ಕುತೂಹಲ ಕೆರಳಿಸಿದ ಡಿ.ಕೆ. ಶಿವಕುಮಾರ್-ಪರಮೇಶ್ವರ್ ಭೇಟಿ
Recommended Video

ಬೆಂಗಳೂರು, ಸೆಪ್ಟೆಂಬರ್ 14: ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಚಟುವಟಿಕೆಗಳು ನಡೆಯುತ್ತಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಮತ್ತು ಸಚಿವ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ್ದಾರೆ.
ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಮನೆಗೆ ಬೆಳಿಗ್ಗೆ 9.30ರ ಸುಮಾರಿಗೆ ತೆರಳಿರುವ ಪರಮೇಶ್ವರ್ ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಶಿವಕುಮಾರ್ ಅವರ ಮನೆಗೆ ಆಗಮಿಸಿದ್ದಾರೆ.
ಬೆಳಗಾವಿಯ ಸಹೋದರರಾದ ಸತೀಸ್ ಮತ್ತು ಜಾರಕಿಹೊಳಿ ಸಹೋದರರ ಬಂಡಾಯದ ಕುರಿತು ಈ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಡಿ.ಕೆ. ಶಿವಕುಮಾರ್ ಬೆಂಬಲ ನೀಡುತ್ತಿರುವುದರ ವಿರುದ್ಧ ಜಾರಕಿಹೊಳಿ ಸಹೋದರರು ಸಿಡಿದೆದ್ದಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಡಿಕೆಶಿ ಬೆಂಬಲ ಸಿಗುತ್ತಿರುವುದು ಜಾರಕಿಹೊಳಿ ಸಹೋದರರಿಗೆ ಹಿನ್ನಡೆ ಉಂಟುಮಾಡಿದೆ. ಇದರಿಂದ ಅವರು ಬಂಡಾಯ ಏಳುವ ಸೂಚನೆ ನೀಡಿರುವುದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.
ಈಗಾಗಲೇ ಜಾರಕಿಹೊಳಿ ಸಹೋದರರು ಕಾಂಗ್ರೆಸ್ ನಾಯಕರ ಮುಂದೆ ಹಲವು ಷರತ್ತುಗಳನ್ನು ಮುಂದಿಟ್ಟಿದ್ದಾರೆ. ಅವುಗಳಲ್ಲಿ ಬೆಳಗಾವಿ ರಾಜಕೀಯದಲ್ಲಿ ಪಕ್ಷದ ಯಾವುದೇ ನಾಯಕರು ಹಸ್ತಕ್ಷೇಪ ಮಾಡಬಾರದು ಎನ್ನುವುದು ಮುಖ್ಯವಾಗಿದೆ. ಅದರಲ್ಲಿಯೂ ಡಿ.ಕೆ. ಶಿವಕುಮಾರ್ ಅಲ್ಲಿನ ವಿಚಾರದಲ್ಲಿ ಮಧ್ಯಪ್ರವೇಶ ಮಾಡದಂತೆ ಸೂಚಿಸುವಂತೆ ಆಗ್ರಹಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಪರಮೇಶ್ವರ್ ಭೇಟಿ ಮಹತ್ವ ಪಡೆದಿದೆ.












Click it and Unblock the Notifications