ಸಿದ್ದರಾಮಯ್ಯಗೆ ಜೀವ ಬೆದರಿಕೆ ಹಾಕಿದ ಗಂಗಾವತಿಯ ವ್ಯಕ್ತಿ

Posted By:
Subscribe to Oneindia Kannada

ಗಂಗಾವತಿ, ಡಿಸೆಂಬರ್ 15: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಜಾಲ ತಾಣ ಫೇಸ್ ಬುಕು ನಲ್ಲಿ ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಕೊಪ್ಪಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಸುನೀಲ್ ಎಸ್ ರಾಯ್ಕರ್ ಎಂಬಾತ ತನ್ನ ಫೇಸ್‍ಬುಕ್ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊಲೆ ಬೆದರಿಕೆಯೊಡ್ಡಿದ್ದ.

Gangavati Man booked for posting death threat on Karnataka CM's Facebook page

ಸಿದ್ದರಾಮಯ್ಯ ವಿರುದ್ಧ ಹಾಕಿದ್ದ ಸ್ಟೇಟಸ್ ಗೆ ಲೈಕ್ಸ್, ಕಾಮೆಂಟ್ಸ್ ಕೂಡಾ ಬಂದಿತ್ತು. ಗಂಗಾವತಿಯಲ್ಲಿ ಇತ್ತೀಚೆಗೆ ನಡೆದ ಗಲಭೆಗೆ ಸಿಎಂ ಸಿದ್ದರಾಮಯ್ಯನವರೇ ಕಾರಣ ಎಂದು ಫೇಸ್ ಬುಕ್ ನಲ್ಲಿ ಆತ ಬರೆದುಕೊಂಡಿದ್ದ. ಆದರೆ, ನಂತರ ಪೋಸ್ಟ್ ಡಿಲೀಟ್ ಮಾಡಿದ್ದ.

ಸುನೀಲ್ ಅವರ ಫೇಸ್ ಬುಕ್ ಪೋಸ್ಟ್ ವಿರುದ್ಧ ಗಂಗಾವತಿ ನಗರಸಭೆ ಅಧ್ಯಕ್ಷ ಕೆ.ವೆಂಕಟೇಶ್ ಅವರು ಗಂಗಾವತಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸುನಿಲ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 287, 206, 153, 565, 504 ಹಾಗೂ 506 ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಸುನೀಲ್ ಗಾಗಿ ಹುಡುಕಾಟ ನಡೆಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
The Gangavathi town police in Koppal have registered a case against a man who posted a death threat on the Chief Minister Siddaramaiah on Facebook page.
Please Wait while comments are loading...