ರಾಜ್ಯದಲ್ಲಿ ಬೆಚ್ಚಿಬೀಳಿಸುವ ಮತ್ತೊಂದು ಪೈಶಾಚಿಕ ಕೃತ್ಯ: ಬಾಲಕಿ ಮೇಲೆ ಸಾಮೂಹಿಕ...! ಸರ್ಕಾರದ ವಿರುದ್ಧ ಬಿಜೆಪಿ ಗರಂ

ಬೆಂಗಳೂರು, ಫೆಬ್ರವರಿ 03: ಮಂಡ್ಯದಲ್ಲಿ ಶಾಲಾ ಬಾಲಕಿ ಮೇಲೆ ಹಾಡಹಗಲೇ ಗ್ಯಾಂಗ್ ರೇಪ್ ನಡೆದಿದೆ. ಮೂವರು ಕಾಮುಕರು ಸೇರಿ ಬಾಲಕಿ ಮೇಲೆ ಸಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಘಟನೆಯು ರಾಜ್ಯದಲ್ಲಿ ಕಾನೂನು ಸೂವ್ಯವಸ್ಥೆ, ಬಾಲಕಿಯರು ಸೇರಿದಂತೆ ಮಹಿಳೆಯರ ರಕ್ಷಣೆಯ ಕುರಿತು ಪ್ರಶ್ನೆ, ಅನುಮಾನ ಹುಟ್ಟುವಂತೆ ಮಾಡಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಾಗಿದೆ. ದಿನಕ್ಕೊಂದು ಮಾನಭಂಗ, ಅತ್ಯಾಚಾರ ಪ್ರಕರಣಗಳು ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸುತ್ತಲೇ ಇದೆ ಎಂದು ಆರ್.ಅಶೋಕ್ ಅವರು ಸಾಮಾಜಿಕ ಜಾಲತಾಣದಲ್ಲಿ ಕಳವಳ ವ್ಯಕ್ತಪಡಿಸಿ ಪೋಸ್ಟ್ ಮಾಡಿದ್ದಾರೆ.

Gang Rape of 8 Year Old Girl in Mandya BJP Outraged Against State Government Spark debate

ಮಂಡ್ಯದಲ್ಲಿ 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಹೃದಯವಿದ್ರಾವಕ ಘಟನೆ ರಾಜ್ಯದಲ್ಲಿ ತಾಂಡವವಾಡುತ್ತಿರುವ ಅರಾಜಕತೆಗೆ ಮತ್ತೊಮ್ಮೆ ಕನ್ನಡಿ ಹಿಡಿದಂತಿದೆ ಎಂದು ಅವರು ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಹಿಳೆಯರ ಮೇಲೆ ಅತ್ಯಾಚಾರವಾದರೆ ಬಿಜೆಪಿ ಕಾಲದಲ್ಲಿ ರೇಪ್ ಆಗಿಲ್ಲವಾ? ಎಂದು ಉಡಾಫೆ ಕೊಡುತ್ತೀರಲ್ಲಾ, ನಿಮ್ಮ ಸರ್ಕಾರದ ಈ ಸಂವೇದನಾರಹಿತ ಧೋರಣೆ, ಅಲಕ್ಷ್ಯವೇ ಇವತ್ತಿನ ಅರಾಜಕತೆಗೆ ಕಾರಣ ಎಂದು ದೂರಿದರು.

Gang Rape of 8 Year Old Girl in Mandya BJP Outraged Against State Government Spark debate

ಆಕಸ್ಮಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರೇ 8 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆ ಮೂವರು ಕಾಮುಕರನ್ನು ಪತ್ತೆ ಹಚ್ಚಿ, ಬಂಧಿಸಿ, ಕಾನೂನಿನ ವಶಕ್ಕೆ ಒಪ್ಪಿಸಿ. ಮಹಿಳೆಯರ ಸುರಕ್ಷತೆಯ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನಾಡಿನ ಹೆಣ್ಣುಮಕ್ಕಳಿಗೆ ನಿರ್ಭೀತಿಯಿಂದ ಓಡಾಡುವ ಗ್ಯಾರೆಂಟಿಯನ್ನು ಕೊಡಿ ಎಂದು ಅವರು ಆಗ್ರಹಿಸಿದ್ದಾರೆ.

ಪ್ರಕರಣದ ಹಿನ್ನೆಲೆ, ಆಗಿದ್ದೇನು?

ಮಂಡ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನವರಿ 31ರಂದು ಮೂವರು ಕಾಮುಕರು ಬಾಲಕಿಯನ್ನು ಹೆದರಿಸಿ ಶಾಲಾ ಆವರಣದಲ್ಲಿಯೇ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಕೇಕ್ ಕೊಡಿಸುವುದಾಗಿ ಹೇಳಿ, ಚಾಕುವಿನಿಂಚ ಚುಚ್ಚುತ್ತೇವೆ ಎಂದು ಹೇಳಿದ ನಡೆದ ಈ ಘಟನೆಯು ಮಂಡ್ಯ ಹೊರವಲಯದ ಶಾಲೆ ಆವರಣದಲ್ಲಿ ಹಾಡಹಗಲೇ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪೈಶಾಚಿಕ ಕೃತ್ಯದ ಬಳಿಕ ಬಾಲಕಿಗೆ ಎರಡು ದಿನಗಳಿಂದ ನಿರಂತರ ರಕ್ತಸ್ರಾವ ಉಂಟಾಗಿದೆ. ತೀವ್ರ ಅನಾರೋಗ್ಯದಿಂದ ನರಳಾಡಿದ್ದಾರೆ. ವಿಪರೀತ ಹೊಟ್ಟೆನೋವು ಬಂದು ಆಕೆಯ ದೇಹದಲ್ಲಿ ಸಮಸ್ಯೆ ಆಗಿದೆ. ಬಳಿಕ ಈ ವಿಚಾರವನ್ನು ಬಾಲಕಿ ಬಾಯಿ ಬಿಟ್ಟಿದ್ದಾಳೆ. ಸದ್ಯ ಪ್ರಕರಣ ದಾಖಲಾಗಿದೆ. ಈ ಘಟನೆ ರಾಜ್ಯವ್ಯಾಪಿ ಆಕ್ರೋಶಕ್ಕೆ, ಚರ್ಚೆಗೆ ಕಾರಣವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದಕ್ಕೆ ಇದು ಉದಾಹರಣೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+