ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಈ ನಿಯಮ ಪಾಲನೆ ಕಡ್ಡಾಯ

|
Google Oneindia Kannada News

ಬೆಂಗಳೂರು, ಆಗಸ್ಟ್.18: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ಗಮನದಲ್ಲಿಟ್ಟುಕೊಂಡು ಈ ವರ್ಷ ಗಣೇಶ ಚತುರ್ಥಿ ಹಬ್ಬ ಆಚರಿಸುವುದಕ್ಕೆ ರಾಜ್ಯ ಸರ್ಕಾರವು ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊರಡಿಸಿದೆ.

Recommended Video

ಮೊಹರಂ ಆಚರಣೆಗೆ ಇಲ್ಲ ಅನುಮತಿ | Oneindia Kannada

ಮಹಾಮಾರಿ ಕೊವಿಡ್-19 ಸೋಂಕಿನ ಭೀತಿ ನಡುವೆ ಹಬ್ಬದ ಆಚರಣೆಗೆ ಸರ್ಕಾರವು ಅನುಮತಿ ನೀಡಿದೆ. ಆದರೆ ಗಣೇಶ ಚತುರ್ಥಿ ಹಬ್ಬ ಆಚರಿಸುವ ಮೊದಲು ಸಾರ್ವಜನಿಕರು ಈ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು.

'ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ, ಮೊಹರಂ ಹಬ್ಬದಲ್ಲಿ ತಾಬೂತುಗಳ ಪ್ರತಿಷ್ಠಾಪನೆ ನಿಷೇಧ''ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ, ಮೊಹರಂ ಹಬ್ಬದಲ್ಲಿ ತಾಬೂತುಗಳ ಪ್ರತಿಷ್ಠಾಪನೆ ನಿಷೇಧ'

ರಾಜ್ಯ ಸರ್ಕಾರವು ಗಣೇಶ ಚತುರ್ಥಿ ಆಚರಣೆಗೆ ಸಂಬಂಧಿಸಿದಂತೆ ರಚಿಸಿರುವ ಪರಿಷ್ಕೃತ ಮಾರ್ಗಸೂಚಿಯಲ್ಲಿ ಇರುವ ಅಂಶಗಳು ಯಾವವು ಎನ್ನುವುದರ ಕುರಿತು ಸ್ವತಃ ಮುಖ್ಯಮಂತ್ಪಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಈ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ.

ಗಣೇಶ ಪ್ರತಿಮೆ ಎತ್ತರ ನಾಲ್ಕು ಅಡಿ ಮೀರುವಂತಿಲ್ಲ

ಗಣೇಶ ಪ್ರತಿಮೆ ಎತ್ತರ ನಾಲ್ಕು ಅಡಿ ಮೀರುವಂತಿಲ್ಲ

ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸುವುದು. ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಗಳಲ್ಲಿ ಎರಡು ಅಡಿ ಎತ್ತರ ಮೀರದಂತೆ ಪ್ರತಿಷ್ಠಾಪಿಸಬೇಕು.

ಸ್ಥಳೀಯ ಆಡಳಿತದಿಂದ ಅನುಮತಿ ಪಡೆಯುವುದು ಕಡ್ಡಾಯ

ಸ್ಥಳೀಯ ಆಡಳಿತದಿಂದ ಅನುಮತಿ ಪಡೆಯುವುದು ಕಡ್ಡಾಯ

ಪಾರಂಪರಿಕ ಗಣೇಶೋತ್ಸವಕ್ಕಾಗಿ, ಗಣೇಶ ಸಮಿತಿಗಳು, ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನ್ಸಿಪಲ್ ಕಾರ್ಪೋರೇಷನ್ ಮತ್ತು ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆದುಕೊಳ್ಳುವುದು ಕಡ್ಡಾಯಗೊಳಿಸಲಾಗಿದೆ. ಒಂದು ವಾರ್ಡಿಗೆ ಅಥವಾ ಒಂದು ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವುದಕ್ಕೆ ಪ್ರೋತ್ಸಾಹಿಸಲಾಗುತ್ತದೆ.

ಸಾರ್ವಜನಿಕರ ಪ್ರದೇಶಗಳಲ್ಲೂ 20 ಜನರಿಗೆ ಅವಕಾಶ

ಸಾರ್ವಜನಿಕರ ಪ್ರದೇಶಗಳಲ್ಲೂ 20 ಜನರಿಗೆ ಅವಕಾಶ

ಗಣೇಶೋತ್ಸವ ಆಚರಿಸುವ ಸಾರ್ವಜನಿಕ ಪ್ರದೇಶಗಳಲ್ಲಿ ಏಕಕಾಲಕ್ಕೆ 20ಕ್ಕಿಂತ ಹೆಚ್ಚು ಜನರು ಸೇರದಂತೆ ಮುನ್ನೆಚ್ಚರಿಕೆ ವಹಿಸುವುದು ಕಡ್ಡಾಯವಾಗಿದೆ. 20ಕ್ಕಿಂತ ಕಡಿಮೆ ಭಕ್ತರಿಗೆ ಮಾತ್ರ ಗಣೇಶನ ದರ್ಶನಕ್ಕೆ ಅವಕಾಶ ನೀಡುವುದು. ಜೊತೆಗೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಸ್ಥಳದಲ್ಲಿ ಯಾವುದೇ ರೀತಿ ಸಾಂಸ್ಕೃತಿಕ/ಸಂಗೀತ/ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವುದಕ್ಕೆ ಅವಕಾಶ ಇರುವುದಿಲ್ಲ.

ಗಣೇಶ ಮೂರ್ತಿ ಪ್ರತಿಷ್ಠಾಪನೆ ವೇಳೆ ಮರೆವಣಿಗೆ ಮಾಡುವಂತಿಲ್ಲ

ಗಣೇಶ ಮೂರ್ತಿ ಪ್ರತಿಷ್ಠಾಪನೆ ವೇಳೆ ಮರೆವಣಿಗೆ ಮಾಡುವಂತಿಲ್ಲ

ಗಣೇಶ ಮೂರ್ತಿಯನ್ನು ತರುವಾಗ ಮತ್ತು ವಿಸರ್ಜಿಸುವ ಸಂದರ್ಭದಲ್ಲಿ ಯಾವುದೇ ಕಾರಣಕ್ಕಾಗಲಿ ಅಥವಾ ಸಂದರ್ಭಕ್ಕಾಗಲಿ ಮೆರವಣಿಗೆಗಳನ್ನು ಮಾಡುವಂತಿಲ್ಲ. ಗಣೇಶ ಮೂರ್ತಿ ಮೆರವಣಿಗೆ ಹೊರಡಿಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಅಲ್ಲದೇ ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲೇ ವಿಸರ್ಜಿಸುವುದು ಮತ್ತು ಸರ್ಕಾರಿ / ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಮೂರ್ತಿಗಳನ್ನು ಅತಿ ಸಮೀಪವಾಗುವಂತಹ ಮಾರ್ಗವನ್ನು ಬಳಸಿಕೊಂಡು ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಹತ್ತಿರದ ಸ್ಥಳೀಯ ಸಂಸ್ಥೆಗಳ/ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್ ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ವಿಸರ್ಜನೆ ಮಾಡುವುದು.

English summary
Ganesh Chaturthi 2020: Karnataka Government Allowed To Installation Of Gganesh Idols In Public Places In A Revised Guidelines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X