ಭಾರೀ ಮಳೆಗೆ ಗದಗ ಜಿಲ್ಲೆಯ ಯಕ್ಲಸ್ ಪುರ ಗ್ರಾಮ ಜಲಾವೃತ
ಗದಗ, ಮೇ 18 : ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಯಕ್ಲಸ್ ಪುರ ಗ್ರಾಮ ಜಲಾವೃತಗೊಂಡಿದೆ.
ಬುಧವಾರ ರಾತ್ರಿ ಸುರಿದ ಗಾಳಿ ಸಮೇತ ಮಳೆಯಿಂದಾಗಿ ಯಕ್ಲಸ್ ಪುರ ಗ್ರಾಮದ ಹಲವು ಮನೆಗಳಿಗೆ ನೀರು ನುಗ್ಗಿ ಮೇಲ್ಛಾವಣಿ ಹಾರಿ ಹೋಗಿವೆ. ಇನ್ನು ಗ್ರಾಮದ ಎಲ್ಲಾ ರಸ್ತೆಗಳು ಜಲಾವೃತಗೊಂಡಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.[ಗದಗ: ತೋಳಗಳ ದಾಳಿಗೆ 21 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ]

ಮೊನ್ನೆ ಅಷ್ಟೇ ಭಾರೀ ಮಳೆಯಾಗಿದ್ದರಿಂದ ನೀರಿನ ರಭಸಕ್ಕೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ದೊಡ್ಡೂರ ಗ್ರಾಮದ ಬಳಿ ಹಳ್ಳವೊಂದರಲ್ಲಿ ಕೆ ಎಸ್ ಆರ್ ಟಿಸಿ ಬಸ್ ಕೊಚ್ಚಿಕೊಂಡು ಹೋಗಿತ್ತು.
ಇನ್ನು ಮಳೆಗಾಲ ಆರಂಭವಾಗಿಲ್ಲ ಆಗಲೇ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ಇದರ ಮುನ್ಸೂಚನೆಯಂತೆ ವಾಡಿಕೆಗಿಂತ ಈ ಬಾರಿ ಮುಂಗಾರು ಬೇಗ ಪ್ರವೇಶಿಸಲಿದ್ದು ರೈತರ ಮೊಗದಲ್ಲಿ ಹರ್ಷ ಮೂಡಿಸಿದೆ.
{promotion-urls}












Click it and Unblock the Notifications