ಮತ್ತೆ ಹೊತ್ತಿದ ಕಳಸಾ ಬಂಡೂರಿ ಕಿಚ್ಚು, ಇಂದು ಗದಗ, ನರಗುಂದ ಬಂದ್
ಗದಗ, ಜುಲೈ 21 : ಮತ್ತೆ ಇಂದು (ಶುಕ್ರವಾರ) ಗದಗ, ನರಗುಂದದಲ್ಲಿ ಮಹದಾಯಿ, ಕಳಸಾ ಬಂಡೂರಿ ಕಿಚ್ಚು ಹತ್ತಿದೆ.
ರೈತರು ಮಹದಾಯಿ ಹೋರಾಟ ಪ್ರಾರಂಭಿಸಿ 2 ವರ್ಷ ಕಳೆದರೂ ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದಾಗಲೀ ಸಮಸ್ಯೆ ಬಗೆಹರಿಸಲು ಇನ್ನೂ ಸಾಧ್ಯವಾಗಿಲ್ಲ. ಈ ಹಿನ್ನಲೆಯಲ್ಲಿ ಹಲವು ಸಂಘಟನೆಗಳು ಇಂದು ಗದಗ, ನರಗುಂದ ಬಂದ್ ಗೆ ಕರೆ ನೀಡಿವೆ.

ಕಳಸಾ ಹೋರಾಟ ವೇದಿಕೆ ಅಧ್ಯಕ್ಷ ವಿರೇಶ್ ಸೊಬರದಮಠ ಉಪವಾಸ ಸತ್ಯಾಗ್ರಹ ಆರಂಭಿಸಿ 5 ದಿನಗಳಾಯಿತು. ಹೀಗಾಗಿ ರೈತರು ರೈತ ಹುತಾತ್ಮ ದಿನದಂದೇ ಸರ್ಕಾರಗಳ ವಿರುದ್ಧ ಸೆಡ್ಡು ಹೊಡೆಯಲು ಸಜ್ಜಾಗಿದ್ದಾರೆ.
ಇಂದು ಗದಗ ಜಿಲ್ಲೆ ನರಗುಂದದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುವ ಸಂಭವವಿದೆ. ರೈತ ಹುತ್ಮಾತ್ಮ ದಿನಾಚರಣೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತ ಮುಖಂಡರು, ರೈತರು, ಜನಪ್ರತಿನಿಧಿಗಳು, ವಿವಿಧ ಕನ್ನಡ - ದಲಿತ ಪರ ಸಂಘಟನೆಗಳ ಮುಖಂಡರು ಅಪಾರ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ.
ಹೀಗಾಗಿ ನರಗುಂದ ಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳಗ್ಗೆಯಿಂದಲೇ ಪೂರ್ಣ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ, ಗದಗ ನಗರ ಹಾಗೂ ನರಗುಂದ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.












Click it and Unblock the Notifications