ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ : ಬೇಡಿಕೆಗಳೇನು?
ಸರ್ಕಾರದ ವಿರುದ್ದ ಸಾರಿಗೆ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಬೆಳಗ್ಗೆ 10:30 ರಿಂದ 5 ಗಂಟೆಯವರೆಗೆ ನೌಕರರ ಉಪವಾಸ ಸತ್ಯಾಗ್ರಹ ನಡೆಯಲಿದೆ. ಸಾರಿಗೆ ನೌಕರರು ಇಂದು ಫ್ರೀಡಂಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ್ದು, ಸಾರಿಗೆ ನೌಕರರನ್ನ ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಭೇಟಿ ಮಾಡಿ ಅಹವಾಲು ಸ್ವೀಕರಿದ್ದಾರೆ.
ಮಾರ್ಚ್ 4 ರಿಂದ ಸಾರಿಗೆ ನೌಕರರು ಆಹೋರಾತ್ರಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಪ್ಲಾನ್ ರೂಪಿಸಿದ್ದಾರೆ. ಸೇವೆಯಿಂದ ವಜಾ ಆಗಿರುವ ಸಿಬ್ಬಂದಿಗೆ ನ್ಯಾಯ ಒದಗಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಿವೃತ್ತಿ ನೌಕರರು ಹಾಗೂ ಹಾಲಿ ನೌಕರರು ನಗರದ ಫ್ರೀಡಂ ಪಾರ್ಕ್ ನಲ್ಲಿ ಕುಟುಂಬ ಸಮೇತ ಹೋರಾಟ ನಡೆಸಲು ಮುಂದಾಗಿದ್ದಾರೆ. ಅಲ್ಲದೇ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಬಸ್ ಗಳು ನಿಲ್ಲುತ್ತೆ, ಮುಷ್ಕರಕ್ಕೂ ಹೋಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಾರಿಗೆ ನೌಕರರ ಬೇಡಿಕೆಗಳೇನು?
ಮೂಲ ವೇತನದ 25% ವೇತನ ಹೆಚ್ಚಿಸಬೇಕು.
2020ರ ಜನವರಿ 1ರಿಂದ ಅನ್ವಯವಾಗುವಂತೆ ವೇತನ ಹೆಚ್ಚಳದ ಬಾಕಿ ಹಣ ನೀಡಬೇಕು.
2020ರ ಜನವರಿ 1ರಿಂದ ರಿಂದ ನಿವೃತ್ತ ನೌಕರರ ವೇತನ ಹೆಚ್ಚಳದ ಫಿಕ್ಸೇಷನ್ ಆಗಬೇಕು.
ನಿವೃತ್ತಿ ನೌಕರರಿಗೆ ಅಂತಿಮವಾಗಿ ಬರಬೇಕಾದ ಹಣ ಕೊಡಬೇಕು ಮತ್ತು 38 ತಿಂಗಳ ವೇತನ ಹೆಚ್ಚಳದ ಬಾಕಿ ನೌಕರರಿಗೆ ನೀಡಬೇಕು.
ಉಚಿತ ಔಷಧಿ ಸೇರಿದಂತೆ ವೈದ್ಯಕೀಯ ಸೌಲಭ್ಯ ನೀಡಬೇಕು
2021ರ ಮುಷ್ಕರದ ವೇಳೆ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ಎಲ್ಲಾ ರೀತಿಯ ಶಿಕ್ಷೆಗಳು ಹಿಂಪಡೆಯಬೇಕು.
ಎಲೆಕ್ಟ್ರಿಕ್ ಬಸ್‌ಗಳನ್ನು ಸಾರಿಗೆ ನಿಗಮಗಳೇ ಓಡಿಸಬೇಕು.
ಕೇಂದ್ರ ಸರ್ಕಾರ FAME-2 ಯೋಜನೆ ( ಎಲೆಕ್ಟ್ರಿಕ್ ಬಸ್‌ಗಳನ್ನು) ಖಾಸಗಿಯವರ ಮೂಲಕ ಓಡಿಸುವ ಖಾಸಗೀಕರಣವನ್ನು ವಿರೋಧಿಸಬೇಕು.
ಭ್ರಷಾಚಾರದ ಆಡಳಿತಕ್ಕೆ ಕಡಿವಾಣ ಹಾಕಬೇಕು.
ಎಲ್ಲಾ ನಿಗಮಗಳ ನೌಕರರ ಮುಂಬಡ್ತಿಗೆ ಕ್ರಮವಹಿಸುವುದು. ವಿವಿಧ ಭತ್ಯೆಗಳನ್ನ ಐದು ಪಟ್ಟು ಹೆಚ್ಚಿಸುವುದು.
ಆಡಳಿತ ವರ್ಗ ಏಕ ಪಕ್ಷೀಯವಾಗಿ ಸುತ್ತೋಲೆಗಳನ್ನು ತರುವ ಪದ್ಧತಿ ನಿಲ್ಲಿಸಿ, ಕಾರ್ಮಿಕ ಸಂಘಗಳ ಜತೆ ಮಾತುಕತೆ ನಡೆಸಿ ಉತ್ತಮ ಕೈಗಾರಿಕಾ ಬಾಂದವ್ಯ ರೂಪಿಸಬೇಕು.
ಸರ್ಕಾರಿ ನೌಕರರ ಸಂಬಳ ಸಾರಿಗೆ ನೌಕರರಿಗೂ ವಿಸ್ತರಣೆ ಮಾಡಬೇಕು
ಪ್ರತಿಭಟನಕಾರರ ಭೇಟಿ ಮಾಡಿದ ಆರ್ ಬಿ ತಿಮ್ಮಾಪೂರ
ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಷನ್ ಸದಸ್ಯರನ್ನು ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಭೇಟಿ ಮಾಡಿ ಅಹವಾಲು ಸ್ವೀಕರಿಸಿದರು. ಚಿಲ್ಲರೆ ಮದ್ಯ ಮಾರಾಟ ಲಾಭಾಂಶ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಕುರಿತು ಮನವಿ ಸ್ವೀಕರಿಸಿದ ಸಚಿವ ಆರ್ ಬಿ ತಿಮ್ಮಾಪೂರ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.












Click it and Unblock the Notifications