ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಯಾರೂ ವಿರೋಧ ಮಾಡಿದರೂ ಟಿಪ್ಪು ಜಯಂತಿ ಆಚರಣೆ ಮಾಡುತ್ತೇವೆ'

|
Google Oneindia Kannada News

ಬೆಂಗಳೂರು, ನವೆಂಬರ್ 04 : 'ಯಾರೂ ವಿರೋಧ ವ್ಯಕ್ತಪಡಿಸಿದರೂ ಪ್ರತಿ ವರ್ಷದಂತೆ ಈ ವರ್ಷವೂ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ಮಾಡಲಾಗುತ್ತದೆ' ಎಂದು ಉಪ ಮುಖ್ಯಮಂತ್ರಿ, ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, 'ಟಿಪ್ಪು ಜಯಂತಿ ಆಚರಣೆಯನ್ನು ಬಿಜೆಪಿಯವರು ಅನಗತ್ಯವಾಗಿ ವಿರೋಧಿಸುತ್ತಿದ್ದಾರೆ. ಅವರು ಎಷ್ಟೇ ವಿರೋಧಿಸಿದರೂ ಬ್ರಿಟಿಷರ ವಿರುದ್ಧ ಹೋರಾಡಿದ ಟಿಪ್ಪುವಿನ ಜಯಂತಿಯನ್ನು ಸರ್ಕಾರ ಯಾವುದೇ ಅಹಿತಕರ ಘಟನೆ ನಡೆಯದಂತೆ ಆಚರಣೆ ಮಾಡಲಿದೆ' ಎಂದರು.

ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆಗೆ ವಿರೋಧಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆಗೆ ವಿರೋಧ

'ಬಿಜೆಪಿಯವರು ಟಿಪ್ಪು ವಿಚಾರ ಇಟ್ಟುಕೊಂಡು ಕೋಮು ಸೌಹಾರ್ದ ಕದಡುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಅವಕಾಶ ನೀಡುವುದಿಲ್ಲ. ಟಿಪ್ಪು ಜಯಂತಿ ಆಚರಣೆ ವೇಳೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೋಮವಾರ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದೇನೆ' ಎಂದು ಪರಮೇಶ್ವರ ತಿಳಿಸಿದರು.

ಟಿಪ್ಪು ಜಯಂತಿ : ಸರ್ಕಾರಕ್ಕೆ 1 ಸಾವಿರ ರೂ. ದಂಡ ಹಾಕಿದ ಹೈಕೋರ್ಟ್ಟಿಪ್ಪು ಜಯಂತಿ : ಸರ್ಕಾರಕ್ಕೆ 1 ಸಾವಿರ ರೂ. ದಂಡ ಹಾಕಿದ ಹೈಕೋರ್ಟ್

G Parameshwar says Karnataka will continue to celebrate Tipu Jayanti

'ಹಿರಿಯ ವಿಚಾರವಾದಿ ಚಿದಾನಂದಮೂರ್ತಿ ಅವರ ಬಗ್ಗೆ ಅಪಾರ ಗೌರವವಿದೆ. ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದ್ದು, ಅದರಂತೆ ಅವರು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ಹಿಂದೆಯೇ ನಿರ್ಧಾರವಾದಂತೆ ಟಿಪ್ಪು ಜಯಂತಿ ಆಚರಣೆ ಮಾಡಲಾಗುತ್ತದೆ' ಎಂದರು.

ಟಿಪ್ಪು ಸ್ವಾತಂತ್ರ್ಯ ಯೋಧನೇ, ಜಯಂತಿ ಆಚರಣೆ ವಿರೋಧವೇಕೆ?ಟಿಪ್ಪು ಸ್ವಾತಂತ್ರ್ಯ ಯೋಧನೇ, ಜಯಂತಿ ಆಚರಣೆ ವಿರೋಧವೇಕೆ?

ಟಿಪ್ಪು ಜಯಂತಿ ಆಚರಣೆ ಬೇಡ : ಹುಬ್ಬಳ್ಳಿಯಲ್ಲಿ ಭಾನುವಾರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು, 'ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುವುದು ಬೇಡ. ಈ ಹಿಂದೆ ಕಾಂಗ್ರೆಸ್ ಸರ್ಕಾರ ಜಯಂತಿ ಆಚರಣೆ ಮಾಡುವಾಗ ಈಗಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅದನ್ನು ವಿರೋಧಿಸಿದ್ದರು' ಎಂದು ಹೇಳಿದರು.

English summary
Home minister and Deputy Chief Minister G.Parameshwar said that, government would continue to celebrate Tipu Jayanti despite violence in the previous years and opposition from the BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X