G Parameshwara Profile: ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಪಡೆದ ಜಿ.ಪರಮೇಶ್ವರ್
ತುಮಕೂರು, ಮೇ, 20: ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ದಲಿತ ನಾಯಕ ಡಾ.ಜಿ.ಪರಮೇಶ್ವರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಎರಡನೇ ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿ ಆಯ್ಕೆ ಆಗಿದ್ದಾರೆ. ಹಾಗಾದರೆ ಡಾ.ಜಿ.ಪರಮೇಶ್ವರ ಅವರ ರಾಜಕೀಯ ಅನುಭವ ಹಾಗೂ ಅವರ ಜೀವನ ಪರಿಚಯದ ಬಗ್ಗೆ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಜಿ.ಪರಮೇಶ್ವರ್ ಪರಿಚಯ
ಜಿ.ಪರಮೇಶ್ವರ್ ಅವರು ಆಗಸ್ಟ್ 6,1951 ರಂದು ತುಮಕೂರಿನ ಗೊಲ್ಲಹಳ್ಳಿಯಲ್ಲಿ ಜನಿಸಿದರು. ಅವರು ಗಂಗಮಾಳಮ್ಮ ಚಿಕ್ಕಣ್ಣ ಮತ್ತು ಮಾಜಿ ಎಂಎಲ್‌ಸಿ ಗಂಗಾಧರಯ್ಯ ಹೆಬ್ಬಾಳು ಮರಿಯಪ್ಪ ಅವರಿಗೆ ಜನಿಸಿದರು. ನಂತರ ಅವರು ಪ್ರಾಥಮಿಕ ಶಿಕ್ಷಣವನ್ನು ಗೊಲ್ಲಹಳ್ಳಿ ಮತ್ತು ತುಮಕೂರಿನ ಹೆಗ್ಗೆರೆಯ ಸರ್ಕಾರಿ ಶಾಲೆಯಲ್ಲಿ ಮುಗಿಸಿದರು.

1959ರಲ್ಲಿ ತಮ್ಮ ತಂದೆ ಸ್ಥಾಪಿಸಿದ ನಗರದ ಸಿದ್ದಾರ್ಥ ಪ್ರೌಢಶಾಲೆಗೆ ಸೇರಿಕೊಂಡರು. ಬಳಿಕ ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಿಎಸ್‌ಸಿ, ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಕೃಷಿಯಲ್ಲಿ ಎಂ.ಎಸ್ಸಿ, ಅದೇ ಕಾಲೇಜಿನಲ್ಲಿ ಕೃಷಿಯಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಪರಮೇಶ್ವರ ಅವರು ಸಂಕ್ಷಿಪ್ತವಾಗಿ ಬೆಂಗಳೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಸ್ಯ ಶಾಸ್ತ್ರದ ವಿಭಾಗದಲ್ಲಿ ಸಂಶೋಧನಾ ಸಹಾಯಕರಾಗಿ ಕೆಲಸ ಮಾಡಿದರು.
ನಂತರ ವಿದೇಶಕ್ಕೆ ಹೋಗಿದ್ದು, ಅಡಿಲೇಡ್‌ನಲ್ಲಿ ಕೃಷಿ ಸಂಶೋಧನಾ ಕೇಂದ್ರದಿಂದ ಪಿಎಚ್‌ಡಿ ಪಡೆದರು. ಅಲ್ಲದೆ ಕ್ರೀಡೆಯಲ್ಲಿಯೂ ತುಂಬಾ ಆಸಕ್ತಿಯನ್ನು ಹೊಂದಿದ್ದರು. ನಂತರ ಅವರು ರಾಜಕೀಯಕ್ಕೆ ದಾಪುಗಲಿಟ್ಟಿದ್ದು, 1999ರಿಂದ 2004ರವರೆಗೆ ಶಿಕ್ಷಣ ಸಚಿವರಾಗಿ, 2015ರಿಂದ 2017ರವರೆಗೂ ಗೃಹ ಸಚಿವರಾಗಿ, 2018ರಿಂದ 2019ರವರೆಗೂ ಉಪ ಮುಖ್ಯಮಂತ್ರಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
ಅಲ್ಲದೆ ಡಾ.ಜಿ.ಪರಮೇಶ್ವರ್ ಅವರು ಈ ಬಾರಿಯೂ ಕೊರಟಗೆರೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ಇನ್ನು ಇವರಿಗೆ ಪೈಪೋಟಿ ನಡೆಸಿದ್ದ ಜೆಡಿಎಸ್‌ನ ಸುಧಾಕರ್ ಲಾಲ್ ಅವರು 14,347 ಮತಗಳ ಅಂತರದಿಂದ ಸೋಲನುಭವಿಸಿದ್ದರು. ಈ ಮೂಲಕ ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದಲ್ಲಿ ಮಾಜಿ ಡಿಸಿಎಂ ಜಿ. ಪರಮೇಶ್ವರ್ ಸ್ಪರ್ಧಿಸಿ ರಾಜ್ಯದ ಗಮನ ಸೆಳೆದಿದ್ದರು.
ಕಳೆದ ಮೂರು ವಿಧಾನಸಭೆ ಚುನಾವಣೆಗಳಲ್ಲಿ ಕೊರಟಗೆರೆ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಎರಡು ಬಾರಿ ಜಯ ಸಾಧಿಸಿತ್ತು. ಹಾಗೆಯೇ ಈ ಬಾರಿಯೂ ಕೂಡ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇನ್ನು ಜೆಡಿಎಸ್ ಒಂದು ಬಾರಿ ಮಾತ್ರ ಗೆಲುವು ಸಾಧಿಸಿದೆ. 1999 ಮತ್ತು 2004ರ ವಿಧಾನಸಭೆ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷದ ಸಿ.ಚನ್ನಿಗಪ್ಪ ಆಯ್ಕೆ ಆಗಿದ್ದರು.
2008ರ ಚುನಾವಣೆಯಲ್ಲಿ ಜೆಡಿಎಸ್‌ನ ಚಂದ್ರಯ್ಯ ವಿರುದ್ಧ ಕಾಂಗ್ರೆಸ್ ಪಕ್ಷದ ಡಾ. ಜಿ.ಪರಮೇಶ್ವರ್ ಅವರು 11 ಸಾವಿರ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು. 2013ರ ಚುನಾವಣೆಯಲ್ಲಿ ಜೆಡಿಎಸ್‌ನ ಸುಧಾಕರ್ ಲಾಲ್ ಅವರು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿದ್ದ ಜಿ. ಪರಮೇಶ್ವರ್ ಅವರನ್ನು 18 ಸಾವಿರ ಮತಗಳ ಅಂತರದಲ್ಲಿ ಸೋಲಿಸಿದ್ದರು. ಇದು ಮುಖ್ಯಮಂತ್ರಿ ಹುದ್ದಗೇರುವ ಪರಮೇಶ್ವರ್ ಅವರ ಆಸೆಗೆ ಅಡ್ಡದಾರಿ ಆದಂತಾಗಿತ್ತು.
ಇನ್ನು 2018ರ ಚುನಾವಣೆಯಲ್ಲಿ ಜೆಡಿಎಸ್‌ನ ಸುಧಾಕರ್ ಲಾಲ್ ಅವರು 73,979 ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಜಿ. ಪರಮೇಶ್ವರ್ 81,598 ಮತಗಳನ್ನು ಪಡೆದು, 7,619 ಮತಗಳ ಅಂತರದಲ್ಲಿ ಸುಧಾಕರ್ ಲಾಲ್ ಅವರನ್ನು ಪರಾಭವಗೊಳಿಸಿದ್ದರು.
ಡಾ.ಜಿ. ಪರಮೇಶ್ವರ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿಯೂ ಕಾರ್ಯ ನಿರ್ವಹಸಿದ್ದಾರೆ. 1993 ರಿಂದ ವಿವಿಧ ಆಡಳಿತಗಳಲ್ಲಿ ಹಲವಾರು ಖಾತೆಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ದಲಿತ ಮುಖಂಡರಾಗಿರುವ ಇವರು 4 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. 1989, 1999 ಮತ್ತು 2004 ರಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರ ಹಾಗೂ ಕ್ಷೇತ್ರ ಪುನರ್ವಿಂಗಡಣೆಯ ನಂತರ 2008ರಲ್ಲಿ ಕೊರಟಗೆರೆ ಕ್ಷೇತ್ರವನ್ನು ಪರಮೇಶ್ವರ ಪ್ರತಿನಿಧಿಸಿದ್ದರು.
ರಾಜ್ಯದ ದಲಿತ, ಇತರ ಪ್ರಮುಖ ಸಮುದಾಯಗಳು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ವಿಶ್ವಾಸವನ್ನು ಕೂಡ ಗಳಿಸಿದ್ದಾರೆ. ಸತತ ಎರಡು ಅವಧಿಗೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ಇವರು ದೀರ್ಘ ಕಾಲ ಈ ಹುದ್ದೆಯನ್ನು ನಿರ್ವಹಿಸಿದ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಹಾಗೆಯೆ ಇವರು ದಲಿತ ನಾಯಕರಾಗಿದ್ದು, ಇವರಿಗೆ ಡಿಸಿಎಂ ಹುದ್ದೆ ನೀಡುವಂತೆ ಒತ್ತಾಯಗಳು ಕೂಡ ಕೇಳಿಬಂದಿದ್ದವು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications