ಗೌರಿ ಲಂಕೇಶ್ ಹತ್ಯೆ; ಜಾರ್ಖಂಡ್‌ನಲ್ಲಿ 18ನೇ ಆರೋಪಿ ಬಂಧನ
Recommended Video
ಬೆಂಗಳೂರು, ಜನವರಿ 10 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಂಚು ರೂಪಿಸಿದ್ದ ಆರೋಪಿಯನ್ನು ಎಸ್‌ಐಟಿ ಬಂಧಿಸಿದೆ. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನಲ್ಲಿ ಗೌರಿ ಲಂಕೇಶ್ ಹತ್ಯೆ ನಡೆದಿತ್ತು.
ಮಹಾರಾಷ್ಟ್ರದ ಋಷಿಕೇಶ್ ದೇವ್ಡೆಕರ್ ಅಲಿಯಾಸ್ ಮುರಳಿ (44) ಬಂಧಿತ ಆರೋಪಿ. ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಜಾರ್ಖಂಡ್ ರಾಜ್ಯದ ಧನಾಬಾದ್ ಜಿಲ್ಲೆಯ ಕತ್ರಾಸ್‌ನಲ್ಲಿನ ಮನೆಯಲ್ಲಿ ಮುರಳಿ ಬಂಧಿಸಿದೆ.
ಗೌರಿ ಲಂಕೇಶ್ ಹತ್ಯೆಗೆ ಬಳಸಲಾದ ಪಿಸ್ತೂಲ್ ನಾಶಪಡಿಸುವಲ್ಲಿ ಮುರಳಿ ಪ್ರಮುಖ ಪಾತ್ರ ವಹಿಸಿದ್ದ. ಹತ್ಯೆಯ ಆರೋಪಿಯಾಗಿರುವ ಅಮೋಲ್ ಕಾಳೆಯ ಡೈರಿಯಲ್ಲಿ ಮುರಳಿ ಬಗ್ಗೆ ಮಾಹಿತಿ ಇತ್ತು. ಹತ್ಯೆ ಪ್ರಕರಣದ ಬಳಿಕ ಈತ ತಲೆಮರೆಸಿಕೊಂಡಿದ್ದ.
ಎಸ್‌ಐಟಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆ ಮಾಡುವಾಗ ಮುರಳಿಯನ್ನು 18ನೇ ಆರೋಪಿ ಎಂದು ಉಲ್ಲೇಖಿಸಿದ್ದರು. ಜಾರ್ಖಂಡ್ ನ್ಯಾಯಾಲಯಕ್ಕೆ ಶುಕ್ರವಾರ ಆರೋಪಿಯನ್ನು ಹಾಜರುಪಡಿಸಿ ಬಳಿಕ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರಲಾಗುತ್ತದೆ.

ಎರಡು ವರ್ಷಗಳಿಂದ ಹುಡುಕಾಟ
ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಮುರಳಿಗಾಗಿ ಎರಡು ವರ್ಷಗಳಿಂದ ಹುಡುಕಾಟ ನಡೆಸಿತ್ತು. ಹತ್ಯೆಗೆ ಬಳಸಲಾದ ಪಿಸ್ತೂಲ್ ಅನ್ನು ಮುರಳಿ ತೆಗೆದುಕೊಂಡು ಹೋಗಿ ನಾಶ ಮಾಡಿದ್ದಾನೆ ಎಂಬುದು ಆರೋಪ. ಹತ್ಯೆಯ ಆರೋಪಿಯಾಗಿರುವ ಅಮೋಲ್ ಕಾಳೆ ವಿಚಾರಣೆ ನಡೆಸಿದಾಗ ಮುರಳಿ ಬಗ್ಗೆ ಹೇಳಿದ್ದ. ಆತನ ಡೈರಿಯಲ್ಲಿಯೂ ಮುರಳಿ ಉಲ್ಲೇಖವಿತ್ತು.

ತರಬೇತಿ ನೀಡುತ್ತಿದ್ದ
ಬಲಪಂಥೀಯ ವಿಚಾರಧಾರೆಯನ್ನು ವಿರೋಧಿಸುವವರ ಹತ್ಯೆಗೆ ಸಜ್ಜಾಗಿದ್ದ ತಂಡವನ್ನು ಸಂಘಟಿಸುವ ವಿಷಯದಲ್ಲಿ ಮುರಳಿ ಕೆಲಸ ಮಾಡಿದ್ದ. ಅಲ್ಲದೆ ಸಂಘಟನೆಗೆ ನೇಮಕವಾದ ಸದ್ಯರಿಗೆ ಪಿಸ್ತೂಲ್ ಬಳಕೆ ಬಗ್ಗೆ ತರಬೇತಿ ನೀಡುತ್ತಿದ್ದ. ಹತ್ಯೆ ಪ್ರಕರಣದ ಆರೋಪಿಗಳಿಗೆ ಆರ್ಥಿಕ ನೆರವು, ವಸತಿ ವ್ಯವಸ್ಥೆಯನ್ನು ಮಾಡಿದ್ದ ಎಂದು ಎಸ್‌ಐಟಿ ಪೊಲೀಸರು ಹೇಳಿದ್ದಾರೆ.

ಎರಡೂ ಹತ್ಯೆಯಲ್ಲಿ ಭಾಗಿ?
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಹಲವು ಆರೋಪಿಗಳು ವಿಚಾರವಾದಿ, ಸಂಶೋಧಕ ಎಂ. ಎಂ. ಕಲಬುರ್ಗಿ ಹತ್ಯೆಯಲ್ಲಿಯೂ ಆರೋಪಿಗಳು. ಮುರಳಿ ಸಹ ಕಲಬುರ್ಗಿ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದಾನೆಯೇ ಎಂದು ಎಸ್‌ಐಟಿ ತನಿಖೆ ನಡೆಸಲಿದೆ. ಎಂ. ಎಂ. ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದೆ.

ಇನ್ನೂ ಒಬ್ಬ ಆರೋಪಿ ಸಿಗಬೇಕು
ಎಸ್‌ಐಟಿ ಪೊಲೀಸರ ಪ್ರಕಾರ ಗೌರಿ ಲಂಕೇಶ್ ಹತ್ಯೆಗೆ ಸಂಚು ರೂಪಿಸಿದ್ದ ಮತ್ತೊಬ್ಬ ಆರೋಪಿ ಇನ್ನೂ ಸಿಗಬೇಕಿದೆ. ಚಾರ್ಜ್‌ಶೀಟ್‌ನಲ್ಲಿ ಪೊಲೀಸರ ಆತನ ಹೆಸರು ಉಲ್ಲೇಖಿಸಿದ್ದು, ಬಂಧನಕ್ಕಾಗಿ ಹುಡುಕಾಟವನ್ನು ಮುಂದುವರೆಸಿದ್ದಾರೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications