Ganesh Festival Riots: "ರಾಜ್ಯದ 4 - 5 ಕಡೆ ಗಣೇಶೋತ್ಸವದಲ್ಲಿ ವಿಘ್ನ"!
Ganesh Festival Riots: ಕರ್ನಾಟಕದಲ್ಲಿ ಈ ಬಾರಿ ಗಣೇಶೋತ್ಸವದ ವೇಳೆ ಮತ್ತೆ ವಿಘ್ನ ಏರ್ಪಟ್ಟಿದೆ. ಕಳೆದ ಬಾರಿ ಕರ್ನಾಟಕದಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ಕೆಲವೊಂದು ಗೊಂದಲ ಏರ್ಪಟ್ಟಿತ್ತು. ಈ ಕಾರಣಕ್ಕಾಗಿ ಈ ಬಾರಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಗೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಆದರೆ ಇದರ ಹೊರತಾಗಿಯೂ ಈ ಬಾರಿ ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆಯ ವೇಳೆ ಗಲಭೆ ಸಂಭವಿಸಿದೆ. ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದಿಂದ ಈ ವರ್ಷವೂ ಗಣೇಶೋತ್ಸವಕ್ಕೆ ವಿಘ್ನ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.
ಕಳೆದ ವರ್ಷ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಅಮಾಯಕ ಹಿಂದೂಗಳ ಮೇಲೆ ಮತಾಂಧ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ, ಅಂಗಡಿ-ಮುಂಗಟ್ಟುಗಳು, ವಾಹನಗಳಿಗೆ ಬೆಂಕಿ ಹಚ್ಚಿಲು ಬಿಟ್ಟು ಗಣೇಶ ಮೂರ್ತಿಯನ್ನು ಪೊಲೀಸ್ ವ್ಯಾನ್ ಹತ್ತಿಸುವ ಪಾಪದ ಕೆಲಸ ಮಾಡಿದ್ದ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಈ ವರ್ಷವೂ ಗಣೇಶ ವಿಸರ್ಜನೆ ವೇಳೆ ಹಿಂದುಗಳಿಗೆ ಸೂಕ್ತ ಭದ್ರತೆ ಒದಗಿಸಲು ವಿಫಲವಾಗಿದೆ.

ಕಳೆದ ವರ್ಷ ನಾಗಮಂಗಲ, ಶಿವಮೊಗ್ಗ ಸೇರಿದಂತೆ ಅನೇಕ ಕಡೆ ಗಣೇಶೋತ್ಸವ ವೇಳೆ ಕೋಮು ದಳ್ಳುರಿ ನಡೆದಿದ್ದರೂ ಈ ಬಾರಿ ಎಚ್ಚೆತ್ತುಕೊಳ್ಳದ ಕಾಂಗ್ರೆಸ್ ಸರ್ಕಾರ ಈ ವರ್ಷ ಮದ್ದೂರು, ಹುಬ್ಬಳ್ಳಿ, ಬಾಗಲಕೋಟೆ, ಸಾಗರ, ಧಾರವಾಡ ಸೇರಿದಂತೆ 4-5 ಕಡೆಗಳಲ್ಲಿ ನೆಮ್ಮದಿಯ ಗಣೇಶೋತ್ಸವಕ್ಕೆ ಭಂಗ ಉಂಟುಮಾಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ದೂರಿದ್ದಾರೆ.
ಗೃಹ ಸಚಿವ ಜಿ. ಪರಮೇಶ್ವರ್ ಅವರ ಪ್ರಕಾರ ಇವೆಲ್ಲವೂ "ಆಕಸ್ಮಿಕ", "ಸಣ್ಣ" ಘಟನೆಗಳೋ ಅಥವಾ ಈ ಘಟನೆಗಳ ಬಗ್ಗೆ "ಗೊತ್ತಿಲ್ಲ" ಎಂದು ಎಂದಿನಂತೆ ತಿಪ್ಪೆ ಸರಿಸುತ್ತಾರೋ ಆ ಭಗವಂತನೇ ಬಲ್ಲ. ಒಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಇರುವವರೆಗೂ ಕರ್ನಾಟಕದಲ್ಲಿ ಹಿಂದುಗಳಿಗೆ ಉಳಿಗಾಲವಿಲ್ಲ. ಹಿಂದೂಗಳು ತಮ್ಮ ಹಬ್ಬ, ಹರಿದಿನಗಳನ್ನ, ಉತ್ಸವ, ಜಾತ್ರೆಗಳನ್ನ ನೆಮ್ಮದಿಯಿಂದ ಆಚರಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಹಿಂದೂ ಸಮಾಜದ ಹಿರಿಯರನ್ನು ಕರೆದು ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು ಮದ್ದೂರಿನಲ್ಲಿ ಉದ್ವಿಗ್ನ ಸ್ಥಿತಿ ತಲೆದೋರಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಪೊಲೀಸ್ ಲಾಠಿಚಾರ್ಜ್ ಹಾಗೂ ಬಲವಂತದ ಪ್ರಯೋಗದಿಂದ ಜನಾಕ್ರೋಶವನ್ನು ಹತ್ತಿಕ್ಕಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ. ಹಿಂದೂ ಕಾರ್ಯಕರ್ತರನ್ನು ಸದೆಬಡಿಯುವ ಹುನ್ನಾರ ಸರ್ಕಾರದ ಈ ನಡವಳಿಕೆಯಿಂದ ಸ್ಪಷ್ಟವಾಗುತ್ತಿದೆ.
ಗೃಹ ಸಚಿವರು ಈ ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಹಬದಿಗೆ ತರಲು, ನಿನ್ನೆ ಗಣಪತಿ ಉತ್ಸವದ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಂಡು ಮದ್ದೂರಿನಲ್ಲಿ ಶಾಂತಿ ನೆಲೆಸಲು ಜರೂರು ಆದ್ಯತೆ ನೀಡಲಿ ಎಂದು ಒತ್ತಾಯಿಸುವೆ ಎಂದಿದ್ದಾರೆ.












Click it and Unblock the Notifications