ಕೆಲಸ ಮಾಡಬೇಕಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+