ಗೌರಿ ಲಂಕೇಶ್ ಹತ್ಯೆ, ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ

ಬೆಂಗಳೂರು, ಸೆಪ್ಟೆಂಬರ್ 06 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ತನಿಖೆಗೆ ಕರ್ನಾಟಕ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಕೇಂದ್ರ ಗೃಹ ಸಚಿವಾಲಯ ಸರ್ಕಾರದಿಂದ ವರದಿ ಕೇಳಿದ್ದು, ಸಿಬಿಐ ತನಿಖೆ ನಡೆಯಲಿದೆಯೇ? ಕಾದು ನೋಡಬೇಕು.

ಮಂಗಳವಾರ ರಾತ್ರಿ ಬೆಂಗಳೂರಿನ ನಿವಾಸದಲ್ಲಿ ಗೌರಿ ಲಂಕೇಶ್ ಅವರನ್ನು ಗುಂಡು ಹಾರಿಸಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಗೌರಿ ಲಂಕೇಶ್ ಹತ್ಯೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ರಾಜ್ಯ, ದೇಶದ ವಿವಿಧ ನಾಯಕರು ಹತ್ಯೆಯನ್ನು ಖಂಡಿಸಿದ್ದಾರೆ.

Gauri Lankesh murder case : Home ministry seeks report

ಕರ್ನಾಟಕ ಸರ್ಕಾರ ಬುಧವಾರ ಹತ್ಯೆಯ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿದೆ. ಐಜಿ ದರ್ಜೆಯ ಅಧಿಕಾರಿ ತನಿಖೆಯ ಉಸ್ತುವಾರಿಯನ್ನು ನೋಡಿಕೊಳ್ಳಲಿದ್ದಾರೆ. 'ತನಿಖೆಯನ್ನು ಸಿಐಡಿಗೆ ವಹಿಸುವುದಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗೌರಿ ಲಂಕೇಶ್ ಹತ್ಯೆಯ ಬಗ್ಗೆ ವರದಿ ಕೇಳಿದ್ದಾರೆ. ಹತ್ಯೆ ಪ್ರಕರಣದ ವರದಿ ನೀಡುವಂತೆ ಗೃಹ ಸಚಿವಾಲಯ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮತ್ತು ಗೌರಿ ಲಂಕೇಶ್ ಸಹೋದರ ಇಂದ್ರಜಿತ್ ಲಂಕೇಶ್ ಹತ್ಯೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ಎಸ್‌ಐಟಿ ವರದಿ ಬಂದ ಬಳಿಕ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇವೆ' ಎಂದು ಸ್ಪಷ್ಟಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+