Gandhi Family: ಮಲ್ಲಿಕಾರ್ಜುನ ಖರ್ಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಗಾಂಧಿ ಕುಟುಂಬ ಬಿಡುತ್ತಿಲ್ಲ: ಲಹರ್ ಸಿಂಗ್
ಬೆಂಗಳೂರು,ಆಗಸ್ಟ್ 22: ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಗಾಂಧಿ ಕುಟುಂಬ ಅವಕಾಶ ನೀಡುತ್ತಿಲ್ಲ ಎಂದು ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ ಹೇಳಿದ್ದಾರೆ. ಖರ್ಗೆ ಅವರಂತಹ ಹಿರಿಯ, ಅನುಭವಿ ನಾಯಕರಿಗೆ ಅನನುಭವಿ ರಾಹುಲ್ ಗಾಂಧಿ ಸಲಹೆ ನೀಡುತ್ತಿರುವುದು ಬೇಸರ ತಂದಿದೆ ಎಂದು ಸಂಸದ ಲಹರ್ ಸಿಂಗ್ ಹೇಳಿದ್ದಾರೆ.
ಕಿರಿಯ ಸಂಸದರಾದ ಕೆಸಿ ವೇಣುಗೋಪಾಲ್, ಜೈರಾಮ್ ರಮೇಶ್ ಮತ್ತು ಸುರ್ಜೇವಾಲಾ ಅವರ ಅಣತಿಯಂತೆ ಖರ್ಗೆ ಅವರಂತಹ ಎತ್ತರದ ನಾಯಕ ಕೆಲಸ ಮಾಡುತ್ತಾರೆ ಎಂದು ನಾನು ಎಂದಿಗೂ ನಿರೀಕ್ಷಿಸಿರಲಿಲ್ಲ ಎಂದು ಲಹರ್ ಸಿಂಗ್ ಹೇಳಿದರು.

ಎಐಸಿಸಿ ಮಾಜಿ ಅಧ್ಯಕ್ಷ ನಿಜಲಿಂಗಪ್ಪ ಅವರಂತೆ ಖರ್ಗೆಯವರು ಗಾಂಧಿ ಕುಟುಂಬದ ಯಾವುದೇ ಒತ್ತಡಗಳಿಗೆ ಮಣಿಯದೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು. ಕರ್ನಾಟಕದ ಮತ್ತೊಬ್ಬ ಧೀಮಂತ ರಾಜಕಾರಣಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ಹತ್ತಿಕ್ಕಲು ಕೂಡ ಗಾಂಧಿ ಕುಟುಂಬ ಪ್ರಯತ್ನಿಸಿತು. ಆದರೆ ಅವರು ದೃಢವಾಗಿ ನಿಂತರು ಮತ್ತು ಗಾಂಧಿ ಕುಟುಂಬದ ಆಶಯದಂತೆ ವರ್ತಿಸಲು ನಿರಾಕರಿಸಿದರು. ಗಾಂಧಿ ಕುಟುಂಬ ಯಾವಾಗಲೂ ಕರ್ನಾಟಕದ ಹಿರಿಯ ನಾಯಕರ ವಿರುದ್ಧ ಪಕ್ಷಪಾತವನ್ನು ತೋರಿಸುತ್ತಿದೆ ಎಂದು ಸಂಸದರು ಹೇಳಿದರು.
ಪಕ್ಷ ಅಥವಾ ಕುಟುಂಬಕ್ಕಿಂತ ದೇಶ ಮುಖ್ಯವಲ್ಲವೇ? ತಮ್ಮ ಕಾರ್ಯವೈಖರಿಗೆ ಸೂಚನೆಗಳನ್ನು ನೀಡುವುದಷ್ಟೇ ಅಲ್ಲದೇ ನೂತನ ಸಂಸತ್ತಿನ ಉದ್ಘಾಟನೆ ಬಹಿಷ್ಕರಿಸುವಂತಹ ಆದೇಶ ನೀಡುವ ಅವಕಾಶವನ್ನು ರಾಹುಲ್ ಗಾಂಧಿಯವರಿಗೆ, ಮಲ್ಲಿಕಾರ್ಜುನ ಖರ್ಗೆ ಅವರಂತಹ ನಾಯಕರು ಮಾಡಿಕೊಟ್ಟಿರುವುದು ಬೇಸರ ತಂದಿದೆ. ವಿರೋಧ ಪಕ್ಷದ ಸಂಸದರು ಅನಗತ್ಯವಾಗಿ ಕಲಾಪಕ್ಕೆ ಅಡ್ಡಿಪಡಿಸಿದ್ದು ಮಾತ್ರವಲ್ಲ, ಲೋಕಸಭೆಯಲ್ಲಿ ವಿರೋಧ ಪಕ್ಷಗಳೇ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಪ್ರಧಾನಿಯವರು ಉತ್ತರವನ್ನು ಪೂರ್ಣವಾಗಿ ಕೇಳುವ ಮುನ್ನವೇ ಕಾಂಗ್ರೆಸ್ ಸಭಾತ್ಯಾಗ ಮಾಡಿದ್ದು ಬೇಸರ ತಂದಿದೆ ಎಂದು ಸಂಸದ ಲಹರ್ ಸಿಂಗ್ ಹೇಳಿದರು.
ಒಂದು ಕುಟುಂಬದ ಅಣತಿಯಂತೆ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೂಡ ಪಾಲ್ಗೊಳ್ಳದೇ ದೂರವುಳಿದು ಈಗ ಖರ್ಗೆ ಸುಳ್ಳು ನೆಪ ಹೇಳುತ್ತಿದ್ದಾರೆ. ಪಕ್ಷ ಅಥವಾ ಕುಟುಂಬಕ್ಕಿಂತ ದೇಶ ಮುಖ್ಯವಲ್ಲವೇ ಎಂದು ಲಹರ್ ಸಿಂಗ್ ಪ್ರಶ್ನಿಸಿದರು.

ಎನ್‌ಡಿಎ ಸರ್ಕಾರದ ಸಾಧನೆಗಳ ಬಗ್ಗೆ ತಿಳಿಸಿದ ಸಂಸದ ಲಹರ್ ಸಿಂಗ್, ಸಂಸತ್ತಿನ ಮುಂಗಾರು ಅಧಿವೇಶನ ಯಶಸ್ವಿಯಾಗಿದೆ ಎಂದು ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಾರ್ವಜನಿಕ ಹಿತಾಸಕ್ತಿಯ ಹಲವು ಮಸೂದೆಗಳನ್ನು ಅಂಗೀಕರಿಸಲಾಗಿದೆ. ಹಾಗೆಯೇ ವಿರೋಧ ಪಕ್ಷಗಳ ಮೈತ್ರಿಕೂಟದ ಅಪಪ್ರಚಾರವನ್ನು ಜನರು ತಿರಸ್ಕರಿಸಿದ್ದಾರೆ. ವಿರೋಧ ಪಕ್ಷಗಳಿಂದ ನಿರಂತರ ಅಡ್ಡಿ ಮತ್ತು ಗದ್ದಲದ ನಡುವೆಯೂ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ 25 ಮಸೂದೆಗಳನ್ನು ಮಂಡಿಸಲಾಗಿದೆ. 23 ವಿಧೇಯಕಗಳು ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದೆ. ಆಗಸ್ಟ್ 11 ರವರೆಗೆ ಏಳು ಮಸೂದೆಗಳನ್ನು ಗೆಜೆಟ್‌ನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದರು.
ಸದನದಲ್ಲಿ ಕಲಾಪಕ್ಕೆ ಅಡ್ಡಿಪಡಿಸುವ ಮತ್ತು ಸತ್ಯ ತಿರುಚುವ ಪ್ರಯತ್ನ ಮಾಡಿದ ವಿರೋಧ ಪಕ್ಷಗಳನ್ನು ಟೀಕಿಸಿದ ಲಹರ್ ಸಿಂಗ್, ವಿರೋಧ ಪಕ್ಷಗಳು ಗದ್ದಲ ಸೃಷ್ಟಿಸಿ ಉಭಯ ಸದನದ ಕಾರ್ಯಚಟುವಟಿಕೆಯನ್ನು ನೆಲಸಮ ಮಾಡಲು ನಿರಂತರವಾಗಿ ಪ್ರಯತ್ನಿಸಿದವು. ಇದರಿಂದಾಗಿ ಸದನ ಪದೇ ಪದೆ ಮುಂದೂಡಲ್ಪಟ್ಟಿತು ಎಂದು ವಿಷಾದ ವ್ಯಕ್ತಪಡಿಸಿದರು.
ಚುನಾವಣೆಗಳನ್ನು ಗೆಲ್ಲಲು ರಾಜಕೀಯ ಪಕ್ಷಗಳು ನೀಡುವ ಅವಾಸ್ತವ ಉಚಿತ ಯೋಜನೆಗಳು ಮತ್ತು ಅವು ಆರ್ಥಿಕತೆಯ ಮೇಲೆ ಬೀರಬಹುದಾದ ವ್ಯತಿರಿಕ್ತ ಪರಿಣಾಮಗಳ ಬಗ್ಗೆಯೂ ಪ್ರಸ್ತಾಪಿಸಿದ್ದೇನೆ. ರಾಜ್ಯಗಳ ದುಂದುವೆಚ್ಚ ತಡೆಯಲು ಶಾಸನ ರೂಪಿಸುವ ಬಗ್ಗೆ ಪರಿಶೀಲಿಸಲು ಸರ್ಕಾರವನ್ನು ಒತ್ತಾಯಿಸಿದ್ದೇನೆ ಎಂದು ಲಹರ್ ಸಿಂಗ್ ತಿಳಿಸಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications