ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಾಂಧೀಜಿ ಅವರ ಕನಸು ಕರ್ನಾಟಕದಲ್ಲಿ ನನಸು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 02 : ಗಾಂಧಿ ಜಯಂತಿ 2015ರ ಸಂದೇಶ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಾಂಧಿ ಜಯಂತಿ ಸಂದರ್ಭದಲ್ಲಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾಡಿದ ಭಾಷಣ. ಗಾಂಧೀಜಿ ಅವರ ಕನಸು ಕರ್ನಾಟಕದಲ್ಲಿ ನನಸಾಗಿದೆ ಎಂದು ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಭಾಷಣದ ವಿವರ ಇಲ್ಲಿದೆ....

ಗಾಂಧೀಜಿ ಅವರ ಚಿಂತನೆಯ ಬೆಳಕಲ್ಲಿಯೇ ನಾವೆಲ್ಲರೂ ಇಂದು ಹೆಮ್ಮೆಪಡುವ ಸ್ವತಂತ್ರ ಭಾರತವು ನಿರ್ಮಾಣ ಗೊಂಡಿದೆ. ಭಾರತೀಯ ಸಮಾಜದ ಸ್ಥಿತಿಗತಿಗಳನ್ನು ಸಂಪೂರ್ಣವಾಗಿ ಅರಿತಿದ್ದ ಗಾಂಧೀಜಿ ಅವರು ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಹತ್ತು ಹಲವು ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸಿದ್ದರು.

ರೈತರ ಏಳಿಗೆ, ಖಾದಿ ಮತ್ತು ಗ್ರಾಮೋದ್ಯೋಗ, ಕಾರ್ಮಿಕರ ಕಲ್ಯಾಣ, ಮಹಿಳೆಯರಿಗೆ ರಕ್ಷಣೆ, ಮೂಲ ಶಿಕ್ಷಣ, ಗ್ರಾಮಸ್ವಚ್ಛತೆ, ಆರ್ಥಿಕ ಸಮಾನತೆ, ಸಮುದಾಯದ ಐಕ್ಯತೆ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಸಾರ್ವಜನಿಕ ಆರೋಗ್ಯ ಹಾಗೂ ಶಿಕ್ಷಣ ಅವರ ರಚನಾತ್ಮಕ ಕಾರ್ಯಕ್ರಮಗಳು. ಈ ಚಿಂತನೆ ಗಾಂಧೀ ವಿಚಾರಧಾರೆಯಲ್ಲಿ ನಂಬಿಕೆಯಿಟ್ಟಿರುವ ನಮ್ಮ ಸರ್ಕಾರದ ಮಾರ್ಗದರ್ಶಿ ಸೂತ್ರಗಳೂ ಆಗಿವೆ.

siddaramaiah

ಗ್ರಾಮ ಸ್ವರಾಜ್ಯ ಮಹಾತ್ಮ ಗಾಂಧಿ ಅವರ ಅಚ್ಚುಮೆಚ್ಚಿನ ಕಾರ್ಯಕ್ರಮ. ಗಾಂಧೀಜಿ ಅವರ ಕನಸಾಗಿದ್ದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಸಮಗ್ರವಾಗಿ ಮತ್ತು ಸಮರ್ಥವಾಗಿ ಜಾರಿಗೆ ತಂದ ದೇಶದ ಮೊದಲ ರಾಜ್ಯ ಕರ್ನಾಟಕ. ಗ್ರಾಮಮಟ್ಟದ ಆಡಳಿತ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರ ನೀಡಿ ಅವು ಸ್ವಾವಲಂಬಿ, ಸ್ವಾಭಿಮಾನಿ ಘಟಕಗಳಾಗುವಂತೆ ಮಾಡಬೇಕು ಎಂದು ಗಾಂಧಿ ಕನಸು ಕಂಡಿದ್ದರು. ಗಾಂಧೀಜಿ ಅವರ ಗ್ರಾಮಾಭಿವೃದ್ಧಿಯ ಕನಸುಗಳನ್ನು ನನಸು ಮಾಡಲು ನಾವು ಕಂಕಣ ಬದ್ಧರಾಗಿದ್ದೇವೆ. [ಶಾಸ್ತ್ರಿ ಅವರಿಗೊಂದು ಸಲಾಂ]

ಗ್ರಾಮಗಳ ವಿಕಾಸಕ್ಕಾಗಿ 21 ಅಂಶಗಳ ಹೊಸ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಗ್ರಾಮ ನೈರ್ಮಲ್ಯ ಗಾಂಧೀಜಿಯವರ ಅಚ್ಚುಮೆಚ್ಚಿನ ಕಾಯಕವಾಗಿತ್ತು. ಗ್ರಾಮ ನೈರ್ಮಲ್ಯದ ವಿಷಯದಲ್ಲಿ ಕರ್ನಾಟಕವು ಗಾಂಧೀಜಿಯವರ ಹಾದಿಯಲ್ಲೇ ನಡೆಯುತ್ತಿದ್ದು ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ. ವೈಯಕ್ತಿಕ ಶೌಚಾಲಯಗಳ ನಿರ್ಮಾಣದಲ್ಲಿ ಕರ್ನಾಟಕ ರಾಜ್ಯವು ಇಡೀ ರಾಷ್ಟ್ರದಲ್ಲಿಯೇ ಪ್ರಥಮ ಸ್ಥಾನದಲ್ಲಿದ್ದು ದಾಖಲೆ ನಿರ್ಮಿಸಿದೆ. ಸ್ನಾನಗೃಹ ಮತ್ತು ಶೌಚಾಲಯವನ್ನು ಗ್ರಾಮೀಣ ಗೌರವ ಕಾರ್ಯಕ್ರಮದಲ್ಲಿ ಒಟ್ಟಿಗೇ ನಿರ್ಮಿಸುವ ಹೊಸ ಪರಿಕಲ್ಪನೆಯನ್ನು ನಾವು ರಾಷ್ಟ್ರಕ್ಕೆ ನೀಡಿದ್ದೇವೆ.[ಬಾಪೂ ಇನ್ನೂ ಸತ್ತಿಲ್ಲ, ಇಲ್ಲೊಂದು ಪತ್ರ ಬರೆದಿದ್ದಾರೆ ಓದಿ!]

ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ಕೂಡ ಕರ್ನಾಟಕ ರಾಷ್ಟ್ರದ ಗಮನ ಸೆಳೆದಿದೆ. ಅತ್ಯುತ್ತಮ ಗುಣಮಟ್ಟದ ಕುಡಿಯುವ ನೀರನ್ನು ಅತ್ಯಲ್ಪ ದರದಲ್ಲಿ ಗ್ರಾಮೀಣ ಜನರಿಗೆ ಒದಗಿಸುತ್ತಿರುವ ಕರ್ನಾಟಕದ ಹೊಸ ಪ್ರಯೋಗದ ಬಗ್ಗೆ ರಾಷ್ಟ್ರಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಹಸಿದವನಿಗೆ ಭಗವಂತನು ಕೇವಲ ರೊಟ್ಟಿ ರೂಪದಲ್ಲಿ ಕಾಣಿಸಿಕೊಳ್ಳುತ್ತಾನೆ, ಬಡವರಿಗೆ ಆರ್ಥಿಕತೆಯೇ ಆಧ್ಯಾತ್ಮಿಕತೆ ಎಂದು ಗಾಂಧೀಜಿ ಹೇಳಿದ್ದರು. ಕರ್ನಾಟಕ ಸರ್ಕಾರದ ಚಿಂತನೆ ಕೂಡ ಇದೇ ಆಗಿದೆ.

ಕಡು ಬಡವರು ಅನ್ನಕ್ಕಾಗಿ ಯಾರ ಬಳಿಯೂ ಕೈ ಚಾಚದೆ ಸ್ವಾಭಿಮಾನದಿಂದ ಬದುಕಬೇಕು ಎನ್ನುವ ಆಶಯದಿಂದ ಅನ್ನಭಾಗ್ಯ ಯೋಜನೆಯನ್ನು ನಮ್ಮ ಸರ್ಕಾರ ಜಾರಿಗೊಳಿಸಿದೆ. ಕಡು ಬಡತನದ ಕುಟುಂಬಗಳಿಗೆ ಉಚಿತ ಆಹಾರ ಧಾನ್ಯ ನೀಡುವ ಅನ್ನಭಾಗ್ಯ ಯೋಜನೆಯಡಿ 4 ಕೋಟಿಗೂ ಹೆಚ್ಚು ಫಲಾನುಭವಿಗಳಿದ್ದಾರೆ. ಇದೀಗ ಈ ಯೋಜನೆಯನ್ನು ಬಡತನ ರೇಖೆಗಿಂತಲೂ ಮೇಲಿರುವ ಕುಟುಂಬಗಳಿಗೂ ಕೂಡ ರಿಯಾಯಿತಿ ದರದಲ್ಲಿ ಆಹಾರಧಾನ್ಯ ವಿತರಿಸುವ ಮೂಲಕ ವಿಸ್ತರಿಸಲಾಗಿದೆ.

ಜಾತಿ ವ್ಯವಸ್ಥೆಯ ವಿರುದ್ಧದ ಹೋರಾಟದಲ್ಲಿ ಕರ್ನಾಟಕಕ್ಕೆ ದೀರ್ಘ ಪರಂಪರೆಯಿದೆ. ಬಸವಣ್ಣನವರಿಂದ ಹಿಡಿದು ನಾಲ್ವಡಿ ಕೃಷ್ಣರಾಜ ಒಡೆಯರ್, ದೇವರಾಜ ಅರಸುವರೆಗೆ ಹಲವಾರು ಮಹನೀಯರು ಜಾತಿ ಪದ್ಧತಿಯ ವಿರುದ್ಧ ಹೋರಾಡಿ ಕರ್ನಾಟಕಕ್ಕೆ ಘನತೆ ತಂದುಕೊಟ್ಟಿದ್ದಾರೆ. ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿರುವ ನಮ್ಮ ಸರ್ಕಾರ ಕೂಡ ಈ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುತ್ತಿದೆ.

ಅಸ್ಪೃಶ್ಯತೆ ಎನ್ನುವುದು ಕೇವಲ ಕಾನೂನಿನ ಮೂಲಕ ನಿವಾರಣೆಯಾಗುವಂತಹ ಪಿಡುಗಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ. ಅಸ್ಪೃಶ್ಯ ಸಮುದಾಯವನ್ನು ಶೈಕ್ಷಣಿಕವಾಗಿ ಸದೃಢರನ್ನಾಗಿ ಮತ್ತು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು ಕೂಡಾ ಅಗತ್ಯ. ನಮ್ಮ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಒಳಿತನ್ನೇ ಕೇಂದ್ರೀಕರಿಸಿ ಆಡಳಿತ ನಡೆಸುತ್ತಿದೆ.

English summary
Karnataka Chief Minister Siddaramaiah in his speech said, Mahatma Gandhi wanted Gram Swaraj (village self-governance) Karnataka government fulfilled that dream.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X