NWKRTC: ಗಣೇಶ ಹಬ್ಬದ ಪ್ರಯಾಣಿಕರಿಗೆ ಗುಡ್‌ನ್ಯೂಸ್‌: ಉತ್ತರ ಕರ್ನಾಟಕದಿಂದ ಹೆಚ್ಚುವರಿ ಬಸ್ ಕಾರ್ಯಾಚರಣೆ

ಹುಬ್ಬಳ್ಳಿ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಈಗಾಗಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವತಿಯಿಂದ ಹೆಚ್ಚುವರಿ ಬಸ್ ಬಿಡಲಾಗಿದೆ. ಇತ್ತ ಉತ್ತರ ಕರ್ನಾಟಕ ವ್ಯಾಪ್ತಿಯ ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC)ಯ ವಿವಿಧ ಘಟಕಗಳಿಂದಲೂ ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರು ತಿಳಿಸಿದ್ದಾರೆ.

ಚೌತಿ ಪ್ರಯುಕ್ತ ಪ್ರಯುಕ್ತ ತಮ್ಮ ಸ್ವಂತ ಊರುಗಳಿಗೆ ತೆರಳುವವರ ಸಂಖ್ಯೆ ಹೆಚ್ಚಿರುತ್ತದೆ. ಸಂಚಾರ ದಟ್ಟಣೆಯು ಅಧಿಕವಾಗಿರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ದಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 312 ಹೆಚ್ಚುವರಿ ವಿಶೇಷ ಸಾರಿಗೆ ಬಸ್‌ಗಳನ್ನು ಬಿಡುಗಡೆ ಮಾಡಲಾಗಿದೆ.

Ganesha Festival 2026

ಯಾವ ದಿನ ಹೆಚ್ಚುವರಿ ಸಾರಿಗೆ ಸಂಚರಿಸಲಿವೆ?

ಸೆಪ್ಟಂಬರ್ 14ರಂದು ಸೋಮವಾರ ಗಣೇಶ ಪ್ರತಿಷ್ಠಾಪಿಸಲಾಗುತ್ತದೆ. ಅದಕ್ಕು ಮುನ್ನ ವಾರಾಂತ್ಯವಾದ 12-09-2026 ರಂದು ಶನಿವಾರ ಮತ್ತು ಭಾನುವಾರ 13-09-2026 ರಂದು ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳುವವರು ಈ ಹೆಚ್ಚುವರಿ ಸಾರಿಗೆ ಬಸ್‌ಗಳ ಸೇವೆ ಪಡೆಯಬಹುದು ಎಂದು ಅವರು ಹೇಳಿದರು.

ಬೆಂಗಳೂರಿನಿಂದ ರಾಜ್ಯ/ಅಂತಾರಾಜ್ಯ ವಿವಿಧ ಸ್ಥಳಗಳಿಗೆ ತೆರಳಲು ಸೆಪ್ಟಂಬರ್ 11 ರಿಂದ ಸೆ.13ರವರೆಗೆ ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹಬ್ಬ ಮುಗಿದ ನಂತರ ಸೆಪ್ಟಂಬರ್ 14 ಹಾಗೂ ನಂತರ ದಿನಗಳಂದು ಪ್ರಮುಖ ಸ್ಥಳಗಳಿಗೆ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುವುದು ಎಂದರು.

ಸದರಿ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡಿಸಿಕೊಳ್ಳುವದರೊಂದಿಗೆ, ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳಬೇಕು. ಮುಂಗಡ ಟಿಕೆಟ್ ಸಹ ಬುಕ್ ಮಾಡಿಕೊಳ್ಳಲು ನೀವು www.ksrtc.in ಅಧಿಕೃತ ವೆಬ್‌ಸೈಟ್ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

KSRTC 2,400 ಹೆಚ್ಚುವರಿ ಬಸ್ ಬಿಡುಗಡೆ

ಗೌರಿ-ಗಣೇಶ ಹಬ್ಬದ ಪ್ರಯಾಣಿಕರಿಗಾಗಿ KSRTC ಸಹ ಬರೋಬ್ಬರಿ 2,400 ಹೆಚ್ಚುವರಿ ವಿಶೇಷ ಸಾರಿಗೆ ಬಸ್‌ ವ್ಯವಸ್ಥೆ ಮಾಡಿದೆ. ಈ ಬಸ್‌ಗಳು ವಾರಾಂತ್ಯದ ದಿನಗಳು (ಸೆಪ್ಟಂಬರ್ 12 & 13) ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ವಿವಿಧ ಮಾರ್ಗಗಳಲ್ಲಿ ಸೆಪ್ಟಂಬರ್ 11 ರಿಂದ ಸೆ.13 ರವರೆಗೆ ಸಂಚಾರ ನಡೆಸಲಿವೆ.

ಕರ್ನಾಟಕದ ವಿವಿಧ ಜಿಲ್ಲೆಗಳ ಮಾರ್ಗಗಳು ಅಂತಾರಾಜ್ಯದ ವಿವಿಧ ನಗರಗಳಿಗೂ ಸಂಪರ್ಕ ಸೇವೆ ನೀಡಲಿವೆ. ಮಾರ್ಗಗಳನ್ನು ನೋಡುವುದಾದರೆ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಶಿವಮೊಗ್ಗ, ಹಾಸನ, ಮಂಗಳೂರು, ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಕುಂದಾಪುರ, ಶೃಂಗೇರಿ, ಹೊರನಾಡು, ಬೆಳಗಾವಿ, ವಿಜಯಪುರ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರಿ, ಬೀದರ್ ಹಾಗೂ ನೆರೆ ರಾಜ್ಯದ ತಿರುಪತಿ, ವಿಜಯವಾಡ, ಹೈದರಾಬಾದ್ ಇನ್ನಿತರ ಸ್ಥಳಗಳಿಗೆ ಈ ಬಸ್‌ಗಳು ಒಡಾಡಲಿವೆ.

ಎಲ್ಲಿಂದ ಸಂಚಾರ?

* ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಸಂಚಾರ ಮಾಡಲಿವೆ

* ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾನದಲ್ಲಿ ಹತ್ತಬೇಕು. ಈ ಹೆಚ್ಚುವರಿ ಬಸ್‌ಗಳ ವೇಳಾಪಟ್ಟಿ, ಇತರ ಮಾಹಿತಿಗೆ ಹಾಗೂ ಟಿಕೆಟ್ ಬುಕಿಂಗ್ ಗಾಗಿ https://www.ksrtc.karnataka.gov.in/ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+