ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌-ಜೆಡಿಎಸ್ ನಾಯಕರ ಸಭೆಗೆ ಗೈರು, ಪರಮೇಶ್ವರ ಸ್ಪಷ್ಟನೆ

|
Google Oneindia Kannada News

ಬೆಂಗಳೂರು, ಮಾರ್ಚ್ 19 : ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಸಭೆಗೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಗೈರು ಹಾಜರಾಗಿದ್ದರು. ಈ ಬಗ್ಗೆ ಚರ್ಚೆಗಳು ಆರಂಭವಾಗಿತ್ತು. ತುಮಕೂರು ಕ್ಷೇತ್ರ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡು ಗೈರಾಗಿದ್ದಾರೆ ಎಂದು ಅಂದಾಜಿಸಲಾಗಿತ್ತು.

ಸೋಮವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌-ಜೆಡಿಎಸ್ ನಾಯಕರ ಸಭೆ ನಡೆಯಿತು. ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆದಿತ್ತು.

ಮಾರ್ಚ್ 31ರಂದು ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ರಣಕಹಳೆ: ಜಂಟಿ ಘೋಷಣೆಮಾರ್ಚ್ 31ರಂದು ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ರಣಕಹಳೆ: ಜಂಟಿ ಘೋಷಣೆ

ಆದರೆ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಸಭೆಗೆ ಗೈರಾಗಿದ್ದರು. ಈ ಬಗ್ಗೆ ಚರ್ಚೆಗಳು ಆರಂಭವಾಗಿದ್ದವು. ಪರಮೇಶ್ವರ ಅವರು ಈ ಕುರಿತು ಟ್ವೀಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

2019ರ ಲೋಕಸಭಾ ಚುನಾವಣೆ ದೇವೇಗೌಡರ ಕುಟುಂಬಕ್ಕೆ ಅಗ್ನಿಪರೀಕ್ಷೆ?2019ರ ಲೋಕಸಭಾ ಚುನಾವಣೆ ದೇವೇಗೌಡರ ಕುಟುಂಬಕ್ಕೆ ಅಗ್ನಿಪರೀಕ್ಷೆ?

G Parameshwara clarification why he skipped the meeting

'ಕುಟುಂಬದಲ್ಲಿ ಪೂರ್ವ ನಿಯೋಜಿತ ಕಾರ್ಯಕ್ರಮವಿದ್ದ ಕಾರಣ ಇಂದು ಕಾಂಗ್ರೆಸ್- ಜೆಡಿಎಸ್‌ ಪಕ್ಷದ ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ.ಮೈತ್ರಿ ಪಕ್ಷದ ಹಿರಿಯ ನಾಯಕರೆಲ್ಲಾ ಸೇರಿ ಚುನಾವಣೆಯ ಸಂಬಂಧ ಹಲವು ಸಭೆ ನಡೆಸಿ ರಣತಂತ್ರ ರೂಪಿಸಿದ್ದೇವೆ. ಅಂತೆಯೇ ಜಂಟಿಯಾಗಿ ಚುನಾವಣೆಗೆ ದುಡಿಯಲಿದ್ದೇವೆ' ಎಂದು ಪರಮೇಶ್ವರ ಅವರು ಟ್ವೀಟ್ ಮಾಡಿದ್ದಾರೆ.

20 ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ20 ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಸಭೆಯ ಬಳಿಕ ಕಾಂಗ್ರೆಸ್-ಜೆಡಿಎಸ್ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದರು. 'ಬಿಜೆಪಿಯನ್ನು ರಾಜ್ಯದಲ್ಲಿ ಸೋಲಿಸುವುದೇ ಮೈತ್ರಿ ಸರ್ಕಾರದ ಮುಖ್ಯ ಉದ್ದೇಶ' ಎಂದು ಎಚ್.ಡಿ.ದೇವೇಗೌಡ ಹೇಳಿದ್ದರು.

English summary
Deputy chief Minister G.Parameshwara clarified why he skipped the Congress and JD(S) leaders meeting in Bengaluru on March 19, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X