ಕಸ್ತೂರಿ ರಂಗನ್ ವರದಿ ಶಿಫಾರಸುಗಳ ಸಂಪೂರ್ಣ ಅನುಷ್ಠಾನ ಅಸಾಧ್ಯ: ಈಶ್ವರ್ ಖಂಡ್ರೆ
ಬೆಂಗಳೂರು, ಆಗಸ್ಟ್ 29: ಕೇಂದ್ರ ಸರ್ಕಾರದ ಕಸ್ತೂರಿರಂಗನ್ ಸಮಿತಿಯ ಶಿಫಾರಸುಗಳನ್ನು ಕರ್ನಾಟಕ ಸರ್ಕಾರ ಪೂರ್ಣವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಬುಧವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ನೀಡಿದ ಸಲಹೆಗಳ ಆಧಾರದ ಮೇಲೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕರ್ನಾಟಕ ವ್ಯಾಪ್ತಿಯಲ್ಲಿ 20,668 ಚದರ ಕಿಲೋಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಅಧಿಸೂಚನೆ ಹೊರಡಿಸುವ ಸಮಿತಿಯ ಶಿಫಾರಸುಗಳನ್ನು ಪೂರ್ಣವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಸಂಪುಟ ಉಪ ಸಮಿತಿಯ ಅಧ್ಯಕ್ಷರೂ ಆಗಿರುವ ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ತಿಳಿಸಿದ್ದಾರೆ.

ಪಶ್ಚಿಮ ಘಟ್ಟ ಪ್ರದೇಶಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಆಗಸ್ಟ್ 2ರಂದು ಹೊರಡಿಸಿರುವ 6ನೇ ಅಧಿಸೂಚನೆ (ಕಸ್ತೂರಿ ರಂಗನ್ ಸಮಿತಿ ವರದಿ)ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ, 10 ಜಿಲ್ಲೆಗಳ ಜನಪ್ರತಿನಿಧಿಗಳ ಅಭಿಪ್ರಾಯಪಡೆದು ಸಂಪುಟಕ್ಕೆ ಅಭಿಪ್ರಾಯ ಮಂಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಸಚಿವ ಸಂಪುಟದ ಉಪಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ನಡೆದ ಈ ಸಭೆಯಲ್ಲಿ ಸಚಿವರುಗಳಾದ ಡಾ.ಎಚ್.ಸಿ. ಮಹದೇವಪ್ಪ, ಕೆ.ಜೆ. ಜಾರ್ಜ್, ದಿನೇಶ್ ಗುಂಡೂರಾವ್, ಮಧು ಬಂಗಾರಪ್ಪ, ಮಾಂಕಾಳ್ ವೈದ್ಯ ಭಾಗಿಯಾಗಿ ಪರಿಸರ ಸೂಕ್ಷ್ಮ ಪ್ರದೇಶದ ಕುರಿತಂತೆ ಕೇಂದ್ರದ ಅಧಿಸೂಚನೆ ಒಪ್ಪಿಕೊಂಡರೆ ಪಶ್ಚಿಮಘಟ್ಟದ ಜನರ ಬದುಕಿನ ಮೇಲೆ ಆಗಬಹುದಾದ ಪರಿಣಾಮ, ಸಾಧಕ ಬಾಧಕಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.
ಈಶ್ವರ ಖಂಡ್ರೆ ಮಾತನಾಡಿ ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದ ಪಶ್ಚಿಮ ಘಟ್ಟದಲ್ಲಿ 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವಂತೆ ಸೂಚಿಸಿದೆ. ಆದರೆ ಈಗಾಗಲೇ ರಾಜ್ಯ ಸರ್ಕಾರ ವನ್ಯಜೀವಿಧಾಮ, ಅಭಯಾರಣ್ಯ, ಹುಲಿ ಸಂರಕ್ಷಿತ ಮೀಸಲು ಸೇರಿದಂತೆ ವಿವಿಧ ಅರಣ್ಯ ಪ್ರದೇಶದಲ್ಲಿ 16632 ಚದರ ಕಿ.ಮೀ.ಪ್ರದೇಶವು ಘೋಷಿತ ಅರಣ್ಯ, ಸಂರಕ್ಷಿತ ಪ್ರದೇಶ ಮತ್ತು ಸಂರಕ್ಷಿತ ಪ್ರದೇಶಗಳಿಗೆ ಹೊಂದುಕೊಂಡಿರುವ ಪರಿಸರ ಸೂಕ್ಷ್ಮ ವಲಯ (ಇ.ಎಸ್.ಝಡ್) ಎಂದು ಘೋಷಿಸಿದ್ದು, ಈ ಎಲ್ಲ ಪ್ರದೇಶಗಳು ಸಂರಕ್ಷಿತವಾಗಿರುತ್ತದೆ. ಹೀಗಾಗಿ ಇದಕ್ಕಷ್ಟೇ ಸೀಮಿತಗೊಳಿಸಿ ಡಾ. ಕಸ್ತೂರಿ ರಂಗನ್ ಸಮಿತಿಯ ಶಿಫಾರಸಿನಂತೆ ಕೇಂದ್ರ ಸರ್ಕಾರ ಹೊರಡಿಸಿರುವ 6ನೇ ಅಧಿಸೂಚನೆಗೆ ಸರ್ಕಾರದ ನಿಲುವು ವ್ಯಕ್ತಪಡಿಸಲು ಸಚಿವ ಸಂಪುಟಕ್ಕೆ ಶಿಫಾರಸು ಮಾಡಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಪಶ್ಚಿಮ ಘಟ್ಟ ಪ್ರದೇಶದಲ್ಲಿ 1533 ವಸತಿ ಪ್ರದೇಶಗಳಿದ್ದು, ಇಲ್ಲಿರುವ ಜನರ ಬದುಕಿಗೆ ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ನಿರ್ದಿಷ್ಟ ಷರತ್ತುಗಳನ್ನು ಮುಂದಿಟ್ಟು ಕೇಂದ್ರ ಸರ್ಕಾರಕ್ಕೆ ಸೆಪ್ಟೆಂಬರ್ ಅಂತ್ಯದೊಳಗೆ ರಾಜ್ಯದ ನಿಲುವು ತಿಳಿಸಬೇಕಾಗುತ್ತದೆ ಎಂದು ಹೇಳಿದರು. ಅಂತಿಮವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಂತರ ಪಶ್ಚಿಮಘಟ್ಟದ 10 ಜಿಲ್ಲೆಗಳ ಜನಪ್ರತಿನಿಧಿಗಳ ಅಭಿಪ್ರಾಯಪಡೆದು ಸಚಿವ ಸಂಪುಟಕ್ಕೆ ಅಂತಿಮ ಶಿಫಾರಸು ಸಲ್ಲಿಸಲು ತೀರ್ಮಾನಿಸಲಾಯಿತು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications