ಗಣಪತಿ ಪ್ರಕರಣ: ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾ

Posted By:
Subscribe to Oneindia Kannada

ಬೆಂಗಳೂರು, ಸೆ. 20: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಗಣಪತಿ ಅವರ ತಂದೆ ಎಂ.ಕೆ. ಕುಶಾಲಪ್ಪ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ಎಂಕೆ ಗಣಪತಿ ತಂದೆ ಕುಶಾಲಪ್ಪ ಹಾಗೂ ಸಹೋದರ ಎಂ.ಕೆ. ಮಾಚಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೋಮವಾರ ನ್ಯಾ.ಎಸ್.ಅಬ್ದುಲ್‌ನಜೀರ್ ಅವರಿದ್ದ ನ್ಯಾಯಪೀಠದಲ್ಲಿ ಸೋಮವಾರ ನಡೆಯಿತು. ಮಂಗಳವಾರ ತೀರ್ಪು ನೀಡಿದರು.

DYSP MK Ganapathi death case : High Court rejects CBI probe plea by Kushalappa

ಆತ್ಮಹತ್ಯೆಗೂ ಮುನ್ನ ಗಣಪತಿ ತಮ್ಮ ಜೀವಕ್ಕೆ ಯಾವುದೇ ರೀತಿಯ ತೊಂದರೆಯಾದರೆ ಗೃಹಸಚಿವರಾಗಿದ್ದ ಕೆ.ಜೆ.ಜಾರ್ಜ್ ಮತ್ತು ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ ಮತ್ತು ಎ.ಎಂ.ಪ್ರಸಾದ್ ಅವರೇ ಕಾರಣವೆಂದು ಆರೋಪ ಮಾಡಿದ್ದಾರೆ. ಆದರೆ ಈ ಪ್ರಕರಣದಲ್ಲಿ ಇದುವರೆಗೂ ಯಾವೊಬ್ಬ ಆರೋಪಿಯನ್ನೂ ಬಂಧಿಸಲಾಗಿಲ್ಲ ಏಕೆ ಎಂದು ಅರ್ಜಿದಾರರ ಪರ ವಕೀಲ ಪವನ್‌ಚಂದ್ರ ಶೆಟ್ಟಿ ವಾದಿಸಿದ್ದರು.[ಡಿವೈಎಸ್ಪಿ ಗಣಪತಿ ಯಾರು? ಏನು? ಎತ್ತ?]

ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎ.ಎಸ್. ಪೊನ್ನಣ್ಣ, ಪ್ರಕರಣ ನಡೆದ ತಕ್ಷಣ ಅರ್ಜಿದಾರರಲ್ಲೊಬ್ಬರಾಗಿರುವ ಕುಶಾಲಪ್ಪ ಇದು ಆತ್ಮಹತ್ಯೆ ಎಂದು ಹೇಳಿಕೆ ನೀಡಿದ್ದಾರೆ. ಈ ಸಂಬಂಧ ತನಿಖೆ ನಡೆಸಿರುವ ಸಿಐಡಿ ಅಧಿಕಾರಿಗಳು ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಹೀಗಾಗಿ ಅರ್ಜಿದಾರರರಲ್ಲೇ ಗೊಂದಲವಿದೆ ಎಂದು ಪ್ರತಿವಾದಿಸಿದರು.

ಸಿಐಡಿ ಅಧಿಕಾರಿಗಳು ಈ ಪ್ರಕರಣದ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಮೇಲ್ಕಂಡ ಆರೋಪಿಗಳ ವಿರುದ್ಧ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ. ಅಲ್ಲದೆ ತನಿಖೆ ಅಂತಿಮ ಹಂತದಲ್ಲಿರುವಾಗ ಸಿಬಿಐ ತನಿಖೆಗೆ ಕೋರಿ ಅರ್ಜಿ ಸಲ್ಲಿಸುವಂತೆ ಕೋರಿರುವುದು ಸರಿಯಲ್ಲ. ನ್ಯಾಯಾಂಗ ಆಯೋಗವೂ ತನಿಖೆ ಮುಂದುವರಿಸಿದೆ. ಹೀಗಾಗಿ ಈ ಪ್ರಕರಣ ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ ಎಂದು ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ.(ಒನ್ಇಂಡಿಯಾ ಸುದ್ದಿ)

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
DYSP MK Ganapathi death case : Karnataka High Court today(September 20) rejected plea by MK Kushalappa demanding CBI probe in Ganapathi death case.
Please Wait while comments are loading...