ಪ್ರಥಮದರ್ಜೆ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ
ಬೆಂಗಳೂರು, ಏಪ್ರಿಲ್ 26; ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಣೆ ಮಾಡುತ್ತಿರುವವರಿಗೆ ಸಿಹಿಸುದ್ದಿ ಸಿಕ್ಕಿದೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಗೌರವಧನವನ್ನು ನೀಡಲು ಅನುದಾನ ಬಿಡುಗಡೆ ಮಾಡಲು ಷರತ್ತುಬದ್ಧ ಅನುಮತಿಯನ್ನು ನೀಡಿ ಆದೇಶ ಹೊರಡಿಸಲಾಗಿದೆ.
ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಮಾರ್ಚ್-2023 ಮತ್ತು ಏಪ್ರಿಲ್-2023ರ ಮಾಹೆಗಳ ಗೌರವಧನವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡುವ ಬಗ್ಗೆ ಎಂಬ ವಿಷಯವನ್ನು ಆದೇಶ ಒಳಗೊಂಡಿದೆ.

2023-24ನೇ ಸಾಲಿಗೆ ಶಿಕ್ಷಣ ಇಲಾಖೆಯ ಉನ್ನತಶಿಕ್ಷಣ ವಲಯದಲ್ಲಿ ಬರುವ ಕಾಲೇಜು ಶಿಕ್ಷಣಕ್ಕೆ (ರಾಜ್ಯ ವಲಯ ಯೋಜನೆಗಳು) ಸಂಬಂಧಿಸಿದಂತೆ ಏಪ್ರಿಲ್ 2023ರಿಂದ ಜುಲೈ-2023ರ ಅವಧಿಯ ವೆಚ್ಚಕ್ಕಾಗಿ ಅನುದಾನ ಬಿಡುಗಡೆಗೊಳಿಸಲು ಇಲಾಖಾ ಕಾರ್ಯದರ್ಶಿಗಳಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ ಎಂದು ಆದೇಶದಲ್ಲಿ ವಿವರಣೆ ನೀಡಲಾಗಿದೆ.
ಅನುದಾನ ಬಿಡುಗಡೆಗೆ ಆದೇಶ; ಸರ್ಕಾರದ ಅನುದಾನ ಬಿಡುಗಡೆ ಆದೇಶದಲ್ಲಿ 2023-24ನೇ ಸಾಲಿಗೆ ಶಿಕ್ಷಣ ಇಲಾಖೆಯ ಉನ್ನತ ಶಿಕ್ಷಣ ವಲಯದಡಿ ಬರುವ ಕಾಲೇಜು ಶಿಕ್ಷಣಕ್ಕೆ (ರಾಜ್ಯ ವಲಯ ಯೋಜನೆಗಳು) ಸಂಬಂಧಿಸಿದಂತೆ ಏಪ್ರಿಲ್-2023 ರಿಂದ ಜುಲೈ-2025ರ ಅವಧಿಯ ವೆಚ್ಚಕ್ಕಾಗಿ ಅನುದಾನ ಬಿಡುಗಡೆಮಾಡಿ ಆದೇಶಿಸಲಾಗಿದೆ. ಬಿಡುಗಡೆ ಆಗಿರುವ ಅನುದಾನದಲ್ಲಿ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಮಾರ್ಚ್-2023 ಮತ್ತು ಏಪ್ರಿಲ್-2023ರ ಮಾಹೆಗಳ ಗೌರವಧನವನ್ನು ಪಾವತಿಸಬಹುದಾಗಿದೆ.
324 ಅತಿಥಿ ಉಪನ್ಯಾಸಕರ ಗೌರವಧನ ಬಿಡುಗಡೆಗೆ ಸಂಬಂಧಪಟ್ಟ ಪ್ರಾಂಶುಪಾಲರುಗಳಿಗೆ ಸೂಚನೆ ನೀಡಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಗೌರವಧನವನ್ನು ಪಾವತಿಸಲು ರೂ. 51,71,48,684 ನಿಯಮಾನುಸಾರ ಬಳಕೆ ಮಾಡಲು ಅನುಮತಿ ನೀಡಲಾಗಿದೆ.
ಷರತ್ತುಗಳು; ಗೌರವಧನ ಬಿಡುಗಡೆಗೆ ಷರತ್ತುಗಳನ್ನು ಸಹ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ. 2022-23ನೇ ಸಾಲಿನ ವಿವಿಧ ವಿಷಯಗಳಿಗೆ ಸರ್ಕಾರದ ಆದೇಶ/ ಸುತ್ತೋಲೆಗಳ ಅನ್ವಯ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡು ಪಾದೇಶಿಕ ಜಂಟಿ ನಿರ್ದೇಶಕರ ಕಚೇರಿಯಿಂದ ಅನುಮೋದನೆಗೊಂಡಿರುವ ಉಪನ್ಯಾಸಕರುಗಳಿಗೆ ಗೌರವಧನವನ್ನು ಕರ್ತವ್ಯ ನಿರ್ವಹಿಸಿದ ಅವಧಿಗೆ ಮಾತ್ರ ಪಾವತಿಸತಕ್ಕದ್ದು ಹಾಗೂ ಪ್ರಾದೇಶಿಕ ಜಂಟಿ ನಿರ್ದೇಶಕರುಗಳಿಂದ ಅನುಮೋದನೆಗೊಂಡಿಲ್ಲದ ಅತಿಥಿ ಉಪನ್ಯಾಸಕರಿಗೆ ಗೌರವಧನ ಪಾವತಿಸಿದ್ದಲ್ಲಿ ಸಂಬಂಧಪಟ್ಟ ಪ್ರಾಂಶುಪಾಲರನ್ನು ನೇರ ಹೊಣೆಗಾರರನ್ನಾಗಿ ಮಾಡಿ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ತಿಳಿಸಲಾಗಿದೆ.
ಕಛೇರಿಯ ವೆಬ್-ಸೈಟ್‌ನಲ್ಲಿ ಪ್ರಕಟಿಸಿರುವ ಮಾರ್ಗಸೂಚಿಗಳಂತ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ವಿಭಾಗಿಸಿ 15/19 ಗಂಟೆಗಳ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರುಗಳು ನೇಮಕಗೊಂಡಿರತಕ್ಕದ್ದು. ಅತಿಥಿ ಉಪನ್ಯಾಸಕರನ್ನು ತೆಗೆದುಕೊಳ್ಳುವ ಉದ್ದೇಶದಿಂದ ಹೆಚ್ಚುವರಿ ವಿಭಾಗ ತೆರೆದು ಹೆಚ್ಚಿನ ಕಾರ್ಯಭಾರ ತೋರಿಸಿ ಅಥವಾ ಹೆಚ್ಚುವರಿ ಕಾರ್ಯಭಾರ ಲೆಕ್ಕಚಾರ ಮಾಡಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು ಗೌರವಧನ ಪಾವತಿಸಿದ್ದಲ್ಲಿ ಸಂಬಂಧಿಸಿದ ಪ್ರಾಂಶುಪಾಲರು ಮತ್ತು ಕಛೇರಿ ಸಿಬ್ಬಂದಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
28/1/2023ರ ಆದೇಶದ ಪ್ರಕಾರ ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಗೌರವಧನವನ್ನು ಪಾವತಿಸುವ ಸಂಬಂಧ ಕೇಂದ್ರಕಛೇರಿಯ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಲಭ್ಯವಿರುವ ಇ. ಎಂ. ಐ. ಎಸ್ ಮಾಹಿತಿಯ ಆಧಾರದ ಮೇರೆಗೆ ಮಾರ್ಚ್ 2023 ಮತ್ತು ಏಪ್ರಿಲ್ 2023ರ ಮಾಹೆಗಳಿಗೆ ಗೌರವಧನದ ಅನುದಾನವನ್ನು ಬಿಡುಗಡೆ ಮಾಡಲಾಗಿರುತ್ತದೆ. ನಿಯಾಮನುಸಾರ ಸದರಿ ಅನುದಾನವನ್ನು ಬಳಸಿಕೊಂಡು ಬಳಕೆ ಪ್ರಮಾಣ ಪತ್ರವನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications