ಗಣೇಶ ಚತುರ್ಥಿ ಅಂಗವಾಗಿ ಯಶವಂತಪುರ- ಬೆಳಗಾವಿ ವಿಶೇಷ ರೈಲು, ದಿನಾಂಕ, ಸಮಯದ ವಿವರ

ಬೆಂಗಳೂರು, ಸೆಪ್ಟೆಂಬರ್‌ 9: ಗಣೇಶ ಚತುರ್ಥಿ ಅಂಗವಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರದಿಂದ ಬೆಳಗಾವಿಗೆ ಹಾಗೂ ಬೆಳಗಾವಿಯಿಂದ ಯಶವಂತಪುರಕ್ಕೆ ವಿಶೇಷ ರೈಲುಗಳನ್ನು ಬಿಡುಗಡೆಗೆ ಆದೇಶ ನೀಡಲಾಗಿದೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ತಪ್ಪಿಸಲು ವಿಶೇಷ ರೈಲು ಪ್ರಾರಂಭಿಸುವುದರ ಬಗ್ಗೆ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಯಶವಂತಪುರನಿಂದ ಬೆಳಗಾವಿಗೆ ಮತ್ತು ಬೆಳಗಾವಿಯಿಂದ ಯಶವಂತಪುರಗೆ ಎರಡು ದಿನಗಳವರೆಗೆ ವಿಶೇಷ ರೈಲು ಬಿಡಲು ಆದೇಶಿಸಿರುತ್ತಾರೆ.

Ganesh Chaturthi yeshwanthpur- Belagavi Special Train, Date, Time Details

ಈ ರೈಲು ಯಶವಂತಪುರ-ಬೆಳಗಾವಿ ರೈಲು (07389) ಸೆ.15 ರ ಸಂಜೆ 6.15 ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು 16ರ ಬೆಳಗ್ಗೆ 6.00 ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿ-ಯಶವಂತಪುರ ರೈಲು (07390) ಸೆ.16ರ ಸಂಜೆ 5.30 ಕ್ಕೆ ಬೆಳಗಾವಿಯಿಂದ ಹೊರಟು 17 ರ ಬೆಳಗ್ಗೆ 04.30 ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ.

ಅಲ್ಲದೆ ಯಶವಂತಪುರ-ಬೆಳಗಾವಿ ರೈಲು (07391) ಸೆ.17 ರ ಸಂಜೆ 6.15 ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು 18ರ ಬೆಳಗ್ಗೆ 6.00 ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿ-ಯಶವಂತಪುರ ರೈಲು (07392) ಸೆ.18ರ ಸಂಜೆ 5.30 ಕ್ಕೆ ಬೆಳಗಾವಿಯಿಂದ ಹೊರಟು 19 ರ ಬೆಳಗ್ಗೆ 04.30 ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಂಸದ ಈರಣ್ಣ ಕಡಾಡಿ ಅವರು ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ವಿನಂತಿಸುತ್ತೇನೆ. ನನ್ನ ಮನವಿಗೆ ಸ್ಪಂದಿಸಿ ಶೀಘ್ರ ರೈಲಿನ ವ್ಯವಸ್ಥೆ ಮಾಡಿದ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಈ ಮೂಲಕ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+