ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಕನ್ನಡ : ಗ್ಯಾಸ್ ಟ್ಯಾಂಕರ್ ಸ್ಫೋಟ

|
Google Oneindia Kannada News

ಉತ್ತರ ಕನ್ನಡ, ಸೆ. 01 : ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟಗೊಂಡಿರುವ ಘಟನೆ ಕುಮಟಾದಲ್ಲಿ ನಡೆದಿದೆ. ಟ್ಯಾಂಕರ್ ಹೊತ್ತಿ ಉರಿಯುತ್ತಿದ್ದು, ಚಾಲಕ ಸಜೀವವಾಗಿ ದಹನವಾಗಿದ್ದಾನೆ ಎಂದು ಶಂಕಿಸಲಾಗಿದೆ.

ಕುಮಟಾ ತಾಲೂಕಿನ ಬರ್ಗಿ ಬಳಿ ಮಂಗಳವಾರ ಬೆಳಗ್ಗೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಉರುಳಿ ಬಿದ್ದಿದ್ದು ನಂತರ ಅದಕ್ಕೆ ಬೆಂಕಿ ಹೊತ್ತಿಕೊಂಡಿದೆ. [ಟ್ಯಾಂಕರ್ ಪಲ್ಟಿ, 4 ಸಾವು]

gas

ಹೊತ್ತಿ ಉರಿಯುತ್ತಿರುವ ಟ್ಯಾಂಕರ್‌ನ ಬೆಂಕಿ ನಂದಿಸಲು ಅಗ್ನಿ ಶಾಮಕದಳದವರು ಪ್ರಯತ್ನ ನಡೆಸುತ್ತಿದ್ದಾರೆ. ಟ್ಯಾಂಕರ್ ಚಾಲಕ ಸಜೀವವಾಗಿ ದಹನವಾಗಿದ್ದಾನೆ ಎಂದು ಶಂಕಿಸಲಾಗಿದೆ. [ಆಂಧ್ರದಲ್ಲಿ ಗ್ಯಾಸ್ ಪೈಪ್ ಲೈನ್ ಸ್ಫೋಟ, ಚಿತ್ರಗಳು]

ಕುಮಟಾ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿ ಬೆಂಕಿ ಅವಘಡ : ಚಿಕ್ಕಮಗಳೂರಿನ ಕೈಗಾರಿಕಾ ಪ್ರದೇಶದದಲ್ಲಿನ ಎರಡು ಕಾರ್ಖನೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕದಳದವರು ಬೆಂಕಿ ನಂದಿಸಿದ್ದಾರೆ.

English summary
A tanker truck carrying liquefied petroleum gas lost control of driver and exploded in Bargi villge of Kumta, Uttara Kannada district of Karnataka on Tuesday morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X