ಡ್ರಗ್ಸ್ ಮುಕ್ತ ಕರ್ನಾಟಕದ ಗುರಿ, ಶೇ.50 ಟ್ರಾಫಿಕ್ ನಿಯಂತ್ರಣವಾಗಿದೆ: ಜಿ.ಪರಮೇಶ್ವರ
ಬೆಂಗಳೂರು, ಜನವರಿ 02: ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಜನಸ್ನೇಹಿಯಾಗಿ ಕರ್ತವ್ಯನಿರ್ವಹಿಸಿರುವುದಕ್ಕೆ ಜನರಿಂದ ಅಭಿನಂದನೆ ವ್ಯಕ್ತವಾಗಿದೆ. ಇದನ್ನು ನಿರಂತರವಾಗಿ ಅಳವಡಿಸಿಕೊಳ್ಳಬೇಕು. ಇನ್ನೂ ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ಕ್ರಿಯಾ ಯೋಜನೆ ರೂಪಿಸಬೇಕಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.
ಮಂಗಳವಾರ ಬೆಳಗ್ಗೆ ಸದಾಶಿವನಗರದ ಗೃಹ ಕಚೇರಿಯಲ್ಲಿ ನಗರ ಪೊಲೀಸ್ ಆಯುಕ್ತ ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತರಾದ ರಮಣಗುಪ್ತ, ಸತೀಶ್, ಎಂಎನ್ ಅನುಚೇತ್ ಸೇರಿದಂತೆ ನಗರದ ಎಲ್ಲ ವಿಭಾಗದ ಡಿಸಿಪಿಗಳ ಜತೆ ಸಭೆ ನಡೆಸಿದರು. ಈ ವೇಳೆ, ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಅಚ್ಚುಕಟ್ಟಾಗಿ ಪಾಲಿಸುವುದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಶೇಷವಾಗಿ ನಡೆದಿದೆ ವರ್ಷಾಚರಣೆ
ನಾನು ಕಾಲೇಜು ದಿನಗಳಿಂದಲೂ ಹೊಸ ವರ್ಷ ಆಚರಣೆಯನ್ನು ನೋಡಿಕೊಂಡು ಬಂದಿದ್ದೇನೆ. ಈ ವರ್ಷ ವಿಶೇಷವಾಗಿ ಆಚರಣೆ ನಡೆದಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಅಚ್ಚುಕಟ್ಟಾಗಿ ನಿಭಾಯಿಸಲಾಗಿದೆ. ಇದರಲ್ಲಿ ಪೊಲೀಸರ ಶ್ರಮ ದೊಡ್ಡದು ಎಂದು ಶ್ಲಾಘಿಸಿದರು.
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ರಕ್ತದಾನ, ನೇತ್ರದಾನಕ್ಕೆ ಸಹಿ, ಶಾಲಾ ಮಕ್ಕಳಿಗೆ ಹಾಗೂ ಅನಾಥ ಮಕ್ಕಳಿಗೆ ಸಿಹಿ ಹಂಚಿರುವುದು, ಇಲಾಖೆಯ ನಿವೃತ್ತ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಶುಭ ಕೋರುವ ಮೂಲಕ ಹೊಸ ವರ್ಷ ಆಚರಣೆ ಮಾಡಿರುವುದು ಅರ್ಥಪೂರ್ಣ ಎನಿಸಿದೆ. ಜನರು ಸಹ ಇದನ್ನೆ ಬಯಸುವುದು. ಪೊಲೀಸರು ನಮ್ಮ ಜೊತೆಗೆ ಇದ್ದಾರೆ, ರಕ್ಷಣೆ ಮಾಡುತ್ತಾರೆ ಎಂಬ ಇಲಾಖೆಯ ಮೇಲಿನ ನಂಬಿಕೆ, ಗೌರವ ಹೆಚ್ಚಾಗಬೇಕು. ಇದು ಹೀಗೆ ಮುಂದುವರಿಯಲಿ ಎಂದು ಹೇಳಿದರು.
'ಮಾದಕದ್ರವ್ಯ ಮುಕ್ತ ಕರ್ನಾಟಕ'ದ ಗುರಿ
ಕರ್ನಾಟಕವನ್ನು "ಮಾದಕದ್ರವ್ಯ ಮುಕ್ತ" ರಾಜ್ಯವನ್ನಾಗಿಸಬೇಕು ಎಂಬುದು ನನ್ನ ಪ್ರಮುಖ ಗುರಿ. ನಿನ್ನೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹ ಇದೇ ಆಶಯ ವ್ಯಕ್ತಪಡಿಸಿದ್ದಾರೆ. ಹಿರಿಯರು ಆಗಿ, ಹೆಚ್ಚಿನ ಶ್ರಮಹಾಕಬೇಕಿದೆ. ಕೆಲ ದೇಶಗಳ ಪ್ರಜೆಗಳು ಹೆಚ್ಚಾಗಿ ಮಾದಕದ್ರವ್ಯ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ.

ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿರುವ ಹಾಗೂ ನಗರಕ್ಕೆ ಬರುವ ವಿದೇಶಿ ಪ್ರಜೆಗಳ ಮೇಲೆ ಕಣ್ಣಿಡಬೇಕು. ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ 'ಕ್ರಿಯೆ ಯೋಜನೆ' (plan of action) ರೂಪಿಸಬೇಕಿದೆ. ಈ ಬಗ್ಗೆ ಸಜ್ಜಾಗುವಂತೆ ಸೂಚಿಸಿದರು.
ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ
ರಾಜ್ಯದಲ್ಲಿ ಗುಂಪು ಗಲಭೆಗಳು ಕಡಿಮೆ ಆಗಿವೆ. ಅಮಾಯಕ ಮಕ್ಕಳು ಅಪರಾಧ ಪ್ರಕರಣಗಳಲ್ಲಿ ಸಿಲುಕುತ್ತಿದ್ದು, ಈ ಬಗ್ಗೆ ನಿಗಾವಹಿಸಬೇಕು. ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಅರಿವು ಮೂಡಿಸಬೇಕು. ನಗರದಲ್ಲಿ ಟ್ರಾಫಿಕ್ ಸಮಸ್ಯೆ ಈ ಮೊದಲಿಗಿಂತಲೂ ಕಡಿಮೆಯಾಗಿದೆ. ಶೇಕಡಾ 50ರಷ್ಟು ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ಬಂದಿದೆ. ಇನ್ನೂ ಹೆಚ್ಚಿನ ಒತ್ತು ನೀಡಬೇಕು.
ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ದೈನಂದಿನ ಅನುಭವಗಳ ಆಧಾರದ ಮೇಲೆ ನೋಟ್ಸ್ ತಯಾರಿಸಿ, ಕಮಿಷನರ್‌ಗೆ ಕೊಡಿ. ಇಂಪ್ಲಿಮೆಂಟ್ ಮಾಡೋಣ. ಇಲಾಖೆಯಲ್ಲಿ ಪದವೀಧರ ಸಿಬ್ಬಂದಿಗಳು ಹೆಚ್ಚಾಗಿ ನೇಮಕವಾಗಿದ್ದಾರೆ. ಇದು ಇಲಾಖೆಯ ಒಳ್ಳೆ ಬೆಳವಣಿಗೆ ಹೌದು. ಅವರಲ್ಲಿ ಹೊಸ ಐಡಿಯಾಗಳಿರುತ್ತವೆ. ವಿಶ್ಲೇಷಣೆ ಮಾಡಿಕೊಂಡು ನೋಟ್ ಅಥವಾ ವರದಿ ರೂಪದಲ್ಲಿ ಮೇಲಾಧಿಕಾರಿಗಳಿಗೆ ಕೊಡಲಿ. ಇದರಿಂದ ಇಲಾಖೆಯಲ್ಲಿ ಬದಲಾವಣೆ ತರಲು ಹೆಚ್ಚು ಅನುಕೂಲವಾಗುತ್ತದೆ ಎಂದು ಹೇಳಿದರು.
ಸಿಬ್ಬಂದಿಗಳು ಪೊಲೀಸ್ ಇ-ಬೀಟ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು. ಆಯಾ ವಿಭಾಗದಲ್ಲಿ ನಡೆಯುವ ಘಟನೆಗಳಿಗೆ ಡಿಸಿಪಿಗಳು ಜವಾಬ್ದಾರರು. ಹಳೇ ಪ್ರಕರಣಗಳ ಮೇಲೆ ನಿಗಾವಹಿಸಿ ಎಂದು ಸೂಚಿಸಿದರು.
ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತರಾದ ರಮಣಗುಪ್ತ, ಸತೀಶ್, ಸಂಚಾರ ವಿಭಾಗದ ಜಂಟಿ ಆಯುಕ್ತ ಎಂ.ಎನ್.ಅನುಚೇತ್ ಸೇರಿದಂತೆ ಎಲ್ಲ ವಿಭಾಗದ ಡಿಸಿಪಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Viral Video: ಬೈಕ್ ಮೇಲೆ ಕುಳಿತಿದ್ದ ಮಹಿಳೆಯ ಖಾಸಗಿ ಭಾಗ ಮುಟ್ಟಿ ಲೈಂಗಿಕ ಕಿರುಕುಳ: ಪುಂಡರ ವಿಡಿಯೋ ವೈರಲ್ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ












Click it and Unblock the Notifications