ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೌರಿ ಲಂಕೇಶ್ ಹತ್ಯೆ ಆರೋಪಿ ಕಲಬುರ್ಗಿ ಕೊಲೆಯಲ್ಲೂ ಭಾಗಿ?

By ಒನ್ ಇಂಡಿಯಾ ಡೆಸ್ಕ್
|
Google Oneindia Kannada News

ಬೆಂಗಳೂರು, ಜೂನ್ 7: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಪುಣೆ ಮೂಲದ ಆರೋಪಿ ವಿಚಾರವಾದಿ ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆಯಲ್ಲೂ ಭಾಗಿಯಾಗಿದ್ದ ಎಂದು ಮೂಲಗಳು ತಿಳಿಸಿವೆ.

2015ರ ಆಗಸ್ಟ್ 30ರಂದು ಧಾರವಾಡದಲ್ಲಿರುವ ಕಲಬುರ್ಗಿ ಅವರ ಮನೆಯ ಬಾಗಿಲು ಬಡಿದು, ಬಳಿಕ ಅವರ ಮೇಲೆ ಗುಂಡಿನ ದಾಳಿ ನಡೆಸಿದ ಇಬ್ಬರು ಆರೋಪಿಗಳ ಪೈಕಿ ಪುಣೆಯ ಅಮೋಲ್ ಕಾಳೆ (37) ಒಬ್ಬನಾಗಿದ್ದ ಎಂದು ಪೊಲೀಸ್ ಮೂಲಗಳು ಹೇಳಿವೆ.

ಗೌರಿ ಹತ್ಯೆಗೂ ನಮಗೂ ಸಂಬಂಧವಿಲ್ಲ: ಸನಾತನ ಸಂಸ್ಥೆಗೌರಿ ಹತ್ಯೆಗೂ ನಮಗೂ ಸಂಬಂಧವಿಲ್ಲ: ಸನಾತನ ಸಂಸ್ಥೆ

ಕಲಬುರ್ಗಿ ಅವರು ಕಲ್ಯಾಣ ನಗರದಲ್ಲಿ ವಾಸವಿದ್ದ ಮನೆಗೆ ಬಂದಿದ್ದ ಇಬ್ಬರು ಅಪರಿಚಿತರು, ಕಲಬುರ್ಗಿ ಅವರೊಂದಿಗೆ ಕೆಲ ಹೊತ್ತು ಮಾತನಾಡಿದ್ದರು. ಬಂದಿದ್ದವರು ಕಲಬುರ್ಗಿ ಅವರ ವಿದ್ಯಾರ್ಥಿಗಳು ಇರಬೇಕೆಂದು ಅವರ ಪತ್ನಿ ಉಮಾದೇವಿ ಅವರು ಮನೆಯ ಒಳಭಾಗಕ್ಕೆ ಹೋದರು. ಆಗ ಆರೋಪಿಗಳಲ್ಲಿ ಒಬ್ಬಾತ ಕಲಬುರ್ಗಿ ಅವರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದ.

gauri lankesh murder case one of the accused involved in kalburgi murder police suspects

ಈ ಆರೋಪಿಗಳಲ್ಲಿ ಒಬ್ಬನೆಂದು ಶಂಕಿಸಲಾಗಿರುವ ಅಮೋಲ್ ಕಾಳೆ ಈಗ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದಲ್ಲಿ ವಿಶೇಷ ತನಿಖಾ ದಳದಿಂದ ವಿಚಾರಣೆ ಎದುರಿಸುತ್ತಿದ್ದಾನೆ.

ಗೌರಿ ಹತ್ಯೆ ಚಾರ್ಜ್ ಶೀಟ್, ಭಗವಾನ್ ಹತ್ಯೆ ಸಂಚು ಹಾಗೂ ಬಂಧನ ಸುತ್ತ...ಗೌರಿ ಹತ್ಯೆ ಚಾರ್ಜ್ ಶೀಟ್, ಭಗವಾನ್ ಹತ್ಯೆ ಸಂಚು ಹಾಗೂ ಬಂಧನ ಸುತ್ತ...

ಕಲಬುರ್ಗಿ ಅವರನ್ನು ನೋಡಲು ಬಂದಿದ್ದವರಲ್ಲಿ ಕಾಳೆ ಕೂಡ ಒಬ್ಬನೆಂದು ಕಲಬುರ್ಗಿ ಅವರ ಕುಟುಂಬದ ಆಪ್ತರೊಬ್ಬರು ಗುರುತಿಸಿದ್ದಾರೆ. ಆದರೆ, ಇದು ಖಚಿತವಾಗಲು ನಮಗೆ ಇನ್ನೂ ಹೆಚ್ಚಿನ ಸಾಕ್ಷ್ಯಗಳು ಬೇಕು. ಕಲಬುರ್ಗಿ ಅವರ ಹತ್ಯೆ ಪ್ರಕರಣದಲ್ಲಿ ಪ್ರಾರಂಭಿಕ ತನಿಖೆ ನಡೆಸಿದ ಅಪರಾಧ ತನಿಖಾ ದಳದ ಅಧಿಕಾರಿಗಳನ್ನು ಈ ಸಂಬಂಧ ಭೇಟಿ ಮಾಡಿ ಮಾಹಿತಿ ಪಡೆಯುವುದಾಗಿ ಎಸ್‌ಐಟಿ ಮೂಲಗಳು ತಿಳಿಸಿವೆ.

ಕಾಳೆಯ ಅವರ ಆಪ್ತ ಸಹವರ್ತಿ ನಿಹಾಲ್ ಅಲಿಯಾಸ್ ದಾದಾ ನಾಪತ್ತೆಯಾಗಿದ್ದು, ಆತ ಗೌರಿ ಲಂಕೇಶ್ ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಶಂಕಿಸಲಾಗಿದೆ. ಆತನ ಪತ್ತೆಗಾಗಿ ಎಸ್‌ಐಟಿ ತೀವ್ರ ಹುಡುಕಾಟ ನಡೆಸಿದೆ.

English summary
Police supected that the accused in Journalist Gauri Lankesh murder case was also involved in the murder of scholer MM Kalburgi in 2015.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X