ರಾಜ್ಯದ ಜನತೆಗೆ ಗುಡ್ ನ್ಯೂಸ್: ಬಡವರಿಗಾಗಿ ಮತ್ತಷ್ಟು ಗ್ಯಾರಂಟಿ ಜಾರಿ
ಚಿತ್ರದುರ್ಗ, ಫೆಬ್ರವರಿ 19: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಭರ್ಜರಿಯಾಗಿ ಕಾಂಗ್ರೆಸ್ ಗೆಲುವು ಸಾಧಿಸಿಲು ಪ್ರಮುಖ ಕಾರಣ ಕಾಂಗ್ರೆಸ್ ನಾಯಕರು ನೀಡಿದ ಪಂಚ ಗ್ಯಾರಂಟಿ ಯೋಜನಗಳು. ಇದೀಗ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನ ಜಾರಿಗೊಳಿಸಿದೆ.
ಹೌದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಂತ ಹಂತವಾಗಿ ಐದು ಗ್ಯಾರಂಟಿಗಳ ಪೈಕಿ, ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಯನ್ನ ಜಾರಿಗೊಳಿಸಿದೆ. ಅಲ್ಲದೇ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ನಾಯಕರು, ಕರ್ನಾಟಕದ ಜನತೆ ಸೂಕ್ತ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳು ತಲುಪಬೇಕು ಎಂಬ ನೀಡಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕಮಾರ್ ಅವರು ಸೂಚನೆ ನೀಡಿದ್ದಾರೆ.

ಇನ್ನೂ ಪಂಚ ಗ್ಯಾರಂಟಿಗಳ ಜೊತೆಗೆ ಮುಂದಿನ ದಿನಗಳಲ್ಲಿ ಬಡವರಿಗಾಗಿ ಇನ್ನಷ್ಟು ಯೋಜನೆ ತರಲಾಗುವುದು ಗ್ಯಾರಂಟಿ ಜಾರಿಗೆ ತರಲಾಗುವುದು. ಸಾರ್ವಜನಿಕರ ಹಣವನ್ನು ಬಡವರು, ದೀನ ದಲಿತರು ಎಲ್ಲಾ ವರ್ಗದವರಿಗೂ ಮತ್ತಷ್ಟು ತಲುಪಿಸಲಾಗುವುದು ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಗ್ಯಾರಂಟಿ ಯೋಜನೆ ತರಲಾಗುವುದು. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಮಹಿಳೆಯರಿಗೆ ನೀಡಿದ್ದು, ಶೇಕಡ 98 ರಷ್ಟು ಮಹಿಳೆಯರು ಪ್ರಯೋಜನ ಪಡೆದಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಬಡವರು ಸ್ವಾವಲಂಬನೆಯಿಂದ ಕುಟುಂಬ ಹಾಗೂ ಜೀವನ ನಿರ್ವಹಣೆ ಮಾಡುತ್ತಿದ್ದಾರೆ ಎಂದು ಸಚಿವ ಡಿ. ಸುಧಾಕರ್ ಹೇಳಿದರು.












Click it and Unblock the Notifications