ಚಿಕ್ಕಬಳ್ಳಾಪುರ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

Posted By:
Subscribe to Oneindia Kannada

ಚಿಕ್ಕಬಳ್ಳಾಪುರ, ಮೇ 25 : ತುಮಕೂರು ಮೂಲದ ಯುವತಿ ಮೇಲೆ ಚಿಕ್ಕಬಳ್ಳಾಪುರದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆಟೋ ಚಾಲಕರನ್ನು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಶಿವು, ಶಶಿಧರ್, ರಮೇಶ್ ಬಾಬು ಎಂದು ಗುರುತಿಸಲಾಗಿದೆ. ಮೇ 20ರಂದು ಪ್ರಿಯಕರನನ್ನು ಭೇಟಿಯಾಗಲು ಚಿಕ್ಕಬಳ್ಳಾಪುರಕ್ಕೆ ಬಂದಿದ್ದ ಯುವತಿ, ತುಮಕೂರಿಗೆ ಹೋಗಲು ಬಸ್ ನಿಲ್ದಾಣದಲ್ಲಿ ನಿಂತಿದ್ದಳು. [ಬಯಲುಸೀಮೆ ಗೌರಿಬಿದನೂರಲ್ಲಿ ಹಸಿರು ಕ್ರಾಂತಿ]

rape

ಅಲ್ಲಿಗೆ ಬಂದ ಆಟೋ ಚಾಲಕರು ಯುವತಿಯನ್ನು ಕರೆದುಕೊಂಡು ಹೋಗಿ ಎರಡು ದಿನಗಳ ಕಾಲ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂಬುದು ಆರೋಪವಾಗಿದೆ. ಸಂತ್ರಸ್ತ ಯುವತಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಕೊಡಿಸಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಿ ಕೊಡಲಾಗಿದೆ. [ಕೋಲ್ಕತಾ ಯುವತಿ ಮೇಲೆ ಬೆಂಗಳೂರಲ್ಲಿ ಗ್ಯಾಂಗ್ ರೇಪ್]

ಪ್ರಿಯಕರನ ವಿಚಾರಣೆ : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪ್ರಿಯಕರನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ. ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಅವರು ಚಿಕ್ಕಬಳ್ಳಾಪುರ ನಗರ ಠಾಣೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Chikkaballapur police arrested 3 auto drivers in connection with 24 year old dalit women gang rape. Women alleged that auto drivers raped her on May 20, 2016.
Please Wait while comments are loading...