ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದಿರಾ ಕ್ಯಾಂಟೀನ್ ಕಡೆ ಗಮನಹರಿಸಿ ಸಿಎಂಗೆ ಸಿದ್ದರಾಮಯ್ಯ ಪತ್ರ

|
Google Oneindia Kannada News

ಬೆಂಗಳೂರು, ಡಿಸೆಂಬರ್ 03: ಕರ್ನಾಟಕದ ಬಿಜೆಪಿ ಸರ್ಕಾರ ಬಡಜನರ ಅನ್ನ ಕಸಿಯಲು ಹೊರಟಿರುವುದು ಅಮಾನವೀಯ. ಇಂದಿರಾ ಕ್ಯಾಂಟೀನ್ ಯೋಜನೆಗೆ ಬೇಕಾದ ಅನುದಾನದ ಜೊತೆಗೆ ಅಗತ್ಯ ಸೌಲಭ್ಯಗಳನ್ನು ನೀಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, "ನಮ್ಮ ಸರ್ಕಾರ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಯೋಜನೆಗೆ ನಿಗದಿತ ಅನುದಾನ ನೀಡದೆ ರಾಜ್ಯ ಬಿಜೆಪಿ ಸರ್ಕಾರ ಬಡಜನರ ಅನ್ನ ಕಸಿಯಲು ಹೊರಟಿರುವುದು ಅಮಾನವೀಯ" ಎಂದು ಹೇಳಿದ್ದಾರೆ.

ಬೆಂಗಳೂರಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಇಡ್ಲಿ ಸಿಗುತ್ತಿಲ್ಲ! ಬೆಂಗಳೂರಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಇಡ್ಲಿ ಸಿಗುತ್ತಿಲ್ಲ!

"ಇಂದಿರಾ ಕ್ಯಾಂಟೀನ್ ಯೋಜನೆಗೆ ಬೇಕಾದ ಅನುದಾನದ ಜೊತೆಗೆ ಅಗತ್ಯ ಸೌಲಭ್ಯಗಳನ್ನು ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಖುದ್ದು ಗಮನಹರಿಸಬೇಕು" ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟ ನೀಡಿ ಎಎಪಿ ಒತ್ತಾಯಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟ ನೀಡಿ ಎಎಪಿ ಒತ್ತಾಯ

"ಈ ಹಿಂದೆ ಸರ್ಕಾರ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾಯಿಸಿ ರಾಜಕಾರಣ ಮಾಡಲು ಸಹ ಪ್ರಯತ್ನಿಸಲಾಗಿತ್ತು" ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.

ಫ್ಲೈ ಓವರ್ ಗೆ ಸಾವರ್ಕರ್ ಹೆಸರು ವಿರೋಧಿಸಿದ್ದಕ್ಕೆ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿಫ್ಲೈ ಓವರ್ ಗೆ ಸಾವರ್ಕರ್ ಹೆಸರು ವಿರೋಧಿಸಿದ್ದಕ್ಕೆ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ

ರೂ. 28 ಕೋಟಿ ಬಾಕಿ ಉಳಿದಿದೆ

ರೂ. 28 ಕೋಟಿ ಬಾಕಿ ಉಳಿದಿದೆ

ಇಂದಿರಾ ಕ್ಯಾಂಟೀನ್‌ಗೆ ಬಿಡುಗಡೆ ಮಾಡಬೇಕಿರುವ ಹಣವನ್ನು ನಿಗದಿತವಾಗಿ ಬಿಡುಗಡೆ ಮಾಡದೇ ಸತಾಯಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ ಕ್ಯಾಂಟೀನ್‌ಗಳಿಗೆ ಸುಮಾರು 28 ಕೋಟಿ ರೂ.ಗಳನ್ನು 6 ತಿಂಗಳಿನಿಂದ ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.

ಮುಚ್ಚಲು ಪ್ರಯತ್ನ ಮಾಡುತ್ತಿರುವಂತಿದೆ

ಮುಚ್ಚಲು ಪ್ರಯತ್ನ ಮಾಡುತ್ತಿರುವಂತಿದೆ

ದುಡಿಯುವ ಕಾರ್ಮಿಕರು, ಬಡವರು ಮುಂತಾದವರ ಹಸಿವನ್ನು ನೀಗಿಸಲು ಬಿಬಿಎಂಪಿ ಮತ್ತು ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗಿತ್ತು. ಈ ಕ್ಯಾಂಟೀನ್‌ಗಳು ಸುಸೂತ್ರವಾಗಿ ರಾಜ್ಯದ ಉದ್ದಗಲಕ್ಕೂ ಹಸಿದವರ ಹೊಟ್ಟೆ ತುಂಬಿಸುವ ಕೆಲಸವನ್ನು ಮಾಡುತ್ತಿದ್ದವು. ಆದರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ನಿರಂತರವಾಗಿ ಕ್ಯಾಂಟೀನ್‌ಗಳನ್ನು ವ್ಯವಸ್ಥಿತವಾಗಿ ಮುಚ್ಚಲು ಪ್ರಯತ್ನ ಮಾಡುತ್ತಿರುವಂತೆ ಕಾಣುತ್ತಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ನೀರಿನ ಸಂಪರ್ಕ ನಿಲ್ಲಿಸಲಾಗಿದೆ

ನೀರಿನ ಸಂಪರ್ಕ ನಿಲ್ಲಿಸಲಾಗಿದೆ

ಬೆಂಗಳೂರು ನಗರದಲ್ಲಿ 198 ಕ್ಯಾಂಟೀನ್‌ಗಳಿಗೆ ನೀರಿನ ಸಂಪರ್ಕ ಮತ್ತು ಸ್ಯಾನಿಟರಿ ಲೈನ್ ಅನ್ನು ಜಲಮಂಡಳಿ ಕಡಿತಗೊಳಿಸಿದೆ. ಅಲ್ಲದೇ 12 ಅಡಿಗೆ ಮನೆಗಳಿಗೂ ನೀರಿನ ಸಂಪರ್ಕ ನಿಲ್ಲಿಸಲಾಗಿದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಹೇಳಿದ್ದಾರೆ.

Recommended Video

Burevi ಚಂಡಮಾರುತ ಕೇರಳ ಪ್ರವೇಶಿಸಿದ್ದಕ್ಕೆ , ನಮ್ಮ ರಾಜ್ಯದಲ್ಲಿ ಮಳೆ | Oneindia Kannada
200 ರಿಂದ 250 ಕೋಟಿ ಖರ್ಚು

200 ರಿಂದ 250 ಕೋಟಿ ಖರ್ಚು

ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆಗೆ ಹೆಚ್ಚೆಂದರೆ ವಾರ್ಷಿಕ 200 ರಿಂದ 250 ಕೋಟಿ ಖರ್ಚು ಬರಬಹುದು. ಹಸಿದವರ ಹೊಟ್ಟೆ ತುಂಬಿಸಲು ಸರ್ಕಾರ ಇಷ್ಟನ್ನೂ ಮಾಡಲು ಮೀನಾಮೇಷ ಎಣಿಸುತ್ತದೆ ಎಂದಾದರೆ ನಿಮ್ಮ ಕಾಳಜಿಯ ಕುರಿತಾಗಿ ಸಂದೇಹಗಳು ಹುಟ್ಟುತ್ತದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಹೇಳಿದ್ದಾರೆ.


English summary
Opposition leader of Karnataka Siddaramaiah wrote to chief minister B. S. Yediyurappa to release fund for maintenance of Indira Canteen.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X