ಕಾಂಗ್ರೆಸ್‌-ಜೆಡಿಎಸ್ ನಾಯಕರ ಸಭೆಗೆ ಗೈರು, ಪರಮೇಶ್ವರ ಸ್ಪಷ್ಟನೆ

ಬೆಂಗಳೂರು, ಮಾರ್ಚ್ 19 : ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಸಭೆಗೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಗೈರು ಹಾಜರಾಗಿದ್ದರು. ಈ ಬಗ್ಗೆ ಚರ್ಚೆಗಳು ಆರಂಭವಾಗಿತ್ತು. ತುಮಕೂರು ಕ್ಷೇತ್ರ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡು ಗೈರಾಗಿದ್ದಾರೆ ಎಂದು ಅಂದಾಜಿಸಲಾಗಿತ್ತು.

ಸೋಮವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌-ಜೆಡಿಎಸ್ ನಾಯಕರ ಸಭೆ ನಡೆಯಿತು. ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆದಿತ್ತು.

ಆದರೆ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಸಭೆಗೆ ಗೈರಾಗಿದ್ದರು. ಈ ಬಗ್ಗೆ ಚರ್ಚೆಗಳು ಆರಂಭವಾಗಿದ್ದವು. ಪರಮೇಶ್ವರ ಅವರು ಈ ಕುರಿತು ಟ್ವೀಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

G Parameshwara clarification why he skipped the meeting

'ಕುಟುಂಬದಲ್ಲಿ ಪೂರ್ವ ನಿಯೋಜಿತ ಕಾರ್ಯಕ್ರಮವಿದ್ದ ಕಾರಣ ಇಂದು ಕಾಂಗ್ರೆಸ್- ಜೆಡಿಎಸ್‌ ಪಕ್ಷದ ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ.ಮೈತ್ರಿ ಪಕ್ಷದ ಹಿರಿಯ ನಾಯಕರೆಲ್ಲಾ ಸೇರಿ ಚುನಾವಣೆಯ ಸಂಬಂಧ ಹಲವು ಸಭೆ ನಡೆಸಿ ರಣತಂತ್ರ ರೂಪಿಸಿದ್ದೇವೆ. ಅಂತೆಯೇ ಜಂಟಿಯಾಗಿ ಚುನಾವಣೆಗೆ ದುಡಿಯಲಿದ್ದೇವೆ' ಎಂದು ಪರಮೇಶ್ವರ ಅವರು ಟ್ವೀಟ್ ಮಾಡಿದ್ದಾರೆ.

ಸಭೆಯ ಬಳಿಕ ಕಾಂಗ್ರೆಸ್-ಜೆಡಿಎಸ್ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದರು. 'ಬಿಜೆಪಿಯನ್ನು ರಾಜ್ಯದಲ್ಲಿ ಸೋಲಿಸುವುದೇ ಮೈತ್ರಿ ಸರ್ಕಾರದ ಮುಖ್ಯ ಉದ್ದೇಶ' ಎಂದು ಎಚ್.ಡಿ.ದೇವೇಗೌಡ ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+