• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಏತಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದರು ಗಂಗಾವತಿ ಪ್ರಾಣೇಶ್?

|

ಬೆಂಗಳೂರು, ಡಿಸೆಂಬರ್, 27: ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾನೂನು ಬೆಂಬಲಿಸಿ ಖ್ಯಾತ ನಗೆ ಭಾಷಣಕಾರ ಗಂಗಾವತಿ ಪ್ರಾಣೇಶ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಡಿ 27 ರಂದು ಪತ್ರವನ್ನು ಕಳಿಸಿಕೊಟ್ಟಿರುವ ಅವರು, ಕಾಯ್ದೆ ಜಾರಿಗೊಳಿಸಿದ್ದಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

ಪೌರತ್ವ ಪ್ರತಿಭಟನೆಯಿಂದ ಕಳೆಗುಂದಿದ ಪ್ರವಾಸೋದ್ಯಮ

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಕೈಗೊಳ್ಳುತ್ತಿರುವ ಕ್ರಮಗಳನ್ನು ಅವರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಮೋದಿ ಅವರು ಭಾರತದಲ್ಲಿದ್ದುಕೊಂಡು ಭಾರತಕ್ಕೆ ಎರಡು ಬಗೆಯುವ ಶಕ್ತಿಗಳಿಗೆ ದುಸ್ವಪ್ನರಾಗಿದ್ದಾರೆ. ದೇಶದ ಭದ್ರತೆಗೆ ಇನ್ನಷ್ಟು ಕ್ರಮ ಕೈಗೊಳ್ಳಲಿ. ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ತಂದಿರುವುದು ಅತ್ಯಂತ ಸೂಕ್ತವಾಗಿದೆ ಬೆಂಬಲಿಸಿದ್ದಾರೆ.

ವಿವಾದಿತ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಮಸೂದೆ ಮಸೂದೆ ಸಂಸತ್ ನಲ್ಲಿ ಅನುಮೋದನೆ ಪಡೆದುಕೊಂಡು ಕಾನೂನಾಗಿದೆ. ಇದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಬಿಜೆಪಿ ಕೂಡ ವ್ಯಾಪಕವಾಗಿ ಇದರ ಕುರಿತು ಜನಜಾಗೃತಿ ಮಾಡುತ್ತಿದೆ. ಈಶಾನ್ಯ ಭಾರತದಲ್ಲಿ ಹಾಗೂ ದೆಹಲಿಯಲ್ಲಿ ಹಿಂಸಾಚಾರಗಳು ನಡೆಯುತ್ತಿವೆ. ಪ್ರತಿಭಟನೆ ಈಶಾನ್ಯ ರಾಜ್ಯಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ.

English summary
Gangavati Pranesh Letter To PM Modi On Citizenship Amendment Act. its twitted by RSS B L Santosh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X