ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಣಪತಿ ಕುಟುಂಬಕ್ಕೆ ನ್ಯಾಯ ಸಿಗುವುದು ಅನುಮಾನ : ಪ್ರತಾಪ್

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಕುಶಾಲನಗರ, ಜುಲೈ 14 : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಮೃತ ಗಣಪತಿ ಅವರ ಕುಟುಂಬ ವರ್ಗಕ್ಕೆ ನ್ಯಾಯ ಸಿಗುವುದು ಅನುಮಾನವಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರು ಡಿವೈಎಸ್ಪಿ ಗಣಪತಿ ಸಾವಿನ ಪ್ರಕರಣವನ್ನು ಸಿಬಿಐಗೆ ನೀಡಬೇಕೆಂದು ಆಗ್ರಹಿಸಿ ನೀಡಲಾಗಿದ್ದ ಬಂದ್ ನಲ್ಲಿ ಭಾಗವಹಿಸಿ, ಕುಶಾಲನಗರದಲ್ಲಿ ನಡೆದ ರಸ್ತೆ ತಡೆ ಪ್ರತಿಭಟನೆಯಲ್ಲಿ ಪಾಲೊಂಡು ಅವರು ಗುರುವಾರ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.[ಕೊಡಗಿನಲ್ಲಿ ಭುಗಿಲೆದ್ದ ಆಕ್ರೋಶ : ಬಂದ್ ಸಂಪೂರ್ಣ ಯಶಸ್ವಿ]

ಈ ಹಿಂದೆ ಸಾವನ್ನಪ್ಪಿದ ಪ್ರಾಮಾಣಿಕ ಐಎಎಸ್ ಅಧಿಕಾರಿ ಡಿ.ಕೆ.ರವಿ ಸೇರಿದಂತೆ ಪೊಲೀಸ್ ಅಧಿಕಾರಿಗಳ ಕುಟಂಬವರ್ಗಕ್ಕೆ ಇದುವರೆಗೂ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಕರ್ನಾಟಕದ ಜನರು ಕಾಂಗ್ರೆಸ್ ಆಡಳಿತದಲ್ಲಿ ವಿಶ್ವಾಸ ಕಳೆದುಕೊಂಡಿದ್ದಾರೆ. ಆದ್ದರಿಂದ ಗಣಪತಿ ಅವರ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಆಗ್ರಹಿಸಿದರು. [ಕೊಡಗು ಬಂದ್ ಚಿತ್ರಗಳು]

ಗಣಪತಿ ಅವರು ಸಾವಿಗೆ ಮುಂಚೆ ಮಾದ್ಯಮಕ್ಕೆ ನೀಡಿರುವ ವಿಡಿಯೋ ಹೇಳಿಕೆಯನ್ನು ಪ್ರಮುಖ ಸಾಕ್ಷಿಯಾಗಿ ಪರಿಗಣಿಸುವ ಮೂಲಕ ಸಚಿವ ಜಾರ್ಜ್ ಸೇರಿದಂತೆ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಮೊಕದ್ದಮೆ ದಾಖಲು ಮಾಡಿ, ಕೂಡಲೇ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದರು.[ಗದ್ದಲದ ನಡುವೆಯೇ ಪರಿಷತ್ತಿನಲ್ಲಿ 3 ವಿಧೇಯಕಗಳಿಗೆ ಒಪ್ಪಿಗೆ]

ಡಿವೈಎಸ್ಪಿ ಎಂ.ಕೆ.ಗಣಪತಿ ಅವರ ಹುಟ್ಟೂರು ರಂಗಸಮುದ್ರ ಸೇರಿದಂತೆ ಕುಶಾಲನಗರದಲ್ಲಿ ವರ್ತಕರು ಸ್ವಯಂಪ್ರೇರಿತರಾಗಿ ಬಂದ್ ನಡೆಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಎಲ್ಲ ಅಂಗಡಿ ಮುಂಗಟ್ಟುಗಳು ಕದ ಮುಚ್ಚಿದ್ದವು.

ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಗೈರುಹಾಜರಿ ಎದ್ದು ಕಾಣುತ್ತಿತ್ತು. ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಕೆಎಸ್‌ಆರ್‌ಟಿ ಬಸ್ ನಿಲ್ದಾಣ ಹಾಗೂ ಪಟ್ಟಣ ಬಿಕೋ ಎನ್ನುತ್ತಿತು. ತುರ್ತು ಸೇವೆಗಳಾದ ಔಷಧಿ ಅಂಗಡಿ, ಆರೋಗ್ಯ ಕೇಂದ್ರಗಳಿಗೆ ವಿನಾಯಿತಿ ನೀಡಲಾಗಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಕಚೇರಿಗಳು ಹಾಗೂ ಬ್ಯಾಂಕ್‌ಗಳು ಕೂಡ ಮುಚ್ಚಿದ್ದವು.


ಖಾಸಗಿ, ಕೆಎಸ್‌ಆರ್‌ಟಿಸಿ ಬಸ್ ಸೇರಿದಂತೆ ಆಟೋ ರೀಕ್ಷಾಗಳ ಸಂಚಾರ ವ್ಯವಸ್ಥೆ ಸಂಪೂರ್ಣ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತು. ಪಟ್ಟಣದ ಕಾರ್ಯಪ್ಪ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿದರು.[ಮುರಿದು ಬಿದ್ದ ಸ್ಪೀಕರ್ ಕೆ.ಬಿ.ಕೋಳಿವಾಡ ಸಂಧಾನ ಸಭೆ]

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಡಿವೈಎಸ್ಪಿ ಟಿ.ಕುಮಾರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಕಲ್ಪಿಸಲಾಗಿತ್ತು. ಬಂದ್ ಸಂದರ್ಭ ಬಂದೋಬಸ್ತ್ ನೇತೃತ್ವ ವಹಿಸಿದ್ದ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಪ್ಪ ಸ್ಥಳಕ್ಕೆ ಭೇಟಿ ನೀಡಿ ಶಾಂತಿ ಸುವವ್ಯಸ್ಥೆ ಕಾಪಾಡುವಂತೆ ಮನವಿ ಮಾಡಿಕೊಂಡರು.

English summary
Mysuru-Madikeri member of Parliament Pratap Simha has said, Karnataka people have lost complete faith in Congress government. Family of Ganapati and other officers cannot expect justice under Congress governance. Kodagu bandh was called demanding CBI inquiry into Ganapati suicide.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X