ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ : ಕೈಯಲ್ಲಿ ಸಿಗರೇಟ್, ಕಾಫಿ ಮಗ್ ಹಿಡಿದಿರುವ ಫೋಟೋ ವೈರಲ್: ಪರಮೇಶ್ವರ್ ಗರಂ
ಬೆಂಗಳೂರು, ಆಗಸ್ಟ್ 26: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಆಂಡ್ ಗ್ಯಾಂಗ್ ಜೈಲು ಸೇರಿ ಎರಡೂವರೆ ತಿಂಗಳು ಆಗಿಬರುತ್ತಿದೆ. ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿದೆ ಎಂಬುದಕ್ಕೆ ಮೊದಲ ಬಾರಿಗೆ ಬಿಡುಗಡೆಯಾಗಿರುವ ಫೋಟೋಗಳೇ ಸಾಕ್ಷಿಯಾಗಿವೆ.
ಸ್ಪೇಷಲ್ ಬ್ಯಾರಕ್ ಹೊರಗೆ ನಟ ದರ್ಶನ್ ಕುಳಿತಿರುವ ಫೋಟೋ ವೈರಲ್ ಆಗಿದೆ. ರೌಡಿ ವಿಲ್ಸನ್ ಗಾರ್ಡನ್ ನಾಗ, ರೇಣುಕಾಸ್ವಾಮಿ ಕೊಲೆ ಪ್ರಕರಣದ 11ನೇ ಆರೋಪಿ ನಾಗರಾಜ್ ಜೊತೆ ದರ್ಶನ್ ಕುಳಿತಿದ್ದಾರೆ.ಈ ಫೋಟೋದಲ್ಲಿ ನಟ ದರ್ಶನ್ ಕೈಯಲ್ಲಿ ಸಿಗರೇಟು ಮತ್ತು ಕಾಫಿ ಮಗ್ ಹಿಡಿದುಕೊಂಡಿರುವುದು ಕಾಣಬಹುದು.

ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ವಿಡಿಯೋ ಕಾಲ್ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಅವರ ವಿಡಿಯೋ ಕಾಲ್ ಕ್ಲಿಪಿಂಗ್ಗಳು ಸಖತ್ ವೈರಲ್ ಆಗಿವೆ. ಅಲ್ಲದೇ ರೌಡಿಗಳ ಜೊತೆಗೆ ಟೀ ಕುಡಿಯುತ್ತಿರುವ ಫೋಟೋಗಳು ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸಿಟ್ಟಾಗಿದ್ದಾರೆ.
ನಟ ದರ್ಶನ್ ಅವರು ಜೈಲಿನಲ್ಲಿ ಹಾಯಾಗಿ ದಿನಗಳನ್ನು ಕಳೆಯುತ್ತಿದ್ದಾರೆ. ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿದೆ. ದರ್ಶನ್ಗೆ ಇದರಿಂದ ರಾಜಾತಿಥ್ಯ ಸಿಗುತ್ತಿದೆಯೇ ಎನ್ನುವ ಪ್ರಶ್ನೆ ಹುಟ್ಟುವಂತೆ ಮಾಡಿದೆ. ದರ್ಶನ್ ಜೈಲು ಸೇರಿದ ಬಳಿಕ ಹಲವು ಸ್ನೇಹಿತರು ದರ್ಶನ್ ಅವರನ್ನ ಭೇಟಿ ಮಾಡಿ ಕಣ್ಣೀರು ಹಾಕಿದ್ರು. ದರ್ಶನ್ ಅವರು ಜೈಲಲ್ಲಿ ಪಶ್ಚಾತಾಪ ಪಡುತ್ತಿದ್ದಾರೆ ಎಂದೆಲ್ಲ ಹೇಳಲಾಗಿತ್ತು. ಆದರೆ, ಆ ರೀತಿ ಇಲ್ಲ ಎಂಬುದು ಇದೀಗ ಸ್ಪಷ್ಟವಾಗಿದೆ.
ಕೈಯಲ್ಲಿ ಸಿಗರೇಟ್, ಕಾಫಿ ಮಗ್ ಹಿಡಿದಿರುವ ಫೋಟೋ ವೈರಲ್ ಆಗಿದ್ದು, ಈ ಬೆನ್ನಲ್ಲೇ ಗೃಹಸಚಿವ ಜಿ.ಪರಮೇಶ್ವರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ವಿಲ್ಸನ್ ಗಾರ್ಡನ್ ನಾಗ, ಮ್ಯಾನೇಜರ್ ನಾಗರಾಜ್ ಒಟ್ಟಿಗೆ ಸಮಯ ಕಳೆಯುತ್ತಿರೋ ಫೋಟೋನ ಯಾರೋ ವೈರಲ್ ಮಾಡಿದ್ದಾರೆ. ಇದರಿಂದ ದರ್ಶನ್ಗೆ ರಾಜಾತಿಥ್ಯ ಸಿಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡುವಂತೆ ಆಗಿದೆ. ಸದ್ಯ ಬಂದಿಖಾನೆ ಡಿಜಿ ಮಾಲಿನಿ ಕೃಷ್ಣಮೂರ್ತಿ ಜೊತೆ ಗೃಹ ಸಚಿವ ಪರಮೇಶ್ವರ್ ಚರ್ಚೆ ಮಾಡಿದ್ದಾರೆ.
ಇನ್ನೂ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರು ಮಾಲಿನಿ ಕೃಷ್ಣಮೂರ್ತಿ ಜೊತೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ದರ್ಶನ್ಗೆ ರಾಜಾತಿಥ್ಯದ ಬಗ್ಗೆ ಮಾಹಿತಿ ಕೇಳಿದ್ದು, ಪರಮೇಶ್ವರ್ ಗರಂ ಆಗಿದ್ದಾರೆ. ಆಂತರಿಕ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರು ಸೂಚನೆ ನೀಡಿದ್ದಾರೆ ಎಂದು ವರದಿ ಆಗಿದೆ. ಜೈಲಿನಲ್ಲಿ ದರ್ಶನ್ಗೆ ಮೊಬೈಲ್ ಬಳಕೆಗೂ ಅವಕಾಶ ಸಿಗುತ್ತಿದೆ. ಅವರು ಸಹ ಖೈದಿಯ ಮೊಬೈಲ್ನಿಂದ ಇತರ ರೌಡಿ ಶೀಟರ್ ಕುಟುಂಬದವರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.












Click it and Unblock the Notifications