Gandhi Jayanti 2024: ಶಾಲೆಗಳಲ್ಲಿ ಗಾಂಧಿ ಜಯಂತಿ ಆಚರಣೆಗೆ ಮಾರ್ಗಸೂಚಿ
ಬೆಂಗಳೂರು, ಸೆಪ್ಟೆಂಬರ್ 29: ಅಕ್ಟೋಬರ್ 2ರಂದು ಗಾಂಧಿ ಜಯಂತಿ ಆಚರಣೆಗೆ ತಯಾರಿ ನಡೆದಿದೆ. ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಕಛೇರಿ, ಬೆಂಗಳೂರು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ದಿನಾಂಕ 02.10.2024ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸುವ ಬಗ್ಗೆ ಸುತ್ತೋಲೆಯನ್ನು ಹೊರಡಿಸಿದೆ. ಯಾವ ರೀತಿ ಆಚರಣೆ ಮಾಡಬೇಕು ಎಂದು ಮಾರ್ಗಸೂಚಿಯನ್ನು ತಿಳಿಸಿದೆ.
ಈ ಕುರಿತು ಬಿ. ಬಿ. ಕಾವೇರಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದ್ದಾರೆ. ವಿಷಯಾನ್ವಯ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ರಾಷ್ಟ್ರೀಯ ಹಬ್ಬಗಳನ್ನು ನಾಡ ಹಬ್ಬಗಳನ್ನು ಮತ್ತು ಪ್ರಮುಖ ಜಯಂತಿಗಳನ್ನು ಆಯಾ ದಿನದಂದು ಕಡ್ಡಾಯವಾಗಿ, ಗೌರವಪೂರ್ವಕವಾಗಿ ಆಚರಿಸಲು ಕ್ರಮವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಮತ್ತು ರಾಜ್ಯದ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಈಗಾಗಲೇ ಅಗತ್ಯ ನಿರ್ದೇಶನಗಳನ್ನು ನೀಡಲಾಗಿರುತ್ತದೆ.

2024-25ನೇ ಸಾಲಿನಲ್ಲಿ ದಿನಾಂಕ 02.10.2024ರಂದು ಮಹಾತ್ಮ ಗಾಂಧಿ ಜಯಂತಿಯ ಸ್ಮರಣಾರ್ಥ ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸುವ ಕುರಿತು ವಹಿಸಬೇಕಾದ ಕ್ರಮಗಳ ಕುರಿತು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದೆ.
ದಿನಾಂಕ 02.10.2024ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 155ನೇ ಜಯಂತಿಯನ್ನು ಹಾಗೂ ದೇಶದ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧಿಯವರು ವಹಿಸಿದ್ದು, ಈ ಐತಿಹಾಸಿಕ ಘಟನೆಯ ಶತಮಾನೋತ್ಸವ ಸಂಭ್ರಮವನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಅರ್ಥಪೂರ್ಣವಾಗಿ, ಸಂಭ್ರಮಯುತವಾಗಿ ಮತ್ತು ವೈಶಿಷ್ಟ್ಯಪೂರ್ಣವಾಗಿ ಕೆಳಕಂಡಂತೆ ಕಡ್ಡಾಯವಾಗಿ ಆಚರಿಸಲು ಅಗತ್ಯ ಕ್ರಮಗಳನ್ನು ವಹಿಸುವಂತೆ ಇಲಾಖಾಧಿಕಾರಿಗಳಿಗೆ ಹಾಗೂ ರಾಜ್ಯದ ಎಲ್ಲಾ ಶಾಲೆಗಳ ಮುಖ್ಯಸ್ಮರಿಗೆ ಸೂಚಿಸಲಾಗಿದೆ ಎಂದು ಹೇಳಿದೆ.
ಮಾರ್ಗಸೂಚಿಗಳು
* ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ದಿನಾಂಕ 02.10.2024ರಂದು ಬೆಳಗ್ಗೆ 9 ಗಂಟೆಗೆ ವಿದ್ಯಾರ್ಥಿಗಳ, ಶಿಕ್ಷಕರ ಮತ್ತು ಎಸ್.ಡಿ.ಎಂ.ಸಿಗಳ ಸಮ್ಮುಖದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಭಾವಚಿತ್ರಕ್ಕೆ ಗೌರವಪೂರ್ವಕವಾಗಿ ಪುಷ್ಪನಮನ ಸಲ್ಲಿಸುವುದು.
* ಈ ಸಂದರ್ಭದಲ್ಲಿ ಮಹಾತ್ಮ ಗಾಂಧಿಯವರ ಗೌರವಾರ್ಥ ಬಿಳಿ ಗಾಂಧಿ ಟೋಪಿಯನ್ನು ಸ್ವಯಂಪ್ರೇರಿತರಾಗಿ ಧರಿಸಬಹುದಾಗಿರುತ್ತದೆ.
* ಈ ದಿನದಂದು ಆಯಾ ಶಾಲೆಗಳಲ್ಲಿ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮ ಗಾಂಧಿಯವರ ಹಾಗೂ ಇತರೆ ಮಹಾನ್ ನಾಯಕರ ಜೀವನ ಮತ್ತು ಸಾಧನೆ, ಅವಿಸ್ಮರಣೀಯ ಕೊಡುಗೆಗಳ ಕುರಿತು, ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಘಟನೆಗಳ ಕುರಿತು ಸ್ಮರಿಸುವುದು ಹಾಗೂ ದೇಶಪ್ರೇಮ, ಸ್ವಾತಂತ್ರ್ಯ, ಸಮಾನತೆ, ಶಾಂತಿ, ಅಹಿಂಸೆ, ಸತ್ಯನಿಷ್ಠೆ, ಪ್ರಾಮಾಣಿಕತೆ, ಶಿಸ್ತು, ಜಾತ್ಯಾತೀತತೆ, ಅಸ್ಪೃಶ್ಯತೆ ನಿವಾರಣೆ, ಸ್ವಚ್ಛತೆ, ಶ್ರಮದಾನ ಹಾಗೂ ತಂಬಾಕು ಮತ್ತು ಮಾದಕ ವಸ್ತುಗಳಿಂದ ದೂರವಿರುವುದು ಮುಂತಾದ ಆದರ್ಶ ತತ್ವಗಳ ಹಾಗೂ ಜೀವನ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಹಾಗೂ ಜೀವನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯವಾಗಿದ್ದು ಪ್ರೇರೇಪಿಸುವುದು.
* ದೇಶದ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧಿಯವರು ವಹಿಸಿದ್ದು, ಈ ಐತಿಹಾಸಿಕ ಘಟನೆ ಶತಮಾನೋತ್ಸವನ್ನು ಪೂರೈಸುತ್ತಿರುವ ಹಿನ್ನಲೆಯಲ್ಲಿ ಈ ಕುರಿತು ಹಾಗೂ ಮಹಾತ್ಮ ಗಾಂಧಿಯವರ ಜನ್ಮ ದಿನ ಅಕ್ಟೋಬರ್ 2ಅನ್ನು ಪ್ರತಿ ವರ್ಷ ಅಂತರಾಷ್ಟ್ರೀಯ ಅಹಿಂಸಾ ದಿನವನ್ನಾಗಿ ವಿಶ್ವಸಂಸ್ಥೆಯಿಂದ ಆಚರಿಸಲಾಗುತ್ತಿರುವ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವುದು.
* ಸದರಿ ದಿನದಂದು ಶ್ರಮದಾನವನ್ನು ಕೈಗೊಂಡು ಆಯಾ ಶಾಲೆಗಳ ಆವರಣ, ಸುತ್ತ-ಮುತ್ತ ಹಾಗೂ ಸಾರ್ವಜನಿಕ ಸ್ಥಳಗಳ ಸ್ವಚ್ಛತಾ ಆಂದೋಲನವನ್ನು ಹಮ್ಮಿಕೊಳ್ಳುವುದು. ಈ ಸಂದರ್ಭದಲ್ಲಿ ಅಗತ್ಯಾನುಸಾರ ಸ್ಥಳೀಯ ಸಂಸ್ಥೆಗಳ ಸಹಕಾರವನ್ನು ಪಡೆದುಕೊಳ್ಳುವುದು.
* ಮಹಾತ್ಮ ಗಾಂಧಿಯವರ ಜಯಂತಿಯ ಮಹತ್ವವನ್ನು ಹಾಗೂ ತತ್ವಗಳನ್ನು ಮತ್ತು ಸಂದೇಶವನ್ನು ಸಾರ್ವಜನಿಕರಿಗೆ ವ್ಯಾಪಕವಾಗಿ ತಲುಪಿಸಲು ಆಯಾ ಊರಿನಲ್ಲಿ, ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ 6 ರಿಂದ 10ನೇ ತರಗತಿಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ರಾಷ್ಟ್ರ ಧ್ವಜದೊಂದಿಗೆ, ರಾಷ್ಟ್ರ ಪ್ರೇಮವನ್ನು ಸಾರುವ ಘೋಷಣಾ ವಾಕ್ಯಗಳು ಉದ್ಧರಿಸುತ್ತಾ 1 ಕಿ.ಮೀ ಗೆ ಕಡಿಮೆಯಿಲ್ಲದಂತೆ ಜಾಥಾವನ್ನು ಕೈಗೊಳ್ಳತಕ್ಕದ್ದು ಹಾಗೂ ಕಡೆಯಲ್ಲಿ ಅಹಿಂಸೆಯನ್ನು ಪಾಲಿಸುವ ಬಗ್ಗೆ ಮತ್ತು ತಂಬಾಕು ಮತ್ತು ಮಾದಕ ವಸ್ತುಗಳಿಂದ ದೂರವಿರುವ ಕುರಿತಾದ ಪ್ರತಿಜ್ಞಾವಿಧಿಯನ್ನು ಕೈಗೊಳ್ಳತಕ್ಕದ್ದು.
* ಈ ದಿನದಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಾಗೂ ಉಪಾಹಾರ ಮತ್ತು ಅಕ್ಷರ ದಾಸೋಹ ಯೋಜನೆಯಡಿಯ ಬಿಸಿಯೂಟವನ್ನು ವಿತರಿಸತಕ್ಕದ್ದು.
ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ದಿನಾಂಕ 02.10.2024 ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 155ನೇ ಜಯಂತಿಯನ್ನು ಹಾಗೂ ದೇಶದ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧಿಯವರು ವಹಿಸಿದ್ದು, ಈ ಐತಿಹಾಸಿಕ ಘಟನೆಯ ಶತಮಾನೋತ್ಸವ ಸಂಭ್ರಮವನ್ನು ಅರ್ಥಪೂರ್ಣವಾಗಿ, ಸಂಭ್ರಮಯುತವಾಗಿ ಮತ್ತು ವೈಶಿಷ್ಟ್ಯಪೂರ್ಣವಾಗಿ ಮೇಲ್ಕಂಡಂತೆ ಹಾಗೂ ಈ ಸಂಬಂಧ ಸರ್ಕಾರ, ಸಂಬಂಧಿಸಿದ ಇಲಾಖೆಗಳು ಮತ್ತು ಜಿಲ್ಲಾಡಳಿತ ಕಾಲ-ಕಾಲಕ್ಕೆ ನೀಡುವ ಸೂಚನೆಗಳನ್ನು ಆಧರಿಸಿ ಕಡ್ಡಾಯವಾಗಿ ಆಚರಿಸಲು ಅಗತ್ಯ ಕ್ರಮಗಳನ್ನು ವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಹಾಗೂ ರಾಜ್ಯದ ಎಲ್ಲಾ ಶಾಲೆಗಳ ಮುಖ್ಯಸ್ಥರಿಗೆ ಈ ಮೂಲಕ ಸೂಚಿಸಲಾಗಿದೆ ಎಂದು ಹೇಳಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications