ಮೈಸೂರಿನಲ್ಲಿ ಸಿಲಿಂಡರ್ ಸ್ಪೋಟ: ವರದಿ ನೀಡುವಂತೆ ಪರಮೇಶ್ವರ್ ಸೂಚನೆ
ಬೆಂಗಳೂರು: ಮೈಸೂರು ಅರಮನೆ ದ್ವಾರದ ಮುಂಭಾಗದಲ್ಲಿ ನಿನ್ನೆ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ಗೃಹಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ಬಲೂನ್ ಮಾರುತ್ತಿದ್ದ ಲಕ್ನೋ ಮೂಲದ ಎನ್ನಲಾದ ವ್ಯಕ್ತಿ ಮೃತಪಟ್ಟಿದ್ದಾನೆ. ಸಣ್ಣಪುಟ್ಟ ವಸ್ತುಗಳ ಮಾರಾಟ ಮಾಡುವವರ ಮೇಲೆ ಯಾವುದೇ ರೀತಿಯ ನಿಯಂತ್ರಣ ಇಲ್ಲ ಎಂಬುದು ಕಾಣಿಸುತ್ತಿದೆ. ಪ್ರವಾಸಿಗರು ಬರುವುದರಿಂದ ಹೆಚ್ಚಿನ ರೀತಿಯಲ್ಲಿ ಕ್ರಮ ತೆಗೆಕೊಳ್ಳಬೇಕು. ಇದೆಲ್ಲವೆನ್ನು ಸೂಕ್ಷ್ಮದೃಷ್ಟಿಯಿಂದ ನೋಡಬೇಕು. ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದೇನೆ. ಬಲೂನ್ ವ್ಯಾಪಾರಿಗೆ ಹೀಲಿಯಂ ಸಿಲಿಂಡರ್ ಹೇಗೆ ಸಿಕ್ಕಿದೆ, ಎಲ್ಲಿ ಖರೀದಿಸಿದ್ದ ಅದೆಲ್ಲವನ್ನು ತನಿಖೆ ಮಾಡಿ ವರದಿ ನೀಡಲಿದ್ದಾರೆ ಎಂದರು.

ನಾನು ಸಿಡಬ್ಲೂಸಿ ಸದಸ್ಯ ಅಲ್ಲ. ಹಾಗಾಗಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಹೋಗುತ್ತಿಲ್ಲ. ಸಭೆಯಲ್ಲಿ ಕರ್ನಾಟಕದ ಬೆಳವಣಿಗೆಗಳ ಬಗ್ಗೆ ಚರ್ಚೆ ಆದರೆ ಗೊತ್ತಾಗುತ್ತದೆ ಎಂದಾ ಅವರು, ಹೊಸ ವರ್ಷ ಸಂಭ್ರಮಾಚರಣೆಯ ಕುರಿತಂತೆ ಪೊಲೀಸ್ ಅಧಿಕಾರಿಗಳೊಂದಿಗೆ ಭಾನುವಾರ ಸಭೆ ಕರೆದಿದ್ದೇನೆ. ಚರ್ಚೆ ಮಾಡಿ ಅಗತ್ಯ ಸೂಚನೆ ನೀಡುತ್ತೇನೆ ಎಂದು ಹೇಳಿದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications